Skip to content
The Believer's Library

Biblica® Open Kannada Contemporary Version 2022

Matthew 18 OKCV

Show OKCV only
Verse × ×
1 At that time the disciples came to Jesus, asking, "Who, then, is greatest in the kingdom of our Father?" ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?” ಎಂದು ಕೇಳಿದರು.
2 Calling a little child to him, he placed the child among them, ಆಗ ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಬಳಿಗೆ ಕರೆದು, ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ,
3 and said, "I tell you truly: unless you turn and become like little children, you'll never enter our Father's kingdom. “ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
4 Whoever therefore humbles himself like this little child is the greatest in the kingdom of our Father. ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.
5 And whoever welcomes one such little child in my name welcomes me." ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ.
6 "But whoever trips up one of these little ones who believe in me—better to hang a heavy millstone on his neck and drown him in the depths of the sea." “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.
7 "Disaster for the world because of things that cause stumbling! They must come, but disaster for whoever brings them. ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!
8 If your hand or foot makes you stumble, cut it off, throw it away. Better to enter life crippled or lame than keep both hands or both feet and be thrown into the eternal fire." ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.
9 If your eye trips you up, tear it out and throw it away. Better to enter life with one eye than to keep both and be thrown into hell's fire. ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.
10 "See that you don't look down on one of these little ones. I tell you, their angels in heaven always see my Father's face in heaven." “ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.
11 Not in this edition ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.
12 "What do you think? If a man has one hundred sheep and one wanders off, won't he leave the ninety-nine on the hills and go look for the one that wandered? “ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ?
13 If he finds it, I assure you: he rejoices over it more than over the ninety-nine that never strayed. ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
14 So it is not your Father in heaven's will that one of these little ones perish.' ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬರಾದರೂ ನಾಶವಾಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
15 "If your brother sins against you, go, show him his fault—you and he alone. If he listens, you've won your brother over. “ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.
16 But if he won't listen, bring one or two more with you, so every matter stands by the mouth of two or three witnesses. ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’
17 If he won't listen to them, tell the church. If he won't listen to the church either, treat him like an outsider or a tax collector. ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
18 Truly I tell you, whatever you bind on earth will be bound in heaven, and whatever you loose on earth, loosed in heaven. “ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
19 Again, truly I tell you: if two of you on earth agree about anything they ask, my Father in heaven will do it for them. “ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.
20 For where two or three are gathered together in my name, there I am among them." ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.
21 Then Peter came to Jesus: "Lord, how many times must I forgive my brother who sins against me? Up to seven times?" ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?” ಎಂದು ಕೇಳಿದನು.
22 Jesus answered, "I tell you, not seven times, but seventy-seven times. ಅದಕ್ಕೆ ಯೇಸು, “ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.
23 So the kingdom of our Father is like a king who wanted to settle accounts with his servants. “ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
24 When he began settling accounts, a man owing a fortune was brought to him. ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
25 Since he could not pay, his master ordered him and his wife, children, and all he had sold, and the debt repaid." ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.
26 So the servant knelt before him, pleading, "Be patient with me, and I will repay everything. “ಆಗ ಆ ಸೇವಕನು ಮೊಣಕಾಲೂರಿ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ನಿನ್ನ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಹೇಳಿದನು.
27 The master of that servant, his heart moved with compassion, released him and forgave him the debt." ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
28 "That servant then went out, found a fellow servant who owed him one hundred days' wages, grabbed him, and began choking him: 'Pay back what you owe me!'" “ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.
29 So his fellow servant knelt and pleaded with him, "Be patient with me; I'll repay you. “ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.
30 But he refused, went and threw him into prison until he paid the debt. “ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
31 Seeing what had happened, his fellow servants were deeply grieved, went, and told their master all that had happened." ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.
32 Then the master summoned him. "Wicked servant," he said, "I forgave you all that debt because you begged me. “ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು.
33 Shouldn't you also have shown your fellow servant mercy, as I showed you mercy? ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ,
34 Furious, his master handed him to the torturers until he repaid the whole debt. ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು.
35 My heavenly Father will do the same to you, unless each forgives his brother from the heart." “ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]