Skip to content
The Believer's Library

Biblica® Open Kannada Contemporary Version 2022

Matthew 12 OKCV

Show OKCV only
Verse × ×
1 At that time Jesus went through the grainfields on the Sabbath. His disciples were hungry and began to pluck heads of grain and eat them. ಯೇಸು ಒಂದು ಸಬ್ಬತ್ ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
2 Seeing this, the Pharisees said to him, "Look—your disciples are doing what's unlawful on the Sabbath." ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.
3 He said to them, "Haven't you read what David did when he and his companions were hungry?" ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?
4 how he entered the house of our Father and ate the Presence bread, unlawful for him and his companions, reserved only for priests? ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?
5 "Or haven't you read in the Law that on the Sabbath, priests in the temple break the Sabbath and are guiltless? ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?
6 I tell you, something greater than the temple is here. ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
7 If you knew what 'I want mercy, not sacrifice' means, you wouldn't have condemned the blameless. ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.
8 For the Son of Man is Lord of the Sabbath." ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.
9 He went on from there and entered their synagogue. ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು.
10 A man with a withered hand was there. They asked him, "Is it lawful to heal on the Sabbath?"—hoping to accuse him. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.
11 He said to them, "Who among you with a sheep, if it falls in a pit on the Sabbath, won't grab and pull it out? ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?
12 How much more is a person worth than a sheep! So it's lawful to do good on the Sabbath." ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು.
13 Then he told him, "Stretch out your hand." He stretched it out, and it was restored, healthy like the other. ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.
14 But the Pharisees went out and plotted how to destroy him. ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.
15 Jesus, aware of this, withdrew from there. And many followed him, and he healed them all, ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.
16 and he ordered them not to tell anyone about him. ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.
17 This was to fulfill what was spoken by the prophet Isaiah: ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:
18 "Look, my servant—Jesus—whom I have chosen, my beloved in whom my soul delights. I will put my Spirit upon him, and he will proclaim justice to the nations. “ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.
19 He will not quarrel or shout, nor will anyone hear his voice in the streets. ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ.
20 A bruised reed he will not break, and a smoldering wick he will not quench, until he brings justice to victory; ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.
21 and in his name the nations will put their hope." ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”
22 Then someone brought him a blind, mute demon-oppressed man, and he healed him so the man could speak and see. ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.
23 And all the crowds were amazed and said, "Can this be the Son of David?" ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.
24 But hearing this, the Pharisees said, "This man drives out demons only by Beelzebul, prince of demons." ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.
25 Knowing their thoughts, he said to them, "Every kingdom divided against itself is ruined, and no city or house divided against itself will stand. ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.
26 And if Satan casts out Satan, he is divided against himself. How then will his kingdom stand? ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?
27 If I drive out demons by Beelzebul, by whom do your sons drive them out? So they will be your judges. ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.
28 But if I drive out demons by the Spirit of our Father, then the kingdom of our Father has reached you. ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
29 Or how can someone enter a strong man's house and carry off his goods, unless he first restrains the strong man? Then he can loot his house. “ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.
30 Whoever is not with me is against me, and whoever does not gather with me scatters. “ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.
31 So I tell you, every sin and blasphemy will be forgiven people, but blasphemy against the Spirit will not be forgiven. ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
32 Whoever speaks against the Son of Man will be forgiven; whoever speaks against the Holy Spirit won't be forgiven—neither in this age nor the age to come. ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ.
33 Make the tree good and its fruit good, or the tree bad and its fruit bad, for a tree is known by its fruit. “ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.
34 You brood of vipers! How can you speak good things since you're evil? For the mouth speaks the heart's overflow. ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
35 A good person produces good from a good treasure; an evil person produces evil from an evil treasure. ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.
36 I tell you, on judgment day people will answer for every careless word they speak, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
37 for by your words you will be justified, and by your words you will be condemned." ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.
38 Then some scribes and Pharisees said, "Teacher, we want a sign from you." ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.
39 He answered, "This evil, adulterous generation demands a sign. None will be given it except the sign of the prophet Jonah. ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.
40 As Jonah was three days and three nights in the great fish's belly, so the Son of Man will be three days and three nights in the earth's heart. ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.
41 Ninevites will rise at the judgment with this generation and condemn it, for they repented at Jonah's preaching, and something greater than Jonah is here. ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.
42 The queen of the South will rise at the judgment with this generation and condemn it, for she came from earth's ends to hear Solomon's wisdom—and look, something greater than Solomon is here. ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.
43 When an unclean spirit leaves a person, it travels through dry places seeking rest, and finds none. “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,
44 Then it says, 'I will return to my house I left.' Coming, it finds it empty, swept, and put in order. ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
45 Then it goes and brings along seven other spirits more evil than itself; they enter and settle there, and that person ends up worse off than before. So it will be with this evil generation." ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.
46 While he was still speaking to the crowds, his mother and brothers stood outside, wanting to speak with him. ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
47 Someone told him, "Look, your mother and your brothers are standing outside, wanting to speak to you." ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.
48 He answered the one who told him, "Who is my mother, and who are my brothers?" ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,
49 And stretching out his hand toward his disciples, he said, "Here are my mother and my brothers! ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.
50 For whoever does the will of my Father in heaven is my brother and sister and mother." ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]