Skip to content
The Believer's Library

Biblica® Open Kannada Contemporary Version 2022

Matthew 3 OKCV

Show OKCV only
Verse × ×
1 In those days John the Baptist came, preaching in the wilderness of Judea, ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,
2 "Repent, for the kingdom of our Father has come near." “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.
3 This is the one Isaiah the prophet spoke of, saying: "A voice calling out in the wilderness: Prepare the way of the Lord, make his paths straight." “ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.
4 John wore clothes of camel hair, with a leather belt around his waist; his food was locusts and wild honey. ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
5 Then Jerusalem and all Judea and all the region around the Jordan went out to him, ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು.
6 and they were baptized by him in the Jordan River, confessing their sins. ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
7 Seeing many Pharisees and Sadducees coming to be baptized, he said to them, "You brood of vipers! Who warned you to flee the coming wrath? ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?
8 Bear fruit, then, worthy of repentance. ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.
9 Don't presume to say to yourselves, 'Abraham is our father,' for I tell you: our Father can raise up children for Abraham from these stones. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.
10 The axe already lies at the root of the trees, so every tree not bearing good fruit is cut down and thrown into the fire. ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.
11 "I baptize you with water for repentance, but the one coming after me is stronger than I am—I'm not worthy to carry his sandals. He will baptize you with the Holy Spirit and fire. “ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.
12 His winnowing fork is in his hand; he'll clear his threshing floor, gather his wheat into the barn, but burn the chaff with fire that never goes out." ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.
13 Then Jesus came from Galilee to the Jordan to John, to be baptized by him. ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.
14 But John tried to stop him: "I need baptism from you, yet you come to me?" ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.
15 Jesus replied to him, "Allow it now, for this is how we must fulfill all righteousness." So John allowed him. ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.
16 After Jesus was baptized, he came up out of the water at once, and suddenly the heavens opened to him; he saw the Spirit of our Father coming down like a dove and settling on him. ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.
17 Then a voice from heaven said, "This is my Son, the one I love; I delight in him." ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]