Skip to content
The Believer's Library

Biblica® Open Kannada Contemporary Version 2022

Matthew 13 OKCV

Show OKCV only
Verse × ×
1 On that day Jesus went out of the house and sat down beside the sea. ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟುಹೋಗಿ ಸರೋವರದ ಬಳಿಯಲ್ಲಿ ಕುಳಿತುಕೊಂಡರು.
2 Large crowds gathered around him, so he got in a boat and sat, while the whole crowd stood on the shore. ಆಗ ಜನರ ದೊಡ್ಡ ಸಮೂಹವು ಯೇಸುವಿನ ಬಳಿಗೆ ಕೂಡಿಬಂದದ್ದರಿಂದ ಅವರು ದೋಣಿಯನ್ನು ಹತ್ತಿ ಕುಳಿತುಕೊಂಡರು, ಆ ಸಮೂಹದವರೆಲ್ಲಾ ದಡದ ಮೇಲೆ ನಿಂತಿದ್ದರು.
3 And he told them many things in parables, saying: "Look, a sower went out to sow. ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;
4 And as he sowed, some seed fell along the path, and the birds came and devoured it. ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
5 Other seed fell on rocky ground with little soil, and sprang up quickly since the soil lacked depth. ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.
6 When the sun rose, the plants were scorched; since they had no root, they withered. ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.
7 Other seed fell among thorns, and the thorns grew up and choked it. ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
8 Other seed fell on good soil, producing grain: some a hundredfold, some sixty, some thirty. ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.
9 Whoever has ears, let them hear." ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”
10 Then the disciples came to him and asked, "Why do you speak to them in parables?" ತರುವಾಯ ಶಿಷ್ಯರು ಬಂದು ಯೇಸುವಿಗೆ, “ನೀವು ಸಾಮ್ಯಗಳಲ್ಲಿ ಅವರೊಡನೆ ಮಾತನಾಡುವುದೇಕೆ?” ಎಂದು ಕೇಳಿದರು.
11 He said, "You've been given to know the secrets of the kingdom of our Father; they have not. ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.
12 Whoever has will be given more and have plenty; whoever has none loses even what he has. ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.”
13 This is why I speak to them in parables: they look but don't see; they listen but don't hear or understand. ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ.
14 In them Isaiah's prophecy is fulfilled: 'You will hear and hear, yet never understand; you will see and see, yet never perceive.' ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.
15 For this people's heart has grown calloused; they hardly hear with their ears, and they have closed their eyes—otherwise they might see with their eyes, hear with their ears, understand with their heart, and turn, and I would heal them.' ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.
16 But blessed are your eyes, for they see, and your ears, for they hear. ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.
17 I assure you: many prophets and righteous people longed to see what you see, and didn't; to hear what you hear, and didn't. ನಾನು ಸತ್ಯವಾಗಿ ನಿಮಗೆ ಹೇಳುತ್ತೇನೆ, ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ.
18 Listen, then, to the parable of the sower. “ಆದ್ದರಿಂದ ಬಿತ್ತುವವನ ಸಾಮ್ಯದ ಅರ್ಥವನ್ನು ನೀವು ಕೇಳಿರಿ:
19 Everyone who hears the kingdom's word and doesn't grasp it—the evil one comes and snatches what was sown in his heart. This is the seed sown beside the path. ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.
20 Seed sown on rocky ground is the one who hears the word, immediately receiving it with joy, ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.
21 but having no root in themselves, they don't last; when trouble or persecution comes because of the word, they quickly fall away. ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.
22 The one sown among thorns hears the word, but worry over this age and wealth's deceit choke it, making it unproductive. ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.
23 But the seed sown on good soil hears the word and understands it. It bears fruit—100, sixty, or thirty times what was sown." ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”
24 He gave them another parable: "The kingdom of our Father is like a man who sowed good seed in his field. ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.
25 But while everyone slept, his enemy came, sowed weeds among the wheat, and left. ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು.
26 When the wheat sprouted and produced grain, then the weeds appeared as well. ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು.
27 The owner's servants came saying, 'Master, didn't you sow good seed in your field? Where then did the weeds come from?' “ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.
28 'An enemy did this,' he replied. 'So do you want us to go pull them up?' the servants asked him. “ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.
29 'No,' he said, 'because while you are pulling the weeds, you may uproot the wheat with them. “ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ.
30 Let both grow together until harvest. At harvest time I'll tell the reapers: Gather the weeds first, bind them in bundles to burn; then gather the wheat into my barn.'" ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”
31 He told them another parable: "The kingdom of our Father is like a mustard seed a man took and planted in his field. ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.
32 Though the smallest of all seeds, when grown it becomes the largest of garden plants, a tree where birds come to nest in its branches." ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.”
33 He gave them another parable: "The kingdom of our Father is like yeast a woman took and mixed into about twenty-five pounds of flour, until it spread through all the dough." ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”
34 Jesus said all these things to the crowds in parables; he said nothing to them without a parable. ಯೇಸು ಇವೆಲ್ಲವನ್ನು ಜನಸಮೂಹದೊಂದಿಗೆ ಸಾಮ್ಯಗಳಲ್ಲಿಯೇ ಹೇಳಿದರು; ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ.
35 This fulfilled what was spoken through the prophet: "I will open my mouth in parables; I will utter what's been hidden since the world was founded." ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”
36 Then he left the crowds and entered the house. His disciples approached him and said, "Explain to us the parable of the weeds in the field." ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.
37 He answered, "The one who sowed the good seed is the Son of Man. ಯೇಸು ಉತ್ತರವಾಗಿ ಅವರಿಗೆ, “ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು.
38 The field is the world. The good seed is the kingdom's children; the weeds are the evil one's children. ಹೊಲವು ಈ ಲೋಕ; ಒಳ್ಳೆಯ ಬೀಜವು ದೇವರ ರಾಜ್ಯದ ಮಕ್ಕಳು; ಕಳೆಯು ಕೆಡುಕನ ಮಕ್ಕಳಾಗಿದ್ದಾರೆ.
39 The enemy who sowed them is the devil; the harvest is the end of the age; the harvesters are angels. ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.
40 As the weeds are gathered and burned in fire, so it will be at the end of the age. “ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು.
41 The Son of Man will send his angels to weed out of his kingdom everything that causes sin and all who do evil. ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,
42 They will throw them into the blazing furnace, where there is weeping and grinding of teeth. ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.
43 Then the righteous will shine like the sun in their Father's kingdom. The one with ears should listen." ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.
44 The kingdom of our Father is like treasure hidden in a field. A man found it, hid it again, then joyfully sold all he had to buy that field. “ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
45 "Again, the kingdom of our Father is like a merchant searching for fine pearls. “ಪರಲೋಕ ರಾಜ್ಯವು ಒಳ್ಳೆಯ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
46 Finding one priceless pearl, he went and sold all he had and bought it. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.
47 Again, our Father's kingdom is like a net cast into the lake, gathering fish of every kind. “ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
48 When full, the fishermen pulled it ashore, sat down, and collected the good fish in baskets, throwing out the bad. ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ.
49 So it will be at the age's end: angels will go out and separate the wicked from among the righteous, ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ,
50 and throw them into the blazing furnace, where they will weep and grind their teeth." ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು,” ಎಂದು ಹೇಳಿದರು.
51 "Have you understood all these things?" "Yes," they replied. ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು.
52 He said to them, "Every teacher of the law trained for our Father's kingdom is like a homeowner who brings treasures new and old out of his storeroom." ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.
53 When Jesus had finished these parables, he moved on from there. ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟು ಹೋದರು.
54 Returning to his hometown, he taught in their synagogue, and they were amazed: "Where does this man get this wisdom and these mighty works? ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು?
55 Isn't this the carpenter's son? Isn't his mother named Mary, and his brothers James, Joseph, Simon, and Judas? ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ?
56 Aren't all his sisters here with us? Where then did this man get all these things?" ಈತನ ತಂಗಿಯರೆಲ್ಲರೂ ನಮ್ಮೊಂದಿಗೆ ಇದ್ದಾರಲ್ಲವೇ? ಹಾಗಾದರೆ, ಇವೆಲ್ಲವು ಈತನಿಗೆ ಎಲ್ಲಿಂದ ಬಂದವು?” ಎಂದು ಮಾತನಾಡಿಕೊಂಡರು.
57 They took offense at him. But Jesus said to them, "A prophet is honored everywhere except in his hometown and in his own household." ಅವರು ಯೇಸುವನ್ನು ತಾತ್ಸಾರ ಮಾಡಿದರು. ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.
58 He didn't do many miracles there because of their lack of faith. ಯೇಸು ಅವರ ಅಪನಂಬಿಕೆಯ ದೆಸೆಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]