Skip to content
The Believer's Library

Biblica® Open Kannada Contemporary Version 2022

Matthew 4 OKCV

Show OKCV only
Verse × ×
1 Then the Holy Spirit led Jesus into the wilderness to be tempted by the devil. ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.
2 And after fasting forty days and forty nights, he was hungry. ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.
3 The tempter came and said, "If you're the Son of God, tell these stones to become bread." ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.
4 But he answered, "It is written, 'People do not live by bread alone, but by every word from our Father's mouth.'" ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.
5 Then the devil took him into the holy city, stood him on the temple's highest point, ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,
6 and told him, "If you're God's Son, throw yourself down, since Scripture says, 'He will command his angels about you, and they will carry you on their hands, so you won't strike your foot on a stone.'" “ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.
7 Jesus said to him, "Again it is written, 'You must not put your Father to the test.'" ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
8 Again the devil took him to a very high mountain and showed him all the world's kingdoms and their glory. ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,
9 He said to him, "All these I will give you, if you bow down and worship me." “ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.
10 Then Jesus told him, "Get away, Satan! For Scripture says, 'Worship your Father, and serve only him.'" ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
11 Then the devil left him, and suddenly angels came and took care of him. ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.
12 Now when he heard that John had been arrested, he withdrew into Galilee. ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.
13 He left Nazareth and settled in Capernaum, by the sea, in the territory of Zebulun and Naphtali, ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.
14 so that what was spoken by the prophet Isaiah might be fulfilled: ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ:
15 "The land of Zebulun and the land of Naphtali, the way of the sea, beyond the Jordan, Galilee of the Gentiles, “ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,
16 the people dwelling in darkness have seen a great light, and for those dwelling in the region and shadow of death, on them a light has dawned." ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”
17 From that time Jesus began to preach, saying, "Repent, for the kingdom of our Father is near." ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.
18 Walking by the Sea of Galilee, he saw two brothers, Simon called Peter and his brother Andrew, casting a net into the sea—they were fishermen. ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.
19 And he said to them, "Follow me, and I will make you fishers of people." ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.
20 Immediately they left their nets and followed him. ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
21 Going on from there, he saw two more brothers—James son of Zebedee and John his brother—in the boat with their father Zebedee, mending nets, and called them. ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.
22 Immediately they left the boat and their father and followed him. ಕೂಡಲೇ, ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
23 He went all through Galilee, teaching in their synagogues, announcing the good news of the kingdom, and healing every disease and sickness among the people. ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.
24 News of him spread through all Syria. They brought him all who were sick—gripped by various diseases and pains, oppressed by demons, epileptic, paralyzed—and he healed them. ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.
25 Large crowds followed him from Galilee, the Decapolis, Jerusalem, Judea, and beyond the Jordan. ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]