Skip to content
The Believer's Library

Biblica® Open Kannada Contemporary Version 2022

Matthew 7 OKCV

Show OKCV only
Verse × ×
1 "Do not judge, so that you may not be judged. “ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ.
2 For you'll be judged by the judgment you use, and measured by the measure you give. ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.
3 Why look at the speck in your brother's eye but miss the log in your own? “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?
4 Or how can you tell your brother, 'Let me remove the speck from your eye,' when a log is in yours? ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?
5 Hypocrite, first remove the log from your own eye; then you'll see clearly to remove the speck from your brother's eye. ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.
6 "Don't give dogs what is holy, or throw your pearls before pigs—they'll trample them underfoot, then turn and tear you apart. “ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.
7 "Ask, and you'll receive it; seek, and you'll find; knock, and it'll open for you. “ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
8 For everyone who asks receives, whoever seeks finds, and whoever knocks, it will be opened. ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.
9 Or what person among you, if his son asks him for bread, will give him a stone? “ನಿಮ್ಮಲ್ಲಿ ಯಾವನಾದರೂ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ?
10 Or if he asks for a fish, will give him a snake? ಇಲ್ಲವೆ ಮೀನನ್ನು ಕೇಳಿದರೆ ಅವನಿಗೆ ಹಾವನ್ನು ಕೊಡುವನೇ?
11 So if you, being evil, know how to give your children good gifts, how much more will your Father in heaven give good things to those who ask him? ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!
12 "So in everything, treat people the way you want them to treat you; for this is the Law and the Prophets. ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.
13 "Enter through the narrow gate, for the gate is wide, the road broad, leading to destruction, and many enter through it. “ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು.
14 But the gate is narrow, the road narrow, that leads to life; few find it. ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.
15 "Beware false prophets: they come to you in sheep's clothing but are ravenous wolves inside. “ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.
16 By their fruit you will recognize them. Are grapes gathered from thornbushes, or figs from thistles? ಅವರವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಿಂದ ದ್ರಾಕ್ಷಿಯನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಕೀಳುವರೋ?
17 In the same way, every good tree bears good fruit, but the bad tree bears bad fruit. ಅದರಂತೆಯೇ, ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಆದರೆ ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.
18 A good tree cannot bear bad fruit, nor can a bad tree bear good fruit. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು, ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡಲಾರದು.
19 Every tree that does not bear good fruit is cut down and thrown into the fire. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
20 So then, by their fruit you will recognize them. ಆದ್ದರಿಂದ ಅವರವರ ಫಲಗಳಿಂದಲೇ ನೀವು ಅವರನ್ನು ತಿಳಿದುಕೊಳ್ಳುವಿರಿ.
21 "Not everyone who says to me, 'Lord, Lord,' will enter the kingdom of our Father, but the one who does the will of my Father in heaven. “ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.
22 Many will say to me on that day, 'Lord, Lord, didn't we prophesy in your name, drive out demons in your name, do many miracles in your name?' ಆ ದಿನದಲ್ಲಿ, ‘ಕರ್ತದೇವರೇ, ಕರ್ತದೇವರೇ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.
23 Then I will tell them plainly: 'I never knew you; get away from me, you lawbreakers.' ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.
24 "So anyone who hears these words of mine and does them will be like a wise man whose house was built on the rock. “ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.
25 Rain fell, floods came, winds blew and beat against that house, but it didn't fall, because it was founded on rock. ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.
26 And everyone who hears these words of mine and doesn't do them is like a foolish man who built his house on sand. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.
27 The rain fell, floods came, winds blew and hit that house, and it fell—and its fall was great." ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.
28 When Jesus had finished saying these words, the crowds were astonished at his teaching, ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.
29 because he was teaching them as one who had authority, and not as their scribes. ಏಕೆಂದರೆ, ಯೇಸು ಅವರ ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]