Skip to content
The Believer's Library

Biblica® Open Kannada Contemporary Version 2022

Matthew 16 OKCV

Show OKCV only
Verse × ×
1 The Pharisees and Sadducees came to test him, asking him to show them a sign from heaven. ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.
2 He replied, "When evening comes, you say, 'The weather will be fair, for the sky is red.' ಯೇಸು ಉತ್ತರವಾಗಿ ಅವರಿಗೆ, “ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ, ‘ಒಳ್ಳೆಯ ಹವಾಮಾನ ಇರುವುದು’ ಎಂದೂ
3 "And in the morning, 'Stormy today, for the sky is red and gloomy.' You know how to read the sky's face, but can't read the times' signs. ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.
4 "An evil, unfaithful generation seeks a sign; no sign will be given except the sign of Jonah." Then he left them and went away. ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.
5 When the disciples crossed to the other side, they had forgotten to bring bread. ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು.
6 Jesus said to them, "Watch out and beware of the yeast of the Pharisees and Sadducees." ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.
7 They discussed this among themselves and said, "It is because we brought no bread." ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.
8 Aware of this, Jesus said, "Why discuss among yourselves, you of little faith, that you have no bread? ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?
9 Still, don't you understand? Don't you remember the five loaves for the 5,000, and how many baskets you collected? ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ, ಎಷ್ಟು ಬುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
10 "Or the seven loaves for the 4,000, and how many baskets you gathered? ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಬುಟ್ಟಿಗಳನ್ನು ತುಂಬಿದಿರಿ?
11 "Why don't you understand I wasn't talking to you about bread? Watch out for the yeast of the Pharisees and Sadducees." ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.
12 Then they understood that he had not told them to beware of the yeast in bread, but of the Pharisees' and Sadducees' teaching. ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.
13 Arriving in the area of Caesarea Philippi, Jesus asked his disciples, "Who do people say the Son of Man is?" ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.
14 They said, "Some say John the Baptist, others Elijah, still others Jeremiah or one of the prophets." ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.
15 He said to them, "But who do you say that I am?" ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು.
16 Simon Peter replied, "You are the Christ, the Son of the living Father." ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.
17 Jesus replied, "Simon son of Jonah, you are blessed—flesh and blood didn't reveal this to you, but my Father in heaven. ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.
18 "And I tell you: you are Peter, and on this rock I will build my church; the gates of the grave will not overpower it. ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.
19 "I will give you the keys of our Father's kingdom; whatever you bind on earth will have been bound in heaven, and whatever you release on earth will have been released in heaven." ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.
20 Then he strictly ordered the disciples to tell no one that he was the Christ. ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.
21 From then on, Jesus began telling his disciples he must go to Jerusalem, suffer much from the elders, chief priests, and scribes, be killed, and be raised on the third day. ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.
22 Peter took him aside and rebuked him: "Never, Lord! This will never happen to you." ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.
23 But he turned and told Peter, "Get behind me, Satan! You are an obstacle to me, because you're not thinking about what our Father cares about, but what people care about." ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.
24 Then Jesus told his disciples, "Whoever wants to come after me must deny himself, take up his cross, and follow me. ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
25 "For whoever wants to save his life will lose it, but whoever loses his life for my sake will find it. ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
26 "What good is it if a person gains the whole world but loses his soul? Or what can a person give in exchange for his soul? ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?
27 "For the Son of Man is about to come in his Father's glory with his angels, and will then repay each person according to what they have done. ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.
28 "Truly I tell you: some standing here will not taste death until they see the Son of Man coming in his kingdom." “ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]