Skip to content
The Believer's Library

Biblica® Open Kannada Contemporary Version 2022

Matthew 24 OKCV

Show OKCV only
Verse × ×
1 Jesus was leaving the temple when his disciples came to show him its buildings. ಯೇಸು ದೇವಾಲಯದಿಂದ ಹೊರಗೆ ಹೋದಾಗ ಅವರ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕಾಗಿ ಯೇಸುವಿನ ಬಳಿಗೆ ಬಂದರು.
2 "Do you see all these?" he answered. "Truly I tell you: not one stone here will be left on another; all will be torn down." ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
3 While Jesus was sitting on the Mount of Olives, his disciples came to him privately: "Tell us, when will these things happen, and what sign marks your coming and the end of the age?" ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು.
4 Jesus answered, "Watch out that no one deceives you. ಆಗ ಯೇಸು ಉತ್ತರವಾಗಿ ಅವರಿಗೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
5 "For many will come in my name, claiming, 'I am the Christ,' and they will deceive many. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
6 You'll hear of wars and rumors of wars—don't be alarmed. This must happen, but the end isn't yet. ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.
7 Nation will rise against nation, and kingdom against kingdom, with famines and earthquakes in place after place. ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.
8 All these are the beginning of birth pains. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.
9 Then they will hand you over to suffering and kill you, hated by all nations because of my name. “ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.
10 At that time many will fall away and will betray and hate one another, ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.
11 and many false prophets will appear and deceive many people. ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.
12 Because lawlessness will increase, the love of most will grow cold, ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು.
13 but the one who endures to the end will be saved. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
14 This good news of the kingdom will be announced worldwide as a testimony to all nations, and then the end will come. ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.
15 So when you see the desolating abomination Daniel the prophet spoke of standing in the holy place—let the reader understand, “ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.
16 then let those who are in Judea flee to the mountains. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
17 "Let no one on the rooftop go down to take anything out of the house, ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ.
18 and let no one in the field go back to get a coat. ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.
19 How dreadful it will be in those days for pregnant women and nursing mothers! ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!
20 Pray that your flight will not take place in winter or on the Sabbath. ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ.
21 For then there will be great suffering, unmatched from the world's beginning until now, and never to be matched again. ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.
22 If those days had not been cut short, no one would survive; but for the elect's sake, those days will be cut short. “ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.
23 Then if anyone tells you, 'Look, here's the Christ,' or 'There he is,' don't believe it. ಆಗ ಯಾರಾದರೂ ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ! ಅಗೋ ಅಲ್ಲಿದ್ದಾನೆ!’ ಎಂದು ಹೇಳಿದರೆ ಅವನನ್ನು ನಂಬಬೇಡಿರಿ.
24 False messiahs and false prophets will arise, performing great signs and wonders to deceive, if possible, even the elect. ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
25 See, I have told you ahead of time. ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.
26 So if they say, 'Look, he's in the wilderness,' don't go out; 'Look, in the inner rooms,' don't believe it. “ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ.
27 For just as lightning flashes from the east and shows as far as the west, so will the Son of Man's coming be. ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.
28 Wherever there is a carcass, there the vultures will gather. ಹೆಣ ಇದ್ದಲ್ಲಿಗೆ, ಹದ್ದುಗಳು ಬಂದು ಸೇರುತ್ತವೆ.
29 Right after the suffering of those days, the sun will go dark, the moon will give no light, stars will fall from the sky, and the powers of the heavens will shake. “ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’
30 Then the sign of the Son of Man will appear in heaven, and all earth's peoples will mourn, seeing the Son of Man come on heaven's clouds with power and great glory. “ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.
31 He will send out his angels with a loud trumpet blast, and they will gather his chosen from the four winds, from one end of the sky to the other. ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
32 Learn this from the fig tree: as soon as its branch softens and leafs out, you know summer is near. “ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
33 So also, when you see all these things, know it is near, at the door. ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ.
34 Truly I tell you, this generation will certainly not pass away until all these things have happened. ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
35 Heaven and earth will pass away, but my words will never pass away. ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
36 "No one knows that day or hour—not the angels in heaven, not the Son—only the Father. “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು.
37 As in Noah's days, so will be the Son of Man's coming. ಆದರೆ ನೋಹನ ದಿವಸಗಳು ಇದ್ದಂತೆಯೇ, ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.
38 For in the days before the flood, people ate and drank, married and gave in marriage, until the day Noah entered the ark; ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು.
39 and they knew nothing until the flood came and swept them all away. That is how the coming of the Son of Man will be. ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.
40 Two men will be in the field; one will be taken and the other left. ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
41 Two women will be grinding with a hand mill; one will be taken and the other left. ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಬೀಸುತ್ತಿರುವಾಗ, ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು.
42 Therefore keep watch, because you do not know on what day your Lord will come. “ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.
43 Understand: had the homeowner known what watch of night the thief was coming, he'd have watched and kept his house from being broken into. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ.
44 So you too must be ready, because the Son of Man comes at an hour you don't expect. ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.
45 Who then is the faithful and wise servant, whom the master put in charge of his household to give them food at the right time? “ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?
46 It will be good for that servant whose master finds him doing so when he returns. ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.
47 Truly I tell you, he will put him in charge of all his possessions. ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
48 But suppose that wicked servant says to himself, 'My master is staying away a long time,' ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು
49 and then begins to beat his fellow servants and to eat and drink with drunkards. ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,
50 That servant's master will come on a day he doesn't expect, at an hour he doesn't know. ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು,
51 He will cut him to pieces and place him with the hypocrites, where people weep and grind their teeth." ಅವನನ್ನು ಕ್ರೂರವಾಗಿ ಹಿಂಸಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]