Skip to content
The Believer's Library

Biblica® Open Kannada Contemporary Version 2022

Matthew 5 OKCV

Show OKCV only
Verse × ×
1 Seeing the crowds, Jesus went up the mountain; when he sat down, his disciples came to him. ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.
2 And he opened his mouth and began to teach them, saying: ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. ಅವರು ಹೀಗೆ ಹೇಳಿದರು:
3 "Blessed are the poor in spirit, for theirs is the kingdom of our Father. “ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.
4 Blessed are those who mourn, for they will be comforted. ದುಃಖಿಸುವವರು ಧನ್ಯರು, ಅವರು ಆದರಣೆ ಹೊಂದುವರು.
5 Blessed are the meek, for they will inherit the earth. ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.
6 Blessed are those who hunger and thirst for righteousness, for they will be satisfied. ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.
7 Blessed are the merciful, for they will receive mercy. ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.
8 Blessed are the pure in heart, for they will see our Father. ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.
9 Blessed are the peacemakers, for they will be called children of our Father. ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.
10 Blessed are those who are persecuted for righteousness' sake, for theirs is the kingdom of our Father. ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.
11 "Blessed are you when people insult, persecute, and lie about every kind of evil against you because of me. “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
12 Rejoice and be glad, for your reward is great in heaven, for they persecuted the prophets before you the same way. ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.
13 "You are the salt of the earth. But if salt loses its taste, how can it be salted again? It's no longer good for anything but being thrown out and trampled by people. “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
14 "You are the light of the world. A city set on a hill cannot be hidden. “ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.
15 No one lights a lamp and puts it under a basket, but sets it on a stand to light everyone in the house. ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.
16 Likewise, let your light shine before people, so they see your good works and glorify your Father in heaven. ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.
17 "Don't think I came to abolish the Law or the Prophets—I didn't come to abolish them, but to fulfill them. “ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ.
18 For truly I tell you: until heaven and earth pass, not one letter, not one stroke, will pass from the Law until everything is done. ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
19 So whoever breaks one of these least commands and teaches others the same will be called least in the kingdom of our Father; but whoever keeps and teaches them will be called great in the kingdom of our Father. ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.
20 For I tell you, unless you are more righteous than the scribes and Pharisees, you'll never enter the kingdom of our Father. ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
21 "You've heard that it was said to those of old, 'Do not murder; whoever murders is subject to judgment.' “ ‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.
22 But I tell you: whoever is angry with his brother risks judgment. Whoever insults his brother risks the council, and whoever says, 'You fool!' risks fiery hell. ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.
23 "So if you're offering your gift at the altar and recall there that your brother has something against you, “ಆದ್ದರಿಂದ, ನೀನು ನಿನ್ನ ಕಾಣಿಕೆಯನ್ನು ಸಮರ್ಪಿಸಲು ಬಲಿಪೀಠದ ಬಳಿಗೆ ತಂದಾಗ, ನಿನ್ನ ಸಹೋದರನಿಗೆ ಅಥವಾ ನಿನ್ನ ಸಹೋದರಿಗೆ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
24 leave your gift there before the altar, go make peace with your brother first, then come offer your gift. ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.
25 Make peace with your accuser quickly, while still on the way with him, or he may hand you over to the judge, the judge to the officer, and you may be thrown into prison. “ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.
26 Truly I tell you, you will never get out until you have paid the last penny. ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
27 "You have heard that it was said, 'You shall not commit adultery.' “ ‘ವ್ಯಭಿಚಾರ ಮಾಡಬಾರದು,’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.
28 But I tell you: everyone who looks at a woman lustfully has already committed adultery with her in his heart. ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
29 If your right eye makes you stumble, tear it out and throw it away—better to lose one part of your body than have your whole body thrown into hell. ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.
30 If your right hand makes you sin, cut it off and throw it away. Better to lose one part of you than have your whole body go into hell. ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.
31 "It was also said, 'Whoever divorces his wife must give her a certificate of divorce.' “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.
32 I tell you: whoever divorces his wife, except for sexual sin, makes her a victim of adultery; and whoever marries a divorced woman commits adultery. ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.
33 "Again, you've heard it was said to the ancients: 'Don't break your oath—fulfill it to our Father.' “ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.
34 But I tell you, do not swear an oath at all: neither by heaven, for it is our Father's throne, ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು;
35 nor by the earth, for it's the footstool for his feet, nor by Jerusalem, for it's the city of the great King. ಭೂಮಿಯ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಪಾದಪೀಠವು. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ಮಹಾರಾಜನ ಪಟ್ಟಣವಾಗಿದೆ.
36 And do not swear by your head, for you cannot make a single hair white or black. ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.
37 Let your 'Yes' be 'Yes,' and your 'No,' 'No'; anything beyond this comes from the evil one. ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು.
38 "You have heard that it was said, 'Eye for eye and tooth for tooth.' “ ‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.
39 But I tell you: don't resist an evil person. If someone slaps your right cheek, turn the other cheek to him too. ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.
40 If anyone wants to sue you and take your tunic, let him have your cloak too. ನಿನ್ನೊಡನೆ ವ್ಯಾಜ್ಯ ಮಾಡಿ ನಿನ್ನ ಅಂಗಿಯನ್ನು ನಿನ್ನಿಂದ ಕಿತ್ತುಕೊಳ್ಳುವವನಿಗೆ, ನಿನ್ನ ಮೇಲಂಗಿಯನ್ನೂ ಕೊಟ್ಟುಬಿಡು.
41 And if anyone forces you to go one mile, go with him two. ಯಾವನಾದರೂ ನಿನ್ನನ್ನು ಒಂದು ಕಿಲೋಮೀಟರು ದೂರ ಬಾ ಎಂದು ಒತ್ತಾಯ ಮಾಡಿದರೆ, ಅವನೊಡನೆ ಎರಡು ಕಿಲೋಮೀಟರು ದೂರ ಹೋಗು;
42 Give to whoever asks you, and don't turn away whoever wants to borrow from you. ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.
43 "You have heard that it was said, 'You will love your neighbor and hate your enemy.' “ ‘ನಿನ್ನ ನೆರೆಯವನನ್ನು ಪ್ರೀತಿಸಿ, ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ.
44 But I tell you, love your enemies and pray for those who persecute you, ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.
45 so you may become children of your Father in heaven, because he makes his sun rise on evil and good and sends rain on just and unjust. ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.
46 If you love those who love you, what reward is that? Don't even tax collectors do the same? ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?
47 If you greet only your brothers, what more do you do than others? Don't even the Gentiles do that? ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?
48 Be perfect, therefore, as your heavenly Father is perfect." ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]