Skip to content
The Believer's Library

Biblica® Open Kannada Contemporary Version 2022

Matthew 28 OKCV

Show OKCV only
Verse × ×
1 After the Sabbath, at dawn on the first day of the week, Mary Magdalene and the other Mary came to see the tomb. ಸಬ್ಬತ್ ಮುಗಿದ ಮೇಲೆ, ವಾರದ ಮೊದಲನೆಯ ದಿನ ಬೆಳಗಾಗುವಾಗ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
2 Suddenly a great earthquake struck, for an angel of our Father came down from heaven, rolled back the stone, and sat on it. ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.
3 His appearance was like lightning, and his clothing white as snow. ಅವನ ರೂಪವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
4 The guards trembled in fear of him and became like dead men. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತಂತಾದರು.
5 But the angel said to the women, "Don't be afraid, for I know you're looking for Jesus, who was crucified. ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.
6 He isn't here—he's risen, as he said. Come, see the place where he was lying. ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ.
7 Go quickly, tell his disciples: He has risen from the dead. Look, he is going ahead of you to Galilee; you will see him there. Listen, I have told you." ಬೇಗನೆ ಹೋಗಿ ಅವರ ಶಿಷ್ಯರಿಗೆ, ‘ಅವರು ಮರಣದಿಂದ ಎದ್ದಿದ್ದಾರೆ. ಅವರು ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ. ನೀವು ಅಲ್ಲಿಯೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ಇದೇ ನಾನು ನಿಮಗೆ ತಿಳಿಸಬೇಕಾದ ಸಂಗತಿ,” ಎಂದನು.
8 So they left the tomb quickly, with fear and great joy, and ran to tell his disciples. ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು.
9 Suddenly Jesus met them, saying, "Greetings!" They came to him, grasped his feet, and worshiped him. ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು.
10 Then Jesus told them, "Don't be afraid. Go, tell my brothers to leave for Galilee—they will see me there." ಆಗ ಯೇಸು ಅವರಿಗೆ, “ಭಯಪಡಬೇಡಿರಿ, ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ಹೋಗಿ ಅವರಿಗೆ ಹೇಳಿರಿ,” ಎಂದರು.
11 While on the way, some guards entered the city and reported to the chief priests all that had happened. ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
12 After meeting with the elders and forming a plan, they paid the soldiers a large sum, ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು,
13 telling them, "Say: His disciples came at night and stole him while we slept. “ ‘ನಾವು ನಿದ್ರೆ ಮಾಡುತ್ತಿದ್ದಾಗ ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋದರು,’ ಎಂದು ನೀವು ಹೇಳಿರಿ.
14 If this reaches the governor, we'll persuade him and keep you free of trouble." ಇದು ರಾಜ್ಯಪಾಲನ ಕಿವಿಗೆ ಬಿದ್ದರೆ, ನೀವು ತಪ್ಪಿಸಿಕೊಳ್ಳುವ ಹಾಗೆ ನಾವು ಅವನನ್ನು ಸಮಾಧಾನಪಡಿಸುವೆವು,” ಎಂದರು.
15 They took the money and did as they were told; this report spread among the Jews to this day. ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ.
16 Then the eleven disciples went to Galilee, to the mountain where Jesus had directed them. ಆಗ ಹನ್ನೊಂದು ಮಂದಿ ಶಿಷ್ಯರು ಯೇಸು ತಮಗೆ ನೇಮಿಸಿದ ಗಲಿಲಾಯದಲ್ಲಿರುವ ಬೆಟ್ಟಕ್ಕೆ ಹೋದರು.
17 When they saw him, they worshiped him, but some doubted. ಅವರು ಯೇಸುವನ್ನು ಕಂಡು ಆರಾಧಿಸಿದರು. ಆದರೆ ಕೆಲವರು ಸಂದೇಹ ಪಟ್ಟರು.
18 Jesus came and said to them, "All authority in heaven and on earth has been given to me. ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.
19 Therefore go and make disciples of all nations, baptizing them in the name of the Father and of the Son and of the Holy Spirit, ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,
20 teaching them to obey all I've commanded you. Remember, I'm with you always, to the end of the age." ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]