Skip to content
The Believer's Library

Biblica® Open Kannada Contemporary Version 2022

Matthew 21 OKCV

Show OKCV only
Verse × ×
1 As they neared Jerusalem and reached Bethphage, at the Mount of Olives, Jesus sent two disciples ahead, ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ,
2 telling them, "Go to the village ahead of you. You'll at once find a donkey tied, with a colt beside her. Untie them and bring them to me. ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ.
3 If anyone says anything to you, say, 'The Lord needs them,' and the Lord will send them at once." ಯಾವನಾದರೂ ನಿಮಗೆ ಏನಾದರೂ ಕೇಳಿದರೆ, ನೀವು ಅವನಿಗೆ, ‘ಇವು ಕರ್ತದೇವರಿಗೆ ಅವಶ್ಯವಾಗಿವೆ’ ಎಂದು ಹೇಳಿರಿ. ಆಗ ಅವನು ಅವುಗಳನ್ನು ಕೂಡಲೇ ಕಳುಹಿಸುವನು,” ಎಂದು ಹೇಳಿದರು.
4 This took place to fulfill what the prophet had said: ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,
5 "Say to the daughter of Zion, 'Look, your king is coming to you, humble and mounted on a donkey, on a colt, the foal of a beast of burden.'" “ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”
6 The disciples went and did as Jesus had directed them. ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ ಮಾಡಿದರು.
7 They brought the donkey and colt, put their cloaks on the animals, and Jesus sat on the cloaks. ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು.
8 Most of the crowd spread their cloaks on the road; others cut branches from the trees and spread them on the road. ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.
9 The crowds ahead of him and behind him kept shouting, "Hosanna to the Son of David! Blessed is he who comes in the name of our Father! Hosanna in the highest!" ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.
10 And when he entered Jerusalem, the whole city was stirred, asking, "Who is this?" ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು.
11 And the crowds said, "This is the prophet Jesus, from Nazareth of Galilee." ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.
12 Then Jesus entered the temple, drove out all selling and buying there, overturned the money-changers' tables and the dove sellers' seats. ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.
13 He told them, "It is written: 'My house will be called a house of prayer,' but you're making it a den of robbers." ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.
14 And the blind and the lame came to him in the temple, and he healed them. ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು.
15 When the chief priests and teachers of the law saw the wonders he did, and the children shouting in the temple, "Hosanna to the Son of David!" they grew angry, ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.
16 and said to him, "Do you hear what these say?" Jesus said to them, "Yes. Have you never read, 'Out of the mouths of infants and nursing babies you have prepared praise'?" “ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.
17 He left them, went out of the city to Bethany, and spent the night there. ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು.
18 Early in the morning, as he returned to the city, he was hungry. ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು.
19 Seeing a fig tree by the road, he went to it but found only leaves. He said, "May you never bear fruit again!" At once the tree withered. ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.
20 Seeing this, the disciples were amazed and asked, "How did the fig tree wither so fast?" ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು.
21 Jesus answered, "I tell you the truth: with faith, no doubting, you'll not only do what happened to the fig tree—you'll even tell this mountain, 'Be lifted up and thrown into the sea,' and it will happen. ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.
22 And whatever you ask in prayer, if you believe, you will receive it." ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.
23 Entering the temple, he was teaching when the chief priests and elders of the people came and asked, "What authority do you have for these things, and who gave you this authority?" ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
24 Jesus replied, "I'll ask you one thing too. Tell me the answer, and I'll say by what authority I do these things. ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ,
25 John's baptism—where was it from? From heaven, or from man?" They discussed among themselves, "If we say, 'From heaven,' he will say to us, 'Then why did you not believe him?' ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.
26 But if we say, 'From man,' we fear the crowd—they all view John as a prophet." ‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.
27 They answered Jesus, "We don't know." He said, "Neither will I tell you by what authority I do these things." ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
28 "But what do you think? A man had two sons. Coming to the first, he said, 'Son, go work today in the vineyard.' ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.
29 And he answered, 'I will not,' but later he changed his mind and went. “ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.
30 He went to the second and said the same. This one answered, 'I'll go, sir'—but didn't go. “ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ.
31 Which of the two did his father's will?" They said, "The first." Jesus told them, "Truly I tell you, tax collectors and prostitutes enter the kingdom of our Father ahead of you." “ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
32 "For John came to you in the way of righteousness, and you didn't believe him, but tax collectors and prostitutes did. Even after seeing that, you didn't change your minds and believe him." ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”
33 "Hear another parable: A landowner planted a vineyard, put a fence around it, dug a winepress in it, built a watchtower, leased it to tenants, and went away on a trip. “ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.
34 When the harvest time drew near, he sent his servants to the tenants to collect his fruit. ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.
35 But the tenants seized his servants—they beat one, killed another, and stoned another. “ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
36 Again he sent other servants, more than the first, and they treated them the same way. ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು.
37 Finally he sent his son to them, saying, 'They will respect my son.' ಕೊನೆಗೆ ಯಜಮಾನನು, ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು’ ಎಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
38 But the tenants, seeing the son, said to each other, 'This is the heir; come, let's kill him and seize his inheritance.' “ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು,
39 So they seized him, threw him out of the vineyard, and killed him. ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು.
40 Now when the owner of the vineyard comes, what will he do to those tenants?" “ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು,
41 They answered, "He will destroy those evil men horribly, and lease the vineyard to other farmers who will give him the fruit in season." ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.
42 Jesus said to them, "Have you never read in the Scriptures: 'The stone the builders rejected became the cornerstone; this came from our Father, and it's marvelous in our eyes'?" ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?
43 "So I tell you: the kingdom of our Father will be taken from you and given to a nation that produces its fruits. “ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.
44 Whoever falls on this stone will be shattered; whoever it falls on will be crushed." ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.
45 When the chief priests and the Pharisees heard his parables, they realized he was speaking about them. ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು.
46 They wanted to arrest him but feared the crowds, who considered him a prophet. ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]