Skip to content
The Believer's Library

Biblica® Open Kannada Contemporary Version 2022

Matthew 20 OKCV

Show OKCV only
Verse × ×
1 "For the kingdom of our Father is like a landowner who went out at dawn to hire workers for his vineyard. “ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.
2 He agreed to pay the workers a full day's wage and sent them into his vineyard. ಅವನು ದಿನಕ್ಕೆ ಒಂದು ಬೆಳ್ಳಿನಾಣ್ಯ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿಕೊಂಡು ತನ್ನ ದ್ರಾಕ್ಷಿಯ ತೋಟಕ್ಕೆ ಅವರನ್ನು ಕಳುಹಿಸಿಕೊಟ್ಟನು.
3 About nine o'clock in the morning he went out and saw others standing idle in the marketplace. “ಅವನು ಸುಮಾರು ಒಂಬತ್ತು ಗಂಟೆಗೆ ಹೊರಗೆ ಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವುದನ್ನು ಕಂಡು,
4 He told them, 'You too, go into the vineyard; I'll pay you whatever's right.' So they went. ಅವರಿಗೆ, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುತ್ತೇನೆ,’ ಎಂದು ಹೇಳಿದನು.
5 Going out again about noon and about three in the afternoon, he did the same. ಆಗ ಅವರು ಹೊರಟು ಹೋದರು. “ಅವನು ಸುಮಾರು ಹನ್ನೆರಡು ಗಂಟೆಗೂ ಅನಂತರ ಮೂರು ಗಂಟೆಗೂ ತಿರುಗಿ ಹೋಗಿ ಹಾಗೆಯೇ ಮಾಡಿದನು.
6 About five in the afternoon, he went out and found others standing there. He asked, 'Why have you stood here idle all day?'" ತರುವಾಯ ಸುಮಾರು ಐದು ಗಂಟೆಗೆ ಅವನು ಹೊರಗೆ ಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ‘ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವುದೇಕೆ?’ ಎಂದು ಕೇಳಿದನು.
7 "They said, 'Because no one hired us.' He said, 'You also go into the vineyard.' “ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.
8 "When evening came, the vineyard owner told his foreman, 'Call the workers and pay them their wages, from the last to the first.' “ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು.
9 And when those hired about five o'clock came, each of them received a full day's wage. “ಆಗ ಐದು ಗಂಟೆಗೆ ಕರೆದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.
10 When the first came, they thought they would get more, but each got a full day's wage too. ಆಗ ಮೊದಲು ಬಂದವರು, ತಮಗೆ ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಲ್ಲಿ ಪ್ರತಿಯೊಬ್ಬನಿಗೂ ಅದೇ ರೀತಿಯಲ್ಲಿ ಒಂದೊಂದೇ ಬೆಳ್ಳಿನಾಣ್ಯ ಸಿಕ್ಕಿತು.
11 And on receiving it they grumbled at the landowner, ಅವರು ಅದನ್ನು ತೆಗೆದುಕೊಂಡಾಗ, ಯಜಮಾನನ ವಿರೋಧವಾಗಿ ಗೊಣುಗುಟ್ಟುತ್ತಾ,
12 saying, 'These last worked only one hour, yet you made them equal to us, who bore the day's burden and the scorching heat.' ‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು.
13 "He answered one of them, 'Friend, I'm not wronging you. Didn't you agree with me for a full day's wage?' “ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ?
14 Take what's yours and go. I want to give this last worker the same as you. ನಿನ್ನ ಕೂಲಿ ತೆಗೆದುಕೊಂಡು ಹೋಗು. ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವುದು ನನ್ನ ಇಷ್ಟ.
15 Can't I do what I want with what's mine? Or are you jealous because I'm generous? ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.
16 So the last will be first, and the first last." “ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.
17 As Jesus was going up to Jerusalem, he took the twelve aside and said to them on the way, ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ಪ್ರತ್ಯೇಕವಾಗಿ ಕರೆದು ಅವರಿಗೆ,
18 "See, we are going up to Jerusalem, and the Son of Man will be given over to the chief priests and scribes, who will condemn him to death, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸುವರು.
19 and hand him over to the Gentiles to mock and flog and crucify—and on the third day he will be raised." ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.
20 Then Zebedee's sons' mother came to him with her sons, kneeling to ask something of him. ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು.
21 He asked her, "What do you want?" She said, "Say my two sons will sit one at your right, one at your left, in your kingdom." ಯೇಸು, “ನಿನ್ನ ಬೇಡಿಕೆ ಏನು?” ಎಂದು ಕೇಳಿದರು. “ನಿಮ್ಮ ರಾಜ್ಯದಲ್ಲಿ ಈ ನನ್ನ ಇಬ್ಬರು ಪುತ್ರರಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹಿಸಬೇಕು,” ಎಂದು ಬೇಡಿಕೊಂಡಳು.
22 But Jesus replied, "You don't know what you're asking. Can you drink the cup I am about to drink?" "We can," they said. ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು.
23 He said, "You will drink my cup, but seating at my right and left is not mine to give—it belongs to those my Father has prepared it for." ಅದಕ್ಕೆ ಯೇಸು, “ನನ್ನ ಪಾತ್ರೆಯಿಂದ ನೀವು ಕುಡಿಯುವಿರಿ, ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ, ನನ್ನ ತಂದೆಯಿಂದ ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದು ಹೇಳಿದರು.
24 When the ten heard this, they were angry at the two brothers. ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
25 Jesus called them over and said, "You know the rulers of the Gentiles lord it over them, and their powerful men hold authority over them. ಆದರೆ ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು, “ಯೆಹೂದ್ಯರಲ್ಲದವರ ಅಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆಂದೂ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರವನ್ನು ನಡೆಸುತ್ತಾರೆಂದೂ ನಿಮಗೆ ತಿಳಿದಿದೆ.
26 Not so among you. Rather, whoever wants to be great among you must be your servant, ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.
27 and whoever wants to be first among you must be your slave, ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ, ಅವನು ನಿಮ್ಮ ಆಳಾಗಿರಲಿ.
28 just as the Son of Man came not to be served but to serve, and to give his life as a ransom for many." ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.
29 And as they went out of Jericho, a great crowd followed him. ಯೇಸು ಮತ್ತು ಅವರ ಶಿಷ್ಯರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ, ಜನರು ದೊಡ್ಡ ಸಮೂಹವಾಗಿ ಯೇಸುವನ್ನು ಹಿಂಬಾಲಿಸಿದರು.
30 Two blind men sitting by the road heard Jesus was passing and cried out, "Lord, have mercy on us, Son of David!" ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಯೇಸು ಹಾದು ಹೋಗುತ್ತಿದ್ದಾರೆಂದು ಕೇಳಿ, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಕೂಗಿ ಹೇಳಿದರು.
31 The crowd scolded them to be quiet, but they shouted louder, "Have mercy on us, Lord, Son of David!" ಅವರು ಸುಮ್ಮನಿರುವಂತೆ ಜನರ ಸಮೂಹವು ಅವರನ್ನು ಗದರಿಸಿತು. ಆದರೂ ಅವರು, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.
32 And stopping, Jesus called them and said, "What do you want me to do for you?" ಆಗ ಯೇಸು ನಿಂತು, ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು.
33 They said to him, "Lord, let our eyes be opened." ಅವರು ಯೇಸುವಿಗೆ, “ಕರ್ತದೇವರೇ, ನಮಗೆ ಕಣ್ಣು ಕಾಣುವಂತೆ ಮಾಡು,” ಎಂದರು.
34 And Jesus, moved with compassion, touched their eyes, and immediately they recovered their sight and followed him. ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದರು. ಕೂಡಲೇ ಅವರ ಕಣ್ಣುಗಳು ದೃಷ್ಟಿಯನ್ನು ಪಡೆದವು. ಅವರೂ ಯೇಸುವನ್ನು ಹಿಂಬಾಲಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]