Skip to content
The Believer's Library

Biblica® Open Kannada Contemporary Version 2022

Matthew 22 OKCV

Show OKCV only
Verse × ×
1 Jesus spoke to them again in parables, saying: ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ:
2 "The kingdom of our Father is like a king who prepared a wedding feast for his son. “ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
3 He sent his servants to summon the invited guests to the wedding feast, but they refused to come. ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.
4 Again he sent other servants, saying, 'Tell those invited: Look, I have prepared my dinner; my oxen and fattened cattle are killed, everything ready. Come to the wedding feast.' “ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.
5 But they paid no attention and went off, one to his farm, another to his business, “ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.
6 while the rest seized his servants, mistreated them, and killed them. ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.
7 The king was enraged, and he sent his troops, destroyed those murderers, and burned their city. ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
8 Then he told his servants, 'The wedding is ready, but those invited weren't worthy. “ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ.
9 Go therefore to the main roads and invite to the wedding feast as many as you find.' ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.
10 Those servants went out into the roads and gathered everyone they found, bad and good, and the wedding hall filled with guests. ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
11 "But when the king came in to see the guests, he saw a man not dressed in wedding clothes. “ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.
12 He asked, 'Friend, how did you get in here without wedding clothes?' He was speechless. ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು.
13 Then the king told the servants, 'Tie his hands and feet, and throw him into the outer darkness, where there will be weeping and grinding of teeth.' “ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.
14 For many are called, but few are chosen." “ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು.
15 Then the Pharisees went and plotted how to trap him with his own words. ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
16 They sent their disciples to him, with the Herodians, saying, "Teacher, we know you are truthful and truly teach God's way; you defer to no one, since you don't judge people by rank. ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.
17 Tell us, then, what you think: Is it lawful to pay taxes to Caesar, or not?" ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.
18 But Jesus, knowing their malice, said, "Why are you testing me, you hypocrites? ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?
19 Show me the coin used for the tax." And they brought him a denarius. ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ,” ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು.
20 And he said to them, "Whose image is this, and whose inscription?" ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಇದರ ಮೇಲಿರುವ ಲಿಪಿ ಯಾರದು?” ಎಂದು ಕೇಳಿದರು.
21 They said, "Caesar's." Then he said to them, "So pay Caesar what belongs to Caesar, and our Father what belongs to our Father." ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.
22 When they heard it, they were amazed; and they left him and went away. ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು.
23 That same day Sadducees came to him, who say there is no resurrection, and they asked him, ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,
24 saying, "Teacher, Moses said: if a man dies childless, his brother must marry the widow and raise offspring for his brother. “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
25 Now there were seven brothers among us. The first married, died, and, childless, left his wife to his brother. ಹೀಗಿರಲಾಗಿ ನಮ್ಮಲ್ಲಿ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಮಾಡಿಕೊಂಡು ಸತ್ತನು. ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು.
26 So too the second and the third, down to the seventh. ಅದರಂತೆಯೇ ಎರಡನೆಯವನು ಮತ್ತು ಮೂರನೆಯವನು ಹೀಗೆ ಏಳನೆಯವನವರೆಗೂ ಸಂಭವಿಸಿತು.
27 Last of all, the woman died. ಕಡೆಯದಾಗಿ, ಆ ಸ್ತ್ರೀಯೂ ಸತ್ತಳು.
28 In the resurrection, then, whose wife of the seven will she be? For they all had her." ಆದ್ದರಿಂದ, ಪುನರುತ್ಥಾನದ ಜೀವನದಲ್ಲಿ, ಆ ಏಳುಮಂದಿಯಲ್ಲಿ ಆಕೆ ಯಾರಿಗೆ ಹೆಂಡತಿಯಾಗಿರುವಳು? ಏಕೆಂದರೆ ಅವರೆಲ್ಲರೂ ಆಕೆಯನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದು ಕೇಳಿದರು.
29 Jesus answered, "You're mistaken—you know neither the Scriptures nor our Father's power. ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.
30 For in the resurrection people neither marry nor are married off, but are like angels in heaven. ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
31 Now, about the resurrection of the dead, haven't you read what our Father told you: ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,
32 'I'm the God of Abraham, of Isaac, and of Jacob'? He's not God of the dead, but of the living." ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.
33 And when the crowds heard it, they were astonished at his teaching. ಜನಸಮೂಹದವರು ಇದನ್ನು ಕೇಳಿದಾಗ, ಯೇಸುವಿನ ಬೋಧನೆಗೆ ವಿಸ್ಮಯಗೊಂಡರು.
34 But when the Pharisees heard that he had silenced the Sadducees, they gathered together. ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.
35 And one of them, an expert in the Law, asked him a question to test him: ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,
36 "Teacher, which is the great commandment in the Law?" “ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು.
37 He said to him, "Love your Father with all your heart, with all your soul, and with all your mind. ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’
38 This is the great and first commandment. ಇದೇ ಅತ್ಯಂತ ಮಹಾ ಆಜ್ಞೆಯೂ ಮೊದಲನೆಯ ಆಜ್ಞೆಯೂ ಆಗಿದೆ.
39 And a second is like it: You will love your neighbor as yourself. ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
40 On these two commandments depend all the Law and the Prophets." ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು.
41 Now while the Pharisees were gathered together, Jesus asked them, ಫರಿಸಾಯರು ಕೂಡಿಬಂದಿದ್ದಾಗ ಯೇಸು ಅವರಿಗೆ,
42 "What do you think about the Christ? Whose son is he?" They said to him, "David's." “ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.
43 He asked them, "How then does David, by the Holy Spirit, call him Lord, saying, “ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,
44 'Our Father said to my Lord, "Sit at my right hand, until I put your enemies under your feet"'? “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,” ’ ಎಂದು ಹೇಳಿದನಲ್ಲವೇ?
45 If then David calls the Christ Lord, how can the Christ be David's son?" ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.
46 No one could answer him a word, and from that day no one dared ask him anything else. ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]