Skip to content
The Believer's Library

Biblica® Open Kannada Contemporary Version 2022

Matthew 19 OKCV

Show OKCV only
Verse × ×
1 When Jesus finished these words, he left Galilee and went into the region of Judea, across the Jordan. ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಗಲಿಲಾಯದಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು.
2 Large crowds followed him, and he healed them there. ಜನರ ದೊಡ್ಡ ಸಮೂಹಗಳು ಅವರನ್ನು ಹಿಂಬಾಲಿಸಿದವು, ಯೇಸು ಅವರನ್ನು ಅಲ್ಲಿ ಸ್ವಸ್ಥಮಾಡಿದರು.
3 Pharisees came to test him, asking, "Is it lawful for a man to divorce his wife for any cause?" ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.
4 He answered, "Haven't you read that our Father, who made them at the beginning, made them male and female, ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.
5 and said, 'So a man will leave his father and mother and cling to his wife, and the two will become one flesh'? ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’ ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ?
6 So they are no longer two but one flesh; therefore, let no one separate what our Father has joined." ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು,” ಎಂದು ಹೇಳಿದರು.
7 They said to him, "Why then did Moses command that a man give a divorce certificate and send her away?" ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟು ಬಿಡಬಹುದೆಂದು ಮೋಶೆಯು ಏಕೆ ಅಪ್ಪಣೆಕೊಟ್ಟನು?” ಎಂದು ಕೇಳಿದರು.
8 He told them, "Moses let you divorce your wives because your hearts were hard, but it wasn't like that from the beginning. ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ದೆಸೆಯಿಂದ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ನಿಮಗೆ ಅನುಮತಿ ಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ.
9 I tell you: whoever divorces his wife—except for sexual sin—and marries another commits adultery." ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ, ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು, ಮತ್ತೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರ ಮಾಡುವವನಾಗಿದ್ದಾನೆ,” ಎಂದರು.
10 The disciples said to him, "If that's the case between husband and wife, it's better not to marry." ಆಗ ಶಿಷ್ಯರು ಯೇಸುವಿಗೆ, “ಸತಿಪತಿಯರ ಸಂಬಂಧ ಹೀಗಿರುವುದಾದರೆ, ಮದುವೆ ಆಗದಿರುವುದೇ ಒಳ್ಳೆಯದು,” ಎಂದರು.
11 He said to them, "Not everyone can accept this word—only those it's given to. ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು.
12 There are eunuchs born that way from their mother's womb; there are eunuchs made that way by others; and there are eunuchs who made themselves so for the kingdom of our Father. Let the one who can accept this, accept it." ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.
13 Then little children were brought to him so he could lay hands on them and pray, but the disciples rebuked those bringing them. ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
14 But Jesus said, "Let the little children come to me—don't stop them, for the kingdom of our Father belongs to ones like these." ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು.
15 And he laid his hands on them and went on from there. ತರುವಾಯ ಯೇಸು ಮಕ್ಕಳ ಮೇಲೆ ತಮ್ಮ ಕೈಯಿಟ್ಟು ಆಶೀರ್ವದಿಸಿ ಅಲ್ಲಿಂದ ಹೊರಟು ಹೋದರು.
16 Just then a man approached him and asked, "Teacher, what good must I do to obtain eternal life?" ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.
17 He said to him, "Why ask me about what is good? Only one is good. If you want to enter life, keep the commandments." “ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು.
18 "Which ones?" he asked. Jesus said, "Do not murder, do not commit adultery, do not steal, do not testify falsely, ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು,
19 honor your father and mother, and love your neighbor as yourself." ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,” ಎಂದು ಹೇಳಿದರು.
20 The young man said to him, "All these I have kept. What do I still lack?" ಆ ಯೌವನಸ್ಥನು ಯೇಸುವಿಗೆ, “ಇವೆಲ್ಲವನ್ನೂ ನಾನು ಕೈಗೊಂಡಿದ್ದೇನೆ, ಇನ್ನು ನನಗೇನು ಕಡಿಮೆಯಾಗಿದೆ?” ಎಂದು ಕೇಳಿದನು.
21 Jesus told him, "If you want to be complete, go, sell your possessions and give to the poor—you'll have treasure in heaven—then come, follow me." ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.
22 When the young man heard this, he went away grieving, because he had great wealth. ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.
23 Jesus said to his disciples, "Truly, I tell you: a rich person will hardly enter our Father's kingdom. ಆಗ ಯೇಸು ತಮ್ಮ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
24 I tell you again: a camel fits through the eye of a needle easier than a rich person enters our Father's kingdom." ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.
25 When the disciples heard this, they were greatly astonished and asked, "Who then can be saved?" ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು.
26 Jesus looked at them and said, "This is impossible for people, but everything is possible with our Father." ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.
27 Then Peter said to him, "Look, we've left everything and followed you. What then will we have?" ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು.
28 Jesus told them, "Truly: in the renewal, when the Son of Man sits on his glorious throne, you who followed me will also sit on twelve thrones, judging the twelve tribes of Israel. ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.
29 "Everyone who has left houses or brothers or sisters or father or mother or children or fields for my name will receive one hundred times more and inherit eternal life. ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.
30 But many who are first will be last, and many who are last will be first." ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]