Skip to content
The Believer's Library

Biblica® Open Kannada Contemporary Version 2022

Matthew 17 OKCV

Show OKCV only
Verse × ×
1 Six days later, Jesus took Peter, James, and John his brother, and led them up a high mountain alone. ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.
2 He was transfigured before them: his face shone like the sun, his clothes turned white as light. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅವರ ಮುಖವು ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಬೆಳಗಿತು.
3 Suddenly, Moses and Elijah appeared to them, talking with him. ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
4 Peter said to Jesus, "Lord, it's good we're here. If you want, I'll build three shelters—one for you, one for Moses, and one for Elijah." ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.
5 While he was still speaking, a bright cloud covered them, and a voice from the cloud said, "This is my beloved Son; I delight in him. Listen to him." ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.
6 When the disciples heard it, they fell on their faces and were terrified. ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
7 But Jesus came and touched them, "Rise, and do not be afraid." ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.
8 When they looked up, they saw only Jesus. ಅವರು ತಮ್ಮ ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
9 Descending the mountain, Jesus ordered them, "Tell no one the vision until the Son of Man is raised from the dead." ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.
10 The disciples asked him, "Then why do the scribes say that Elijah must come first?" ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
11 He answered, "Elijah does come, and he will restore all things. ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ.
12 But I tell you, Elijah has already come, and they didn't recognize him, but treated him as they pleased. So too the Son of Man is about to suffer at their hands." ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
13 Then the disciples understood that he was speaking to them about John the Baptist. ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
14 And when they came to the crowd, a man came up to him, kneeling before him, ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,
15 and saying, "Lord, have mercy on my son, for he has seizures and suffers terribly, often falling into fire, often into water. “ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
16 And I brought him to your disciples, and they could not heal him." ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು,” ಎಂದು ಹೇಳಿದನು.
17 Jesus answered, "Unfaithful, twisted generation! How long must I remain with you, how long put up with you? Bring him here to me." ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
18 And Jesus rebuked the demon, and it came out of him, and the boy was healed instantly. ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.
19 Then the disciples came to Jesus privately and said, "Why could we not cast it out?" ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
20 He said to them, "Because your faith is small. Truly I tell you: with faith like a mustard seed, you will tell this mountain, 'Move from here to there,' and it will move. Nothing will be impossible for you." ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.
21 Not in this edition ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.
22 While gathering in Galilee, Jesus told them, "The Son of Man is about to be handed over to men, ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.
23 they will kill him, and on the third day he will be raised." They were deeply grieved. ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.
24 Arriving in Capernaum, the temple tax collectors approached Peter and asked, "Doesn't your teacher pay the temple tax?" ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು.
25 He said, "Yes." When he entered the house, Jesus spoke first: "What do you think, Simon? From whom do earthly kings collect tolls or taxes—from their own sons, or from others?" ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.
26 And when Peter said, "From others," Jesus said to him, "Then the sons are free." “ಪರರಿಂದ,” ಎಂದು ಪೇತ್ರನು ಹೇಳಿದನು. ಯೇಸು ಅವನಿಗೆ, “ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ.
27 "But so we don't offend them, go to the sea, cast a hook, and take the first fish that comes up. Open its mouth and you'll find a coin. Take it and give it to them for me and you." ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]