Skip to content
The Believer's Library

Biblica® Open Kannada Contemporary Version 2022

Matthew 25 OKCV

Show OKCV only
Verse × ×
1 "Then the kingdom of our Father will be like ten virgins who took their lamps and went out to meet the bridegroom. “ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.
2 Five of them were foolish, and five were wise. ಅವರಲ್ಲಿ ಐದು ಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
3 The foolish ones took their lamps but did not take any oil with them. ಬುದ್ಧಿಹೀನರು, ತಮ್ಮ ದೀಪಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
4 But the wise ones took oil in flasks along with their lamps. ಬುದ್ಧಿವಂತೆಯರೋ, ತಮ್ಮ ದೀಪಗಳೊಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
5 When the bridegroom was delayed, they all became drowsy and fell asleep. ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು.
6 But at midnight a cry rang out: 'Look, the bridegroom! Come out to meet him!' “ಮಧ್ಯರಾತ್ರಿಯಲ್ಲಿ, ‘ನೋಡಿರಿ, ಮದುಮಗನು ಬರುತ್ತಿದ್ದಾನೆ, ಅವನನ್ನು ಎದುರುಗೊಳ್ಳುವುದಕ್ಕಾಗಿ ಹೊರಡಿರಿ,’ ಎಂಬ ಕೂಗಾಯಿತು.
7 Then all the young women woke up and trimmed their lamps. “ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು.
8 The foolish said to the wise, 'Give us some of your oil, because our lamps are going out.' ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.
9 But the wise answered, 'No, there may not be enough for us and you. Go instead to those who sell, and buy for yourselves.' “ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.
10 While they went to buy it, the bridegroom came. The ready ones went in with him to the wedding feast, and the door closed. “ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.
11 Later the other young women came too, saying, 'Lord, lord, open the door for us!' “ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು.
12 But he answered, 'Truly I tell you, I do not know you.' “ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.
13 Therefore keep watch, because you do not know the day or the hour. “ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.
14 "For it will be like a man going abroad, calling his servants and entrusting them with his property. “ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
15 He gave one five bags of silver, another two, another one—each by his own ability—then set out on his journey. ಅವನು ಒಬ್ಬನಿಗೆ ಐದು ಚಿನ್ನದ ನಾಣ್ಯಗಳನ್ನು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು; ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಕೂಡಲೇ ಪ್ರಯಾಣಮಾಡಿದನು.
16 The one given five bags of silver went at once, put them to work, and gained five more. ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.
17 In the same way, the one with two bags of silver gained two more. ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.
18 But the one who received one bag of silver went off, dug in the ground, and hid his master's money. ಆದರೆ ಒಂದು ಚಿನ್ನದ ನಾಣ್ಯವನ್ನು ಹೊಂದಿದವನು ಹೋಗಿ ಭೂಮಿಯನ್ನು ಅಗೆದು, ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19 "After a long time the master of those servants returned and settled accounts with them. “ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು.
20 The man who received five bags of silver came, adding five more: 'Master, you entrusted me with five bags of silver; see, I've gained five more.' ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.
21 "His master said, 'Well done, good and faithful servant! You were faithful over a little; I'll put you over much. Enter your master's joy!' “ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
22 "The one with two bags of silver also came and said, 'Master, you gave me two bags of silver; look, I've earned two more.' “ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.
23 "His master told him, 'Well done, good and faithful servant! You were faithful with a little; I'll put you over much. Enter your master's joy!' “ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
24 "Then the one who had received one bag of silver came and said, 'Master, I knew you were a hard man, reaping where you didn't sow, gathering where you didn't scatter seed.' “ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು.
25 Afraid, I went and hid your silver in the ground. Here is what is yours. ಆದ್ದರಿಂದ ನಾನು ಭಯಪಟ್ಟು ಹೋಗಿ ನಿನ್ನ ಚಿನ್ನದ ನಾಣ್ಯವನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ನೋಡು, ನೀನು ಕೊಟ್ಟಿದ್ದನ್ನು ನಿನಗೇ ಕೊಡುತ್ತೇನೆ,’ ಎಂದನು.
26 "His master replied, 'You wicked, lazy servant! You knew I harvest where I didn't sow and gather where I didn't scatter seed? “ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
27 "You should have deposited my money with the bankers, so on my return I'd get it back with interest. ಹಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಕೊಡಬೇಕಾಗಿತ್ತು; ನಾನು ಬಂದಾಗ ಹಣವನ್ನು ಬಡ್ಡಿ ಸಮೇತವಾಗಿ ಪಡೆದುಕೊಳ್ಳುತ್ತಿದ್ದೆನು,’ ಎಂದು ಹೇಳಿ,
28 So take his bag of silver and give it to the one with ten bags of silver. “ತನ್ನ ಸೇವಕರಿಗೆ, ‘ಅವನಿಂದ ಆ ಚಿನ್ನದ ನಾಣ್ಯವನ್ನು ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳು ಇದ್ದವನಿಗೆ ಕೊಡಿರಿ.
29 For everyone who has will be given more, and he'll overflow; but the one who has nothing will lose even what he has. ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.
30 Throw out that worthless servant into the outer darkness, where there will be weeping and grinding of teeth.' ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.
31 "When the Son of Man comes in his glory, with all his angels, he will sit on his glorious throne. “ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.
32 All the nations will be gathered before him, and he will separate them from each other as a shepherd separates sheep from goats. ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು.
33 He will put the sheep on his right and the goats on his left. ನಾನು ಕುರಿಗಳನ್ನು ನನ್ನ ಬಲಗಡೆಯಲ್ಲಿಯೂ ಆಡುಗಳನ್ನು ಎಡಗಡೆಯಲ್ಲಿಯೂ ನಿಲ್ಲಿಸುವೆನು.
34 Then the King will say to those on his right, 'Come, you blessed by my Father; inherit the kingdom prepared for you since the foundation of the world. “ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.
35 "For I was hungry and you fed me; thirsty, and you gave me a drink; a stranger, and you took me in, ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ.
36 I was naked and you dressed me, sick and you cared for me, in prison and you visited me.'" ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.
37 "Then the righteous will answer him, 'Lord, when did we see you hungry and feed you, or thirsty and give you drink? “ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು?
38 "When did we see you a stranger and shelter you, or naked and dress you? ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
39 When did we see you sick or in prison and come to you?'" ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನ ಬಳಿಗೆ ಬಂದೆವು?’ ಎಂದು ಕೇಳುವರು.
40 "And the King will reply, 'Truly I tell you, whatever you did for one of the least of these siblings of mine, you did for me.' “ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.
41 Then he'll tell those on his left, 'Away from me, you cursed ones, into the eternal fire prepared for the devil and his angels. “ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
42 For I was hungry and you gave me nothing to eat, thirsty and you gave me nothing to drink, ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.
43 I was a stranger, and you didn't take me in; naked, and you didn't dress me; sick and in prison, and you didn't visit me.'" ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು.
44 "Then they too will answer, 'Lord, when did we see you hungry, thirsty, a stranger, naked, sick, or in prison, and not serve you?' “ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.
45 "He will answer, 'Truly I tell you: whatever you didn't do for one of the least of these, you didn't do for me.' “ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.
46 Then they will go away to eternal punishment, but the righteous to eternal life." “ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]