Skip to content
The Believer's Library

Biblica® Open Kannada Contemporary Version 2022

Matthew 6 OKCV

Show OKCV only
Verse × ×
1 "Take care not to practice your righteousness before others to be seen by them, or you have no reward from your Father in heaven. “ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.
2 So when you give to the needy, don't announce it with a trumpet, like the hypocrites do in synagogues and streets, to be praised by people. I assure you: they've already received their full reward. “ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
3 But when you give to the needy, don't let your left hand know what your right hand does, ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ.
4 so that your gift stays secret. Your Father, who sees in secret, will repay you. ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.
5 "When you pray, don't be like hypocrites who love praying standing in synagogues and on street corners to be seen by others. Truly, I tell you: they've already received their full reward. “ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
6 But when you pray, go into your room, shut the door, and pray to your Father in secret. Your Father who sees in secret will reward you. ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.
7 When you pray, don't babble like those who don't know the Father, because they think many words will get them heard. ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.
8 Do not be like them, for your Father knows what you need before you ask him. ನೀವು ಅವರಂತೆ ಇರಬೇಡಿರಿ, ಏಕೆಂದರೆ ನೀವು ಕೇಳುವುದಕ್ಕೆ ಮೊದಲೇ, ನಿಮ್ಮ ತಂದೆಗೆ ನಿಮ್ಮ ಅಗತ್ಯಗಳು ತಿಳಿದಿವೆ.
9 This, then, is how you should pray: 'Our Father in heaven, may your name be honored as holy, “ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,
10 your kingdom come, your will be done, on earth as it is in heaven. ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
11 Give us today our daily bread. ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.
12 And forgive us our debts, as we also have forgiven our debtors. ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.
13 And lead us not into temptation, but deliver us from the evil one.' ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’
14 "For if you forgive others their sins, your heavenly Father will also forgive you. ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.
15 But if you do not forgive others their sins, neither will your Father forgive your sins. ಆದರೆ ನೀವು ಬೇರೆಯವರ ತಪ್ಪುಗಳನ್ನು ಕ್ಷಮಿಸದಿದ್ದರೆ, ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
16 "When you fast, don't look gloomy like the hypocrites—they disfigure their faces to show others they're fasting. Truly, I tell you, they have their full reward. “ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
17 But when you fast, put oil on your head and wash your face, ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ.
18 so you don't appear to others as fasting, but only to your Father, who is hidden. Then your Father, who sees what's hidden, will reward you. ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.
19 "Do not store up treasures for yourselves on earth, where moth and rust destroy, and thieves break in and steal. “ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.
20 But store up treasures in heaven for yourselves, where neither moth nor rust destroys, and thieves can't break in and steal. ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ.
21 For where your treasure is, there your heart will be also. ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.
22 "The eye is the body's lamp. If your eye is clear, your whole body will be full of light. “ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು.
23 But if your eye is bad, your whole body will be dark. If then the light in you is darkness, how great that darkness is! ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ!
24 "No one can serve two masters: he'll hate one and love the other, or hold to one and despise the other. You can't serve our Father and money. “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.
25 "So I tell you: don't worry about your life—what you'll eat or drink—or body—what you'll wear. Isn't life more than food, body more than clothes? “ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?
26 Look at the birds in the sky: they don't plant, harvest, or store in barns, yet your heavenly Father feeds them. Aren't you worth more than they? ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?
27 Can any of you by worrying add a single hour to your life? ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?
28 And why worry about clothing? Consider the lilies of the field, how they grow: they don't work or spin. “ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.
29 Yet I tell you: not even Solomon, in all his glory, was dressed like one of these. ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.
30 If our Father clothes the field's grass like this—here today, thrown into the fire tomorrow—won't he much more clothe you, you of little faith? ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?
31 "So don't worry, asking, 'What will we eat?' or 'What will we drink?' or 'What will we wear?' ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.
32 For those who don't know the Father chase all these things, but your heavenly Father knows you need them. ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ.
33 But seek first our Father's kingdom and his righteousness, and all these will be added to you. ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
34 So don't worry about tomorrow—it will worry about itself. Each day has enough trouble of its own." ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]