Skip to content
The Believer's Library

Biblica® Open Kannada Contemporary Version 2022

Matthew 27 OKCV

Show OKCV only
Verse × ×
1 At dawn, all the chief priests and elders of the people met and plotted to kill Jesus. ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
2 So they bound him, led him away, and handed him over to Pilate the governor. ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.
3 Then Judas, his betrayer, seeing Jesus condemned, felt remorse and returned the thirty pieces of silver to the chief priests and elders, ಯೇಸುವಿಗೆ ದ್ರೋಹಮಾಡಿದ ಯೂದನು ಗುರುವಿಗೆ ಮರಣ ದಂಡನೆಯ ತೀರ್ಪಾದದ್ದನ್ನು ಕಂಡು ವಿಷಾದಿಸಿ, ಆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಮರಳಿ ತಂದನು.
4 saying, "I sinned, betraying innocent blood." They said, "Not our concern. You'll see to it." ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.
5 He threw the pieces of silver into the temple, went out, and hanged himself. ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.
6 The chief priests took the silver and said, "We can't put this in the treasury—it was payment for blood." ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.
7 So they consulted, then bought the potter's field with it, to bury foreigners. ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಳಿಡುವುದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
8 That is why that field has been called the Field of Blood to this day. ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.
9 Then what the prophet Jeremiah spoke was fulfilled: "They took the thirty pieces of silver, the price set on him, whom some of Israel's sons priced, ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು,
10 and they gave them for the potter's field, as our Father directed me." ಕರ್ತನು ನನಗೆ ಆಜ್ಞಾಪಿಸಿದಂತೆ ಅವುಗಳನ್ನು, ‘ಕುಂಬಾರನ ಹೊಲ’ ಕೊಳ್ಳಲು ಕೊಟ್ಟರು,” ಎಂಬುದು.
11 Jesus stood before the governor; the governor asked, "Are you the King of the Jews?" Jesus said, "You say so." ಯೇಸು ರಾಜ್ಯಪಾಲನ ಮುಂದೆ ನಿಂತಿದ್ದರು. ಆಗ ಅವನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ, “ನೀನೇ ಹೇಳುತ್ತಿದ್ದಿ,” ಎಂದರು.
12 But when he was accused by the chief priests and elders, he gave no answer. ಆಗ ಮುಖ್ಯಯಾಜಕರೂ ಹಿರಿಯರೂ ಯೇಸುವಿನ ಮೇಲೆ ದೂರು ಹೇಳುತ್ತಿದ್ದರೂ ಅವರು ಏನೂ ಉತ್ತರ ಕೊಡಲಿಲ್ಲ.
13 Then Pilate said to him, "Don't you hear how many charges they're bringing against you?" ಆಗ ಪಿಲಾತನು ಯೇಸುವಿಗೆ, “ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುತ್ತಿರುವುದು ನಿನಗೆ ಕೇಳಿಸುವುದಿಲ್ಲವೋ?” ಎಂದನು.
14 He gave him no answer, not even to a single charge, so the governor was greatly amazed. ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು.
15 At each feast the governor would release one prisoner the crowd wanted. ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯಾಳನ್ನು ರಾಜ್ಯಪಾಲನು ಬಿಟ್ಟುಕೊಡುವ ಪದ್ಧತಿಯಿತ್ತು.
16 At that time they were holding a notorious prisoner called Barabbas. ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು.
17 When they had gathered, Pilate asked, "Which do you want me to release—Barabbas, or Jesus called Christ?" ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, “ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.
18 For he knew that it was out of envy that they had handed him over. ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.
19 While he sat on the judgment seat, his wife sent to him: Have nothing to do with that righteous man, for I suffered much today in a dream because of him. ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.
20 But the chief priests and elders persuaded the crowds to ask for Barabbas and to have Jesus put to death. ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.
21 The governor said, "Which of the two should I release to you?" They said, "Barabbas." ರಾಜ್ಯಪಾಲನು ಅವರಿಗೆ, “ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು, “ಬರಬ್ಬನನ್ನು,” ಎಂದರು.
22 Pilate asked them, "What then do I do with Jesus called Christ?" They all said, "Have him crucified!" ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.
23 He said, "Why? What wrong has he done?" But they cried out louder, "Crucify him!" ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
24 Seeing he could do nothing, but a riot was starting instead, Pilate took water, washed his hands before the crowd, and said, "I am innocent of this man's blood; you see to it." ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.
25 And all the people answered, "His blood be on us and on our children!" ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.
26 Then he released Barabbas to them, had Jesus whipped, and handed him over to be crucified. ಆಗ ಪಿಲಾತನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
27 Then the governor's soldiers took Jesus into the governor's headquarters and gathered the whole regiment around him. ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು.
28 They stripped him and put a scarlet robe on him. ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು.
29 They twisted a crown of thorns, set it on his head, put a reed in his right hand, knelt before him, and mocked him: "Hail, King of the Jews!" ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.
30 And they spit on him, took the reed, and struck him on the head again and again. ಅವರು ಯೇಸುವಿನ ಮೇಲೆ ಉಗುಳಿ, ಆ ಬೆತ್ತವನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಮತ್ತೆ ಮತ್ತೆ ಹೊಡೆದರು.
31 After mocking him, they stripped off the robe, dressed him in his own clothes, and led him away to crucify him. ಹೀಗೆ ಹಾಸ್ಯ ಮಾಡಿದ ಮೇಲೆ, ಆ ನಿಲುವಂಗಿಯನ್ನು ಯೇಸುವಿನಿಂದ ತೆಗೆದುಹಾಕಿ ಅವರ ವಸ್ತ್ರವನ್ನು ಹೊದಿಸಿ, ಯೇಸುವನ್ನು ಶಿಲುಬೆಗೆ ಹಾಕುವುದಕ್ಕಾಗಿ ನಡೆಸಿಕೊಂಡು ಹೋದರು.
32 Going out, they found a Cyrenian named Simon and forced him to carry Jesus's cross. ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
33 And when they came to a place called Golgotha (which means Place of a Skull), ಆಮೇಲೆ ಅವರು “ಗೊಲ್ಗೊಥಾ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಬಂದರು. ಅದರ ಅರ್ಥ “ತಲೆಬುರುಡೆಯ ಸ್ಥಳ” ಎಂಬುದು.
34 they gave him wine mixed with bitter gall to drink; he tasted it and refused to drink. ಆಗ ಅವರು ಯೇಸುವಿಗೆ ಕಹಿ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಯೇಸು ಅದನ್ನು ರುಚಿ ನೋಡಿ ಕುಡಿಯಲು ಇಷ್ಟಪಡಲಿಲ್ಲ.
35 And when they had crucified him, they divided his garments among themselves by casting lots. ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು
36 Then they sat down and kept watch over him there. ಮತ್ತು ಅವರು ಅಲ್ಲಿ ಕೆಳಗೆ ಕುಳಿತು ಕಾವಲು ಕಾಯುತ್ತಿದ್ದರು.
37 Over his head they posted the charge against him: "This is Jesus, the King of the Jews." ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.
38 Then two robbers were crucified with him, one on his right and one on his left. ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.
39 Those who passed by hurled insults at him, shaking their heads, ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ,
40 saying, "You who would destroy the temple and rebuild it in three days—save yourself! If you're the Son of God, come down from the cross!" “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.
41 In the same way the chief priests, with the scribes and elders, also mocked him, saying, ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ,
42 "he saved others; himself he can't save. He's King of Israel—let him come down from the cross now, and we'll believe in him. “ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.
43 He trusts in God—let God save him now, if he wants him, for he said, 'I am God's Son.'" ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.
44 And the robbers who were crucified with him also heaped insults on him in the same way. ಯೇಸುವಿನ ಜೊತೆಗೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಸಹ ಅದೇ ರೀತಿಯಾಗಿ ಅವರನ್ನು ನಿಂದಿಸಿದರು.
45 Now from noon until three in the afternoon darkness came over all the land. ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
46 About three in the afternoon, Jesus cried loudly, "Eli, Eli, lema sabachthani?"—meaning, "My God, my God, why have you forsaken me?" ಸುಮಾರು ಮೂರು ಗಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ?” ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು.
47 When some of those standing there heard this, they said, "This man is calling Elijah." ಆಗ ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.
48 One of them ran at once, soaked a sponge in sour wine, put it on a reed, and gave him a drink. ಕೂಡಲೇ ಅವರಲ್ಲಿ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯುವುದಕ್ಕೆ ಕೊಟ್ಟನು.
49 But the others said, "Leave him alone. Let us see whether Elijah will come to save him." ಉಳಿದವರು, “ಇರಲಿ ಬಿಡು, ಎಲೀಯನು ಬಂದು ಈತನನ್ನು ರಕ್ಷಿಸುವನೇನೋ ನೋಡೋಣ,” ಎಂದರು.
50 And Jesus cried out again with a loud voice and gave up his spirit. ಯೇಸು ತಿರುಗಿ ಗಟ್ಟಿಯಾಗಿ ಕೂಗಿ, ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.
51 Suddenly the curtain of the temple was torn in two, from top to bottom. The earth shook, the rocks split. ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.
52 The tombs were opened, and many bodies of the holy ones who had fallen asleep were raised. ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.
53 After Jesus's resurrection, they left the tombs, entered the holy city, and appeared to many. ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
54 The centurion and those with him guarding Jesus saw the earthquake and what happened, and were terrified, saying, "Truly this man was the Son of God!" ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.
55 Many women watched from a distance; they had followed Jesus from Galilee to serve him. ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
56 Among them: Mary Magdalene, Mary mother of James and Joseph, and the mother of Zebedee's sons. ಅವರಲ್ಲಿ ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಜೆಬೆದಾಯನ ಮಕ್ಕಳ ತಾಯಿ ಇದ್ದರು.
57 At evening a rich man from Arimathea named Joseph came, himself a disciple of Jesus. ಸಂಜೆಯಾದಾಗ, ಅರಿಮಥಾಯ ಊರಿನ ಯೋಸೇಫನೆಂಬ ಹೆಸರುಳ್ಳ ಧನವಂತನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
58 He went to Pilate and asked for Jesus' body. Then Pilate ordered it given to him. ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ಕೇಳಿಕೊಂಡನು. ಆಗ ಪಿಲಾತನು ದೇಹವನ್ನು ಅವನಿಗೆ ಒಪ್ಪಿಸುವಂತೆ ಅಪ್ಪಣೆಕೊಟ್ಟನು.
59 Joseph took the body, wrapped it in a clean linen cloth. ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ,
60 He put it in his new tomb, cut into the rock, rolled a large stone across the tomb's entrance, and left. ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.
61 Mary Magdalene and the other Mary were there, sitting opposite the tomb. ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.
62 The next day—after Preparation Day—the chief priests and Pharisees gathered before Pilate, ಮರುದಿನ, ಅಂದರೆ ಪಸ್ಕಹಬ್ಬದ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರು, ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು,
63 and said, "Sir, we remember that deceiver, while still alive, said, 'After three days I will rise.' “ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.
64 So order the tomb secured until the third day, or his disciples may come, steal him, and tell the people, 'He has been raised from the dead.' That last deception would be worse than the first." ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ಆತನನ್ನು ಕದ್ದುಕೊಂಡು ಹೋಗಿ, ಯೇಸು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿಯಾರು. ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು. ಆದಕಾರಣ ಮೂರನೆಯ ದಿನದವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆಕೊಡಬೇಕು,” ಎಂದರು.
65 Pilate said to them, "You have a guard. Go, make it as secure as you can." ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲಾ, ಹೋಗಿ ನಿಮಗೆ ತಿಳಿದಮಟ್ಟಿಗೆ ಅದನ್ನು ಭದ್ರಪಡಿಸಿರಿ,” ಎಂದನು.
66 So they went and made the tomb secure by sealing the stone and posting the guard. ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]