Skip to content
The Believer's Library

Biblica® Open Kannada Contemporary Version 2022

Matthew 23 OKCV

Show OKCV only
Verse × ×
1 Then Jesus spoke to the crowds and to his disciples, ಯೇಸು ಜನಸಮೂಹಕ್ಕೂ ತಮ್ಮ ಶಿಷ್ಯರಿಗೂ
2 saying, "The scribes and the Pharisees sit on Moses' seat. ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ.
3 "So do and keep whatever they tell you, but not what they do—they preach, but don't do. ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ.
4 They tie up heavy, hard-to-carry loads and put them on people's shoulders, but they themselves won't lift a finger to move them. ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ.
5 They do everything to be seen by others; they widen their phylacteries and lengthen their tassels, “ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡುತ್ತಾರೆ. ಅವರು ತಮ್ಮ ಬಾಹುಗಳ ಮೇಲೆ ದೇವರ ವಾಕ್ಯವುಳ್ಳ ಡಬ್ಬಿಗಳನ್ನು ಮತ್ತು ಹಣೆಯ ಮೇಲೆ ಅಗಲ ಪಟ್ಟಿಗಳನ್ನು ಮಾಡಿ ಉಡುಪುಗಳ ಅಂಚುಗಳನ್ನು ಉದ್ದಮಾಡುತ್ತಾರೆ.
6 and they love the place of honor at feasts and the best seats in the synagogues, ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ
7 and greetings in the marketplaces and being called 'Rabbi' by others. ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.
8 You must not be called 'Rabbi,' since you have only one teacher, and you're all brothers. “ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು.
9 And call no one on earth your father, for you have one Father, who is in heaven. ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.
10 Don't let anyone call you 'instructor,' for you have one instructor, the Christ. ಗುರುವೆಂದೂ ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ಕ್ರಿಸ್ತನೊಬ್ಬನೇ ನಿಮ್ಮ ಗುರುವು.
11 The greatest among you will be your servant. ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.
12 Whoever raises himself will be humbled; whoever humbles himself will be raised. ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವವರು ತಗ್ಗಿನ ಅನುಭವ ಹೊಂದುವರು. ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಉನ್ನತ ಅನುಭವ ಹೊಂದುವರು.
13 Woe to you, scribes and Pharisees, hypocrites! For you shut the kingdom of our Father before people, neither entering yourselves nor letting in those trying to enter. “ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.
14 Not in this edition “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
15 Woe to you, scribes and Pharisees, hypocrites! For you cross sea and land to make one convert, then make him twice the child of hell you are. “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.
16 Woe to you, blind guides! You say, 'Swearing by the temple means nothing, but swearing by the temple's gold makes the oath binding.' “ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.
17 Blind fools! Which is greater: the gold, or the temple that makes the gold sacred? ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
18 And you say, 'Swearing by the altar is nothing, but swearing by its gift is binding.' ‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.
19 You blind men! For which is greater, the gift or the altar that makes the gift sacred? ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ?
20 So whoever swears by the altar swears by it and by everything on it. ಆದ್ದರಿಂದ, ಬಲಿಪೀಠದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಡುವವನಾಗಿದ್ದಾನೆ.
21 And whoever swears by the temple swears by it and by him who lives in it. ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿ ವಾಸಿಸುವ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ.
22 And whoever swears by heaven swears by our Father's throne and by him who sits on it. ಪರಲೋಕದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಆಸೀನರಾದ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ.
23 Woe to you, scribes and Pharisees, hypocrites! You bring the tenth of mint, dill, and cumin, yet neglect the law's weightier matters—justice, mercy, faithfulness. These you should have done, without neglecting the others. “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.
24 You blind guides, straining out a gnat and swallowing a camel! ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೆ ಸೋಸುತ್ತೀರಿ ಒಂಟೆ ನುಂಗುತ್ತೀರಿ.
25 Woe to you, scribes and Pharisees, hypocrites! You clean the cup and dish outside, but inside they're full of greed and excess. “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
26 Blind Pharisee! First clean the inside of cup and dish, so the outside is clean too. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗವನ್ನು ಶುಚಿಮಾಡು. ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.
27 Woe to you, scribes and Pharisees, hypocrites! You are like whitewashed tombs, appearing beautiful outside but full of dead people's bones and all impurity inside. “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.
28 So you also outwardly appear righteous to others, but inside you are full of hypocrisy and lawlessness. ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.
29 Woe to you, scribes and Pharisees, hypocrites! For you build tombs of the prophets and decorate the monuments of the righteous, “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
30 saying, 'Had we lived in our fathers' days, we would not have joined them in killing the prophets.' ಆದರೆ, ‘ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಪಿತೃಗಳೊಂದಿಗೆ ಪಾಲುಗಾರರಾಗುತ್ತಿರಲಿಲ್ಲ’ ಎಂದು ಹೇಳುತ್ತೀರಿ.
31 So you testify against yourselves that you are the sons of those who murdered the prophets. ಆದ್ದರಿಂದ ನೀವು ಆ ಪ್ರವಾದಿಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
32 Fill up, then, the measure of your fathers. ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.
33 You serpents, you brood of vipers, how are you to escape being sentenced to hell? “ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?
34 So I am sending you prophets, wise men, and scribes—some you will kill and crucify, some you will flog in your synagogues and persecute from town to town, ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.
35 so that all righteous blood shed on earth may come upon you—from righteous Abel's blood to Zechariah son of Berekiah's, whom you murdered between the sanctuary and the altar. ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.
36 Truly, I say to you, all these things will come upon this generation. ನಿಮಗೆ ನಿಜವಾಗಿ ಹೇಳುತ್ತೇನೆ: ಇವೆಲ್ಲವೂ ಈ ಸಂತತಿಯವರ ಮೇಲೆ ಬರುವವು.
37 Jerusalem, Jerusalem—killing the prophets, stoning those sent to you! How often I wanted to gather your children, as a hen gathers her chicks under her wings, but you refused. “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
38 Look, your house is left to you desolate. ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು.
39 I tell you, you won't see me again till you say, 'Blessed is the one coming in our Father's name.'" ಏಕೆಂದರೆ, ‘ಕರ್ತನ ಹೆಸರಿನಲ್ಲಿ ಬರುವವರು ಧನ್ಯರು’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]