Skip to content
The Believer's Library

Biblica® Open Kannada Contemporary Version 2022

Matthew 8 OKCV

Show OKCV only
Verse × ×
1 When he came down from the mountain, great crowds followed him. ಯೇಸು ಪರ್ವತವನ್ನು ಇಳಿದು ಬಂದಾಗ, ಜನರು ದೊಡ್ಡ ಸಮೂಹವಾಗಿ ಅವರನ್ನು ಹಿಂಬಾಲಿಸಿದರು.
2 A man with leprosy approached, knelt before him, saying, "Lord, if you're willing, you can make me clean." ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು.
3 Jesus reached out his hand and touched him: "I am willing; be clean." His leprosy vanished at once. ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
4 Jesus told him, "Tell no one, but go show yourself to the priest and offer the gift Moses commanded, as testimony to them." ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.
5 When he entered Capernaum, a centurion came to him, appealing to him, ಯೇಸು ಕಪೆರ್ನೌಮಿಗೆ ಪ್ರವೇಶಿಸಿದಾಗ, ಒಬ್ಬ ಶತಾಧಿಪತಿಯು ಅವರ ಬಳಿಗೆ ಬಂದು,
6 and saying, "Lord, my servant is lying at home paralyzed, suffering terribly." “ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು.
7 He said to him, "I will come and heal him." ಯೇಸು ಅವನಿಗೆ, “ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ,” ಎಂದರು.
8 The centurion replied, "Lord, I'm not worthy for you to come under my roof; just say the word, and my servant will be healed. ಅದಕ್ಕೆ ಶತಾಧಿಪತಿಯು, “ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.
9 For I too am a man under authority, with soldiers under me. I tell one, 'Go,' and he goes; another, 'Come,' and he comes; my servant, 'Do this,' and he does it." ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.
10 Hearing this, Jesus was amazed and told his followers, "Truly, I tell you, I have found no one in Israel with such faith. ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
11 I tell you, many will come from east and west and sit at the table with Abraham, Isaac, and Jacob in our Father's kingdom, ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.
12 but the kingdom's sons will be thrown into the outer darkness, where there will be weeping and grinding of teeth." ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.
13 Jesus told the centurion, "Go, let it be done for you as you believed." His servant was healed that hour. ಅನಂತರ ಯೇಸು ಆ ಶತಾಧಿಪತಿಗೆ, “ಹೋಗು, ನೀನು ನಂಬಿದಂತೆಯೇ ನಿನಗಾಗಲಿ,” ಎಂದು ಹೇಳಿದರು. ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
14 When Jesus entered Peter's house, he saw Peter's mother-in-law lying in bed with a fever. ತರುವಾಯ ಯೇಸು ಪೇತ್ರನ ಮನೆಗೆ ಬಂದು, ಅವನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.
15 He touched her hand; the fever left her, and she rose and served him. ಯೇಸು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟುಹೋಯಿತು. ಆಕೆಯು ಎದ್ದು ಅವರನ್ನು ಉಪಚರಿಸಿದಳು.
16 That evening they brought him many oppressed by demons; he expelled the spirits with a word and healed everyone sick. ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು.
17 This fulfilled the prophet Isaiah's words: "He took our weaknesses and carried our diseases." ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.
18 When Jesus saw a crowd around him, he ordered them to cross to the other side. ಯೇಸು ತಮ್ಮ ಸುತ್ತಲಿದ್ದ ಜನರ ದೊಡ್ಡ ಸಮೂಹವನ್ನು ಕಂಡು, ಆಚೆದಡಕ್ಕೆ ಹೋಗಲು ಅಪ್ಪಣೆಕೊಟ್ಟರು.
19 And a scribe came up and said to him, "Teacher, I will follow you wherever you go." ಆಗ ಒಬ್ಬ ನಿಯಮ ಬೋಧಕ ಬಂದು ಯೇಸುವಿಗೆ, “ಬೋಧಕರೇ, ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು,” ಎಂದನು.
20 Jesus told him, "Foxes have dens and birds of the sky have nests, but the Son of Man has nowhere to lay his head." ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.
21 Another of the disciples said to him, "Lord, let me first go and bury my father." ಮತ್ತೊಬ್ಬ ಶಿಷ್ಯನು ಅವರಿಗೆ, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.
22 But Jesus said to him, "Follow me, and leave the dead to bury their own dead." ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.
23 When he got into the boat, his disciples followed him. ಯೇಸುವು ದೋಣಿಯನ್ನು ಹತ್ತಲು, ಶಿಷ್ಯರು ಸಹ ಅವರ ಸಂಗಡ ಹೋದರು.
24 Suddenly a great storm arose on the sea, so waves covered the boat—but he was asleep. ಇದ್ದಕ್ಕಿದ್ದ ಹಾಗೆ, ಸರೋವರದಲ್ಲಿ ದೊಡ್ಡ ಬಿರುಗಾಳಿ ಎದ್ದ ಕಾರಣ ದೋಣಿಯು ಅಲೆಗಳಿಂದ ಮುಚ್ಚುತ್ತಿತ್ತು. ಆದರೆ ಯೇಸು ನಿದ್ರಿಸುತ್ತಿದ್ದರು.
25 So they woke him: "Lord, save us! We're dying!" ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಕರ್ತನೇ, ಕಾಪಾಡು! ನಾವು ಮುಳುಗುತ್ತಿದ್ದೇವೆ!” ಎಂದರು.
26 He said to them, "Why are you afraid, you of little faith?" Then he stood and rebuked the winds and sea, and a great calm followed. ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.
27 The men were amazed: "What kind of man is this—even winds and sea obey him?" ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.
28 Crossing to the other side, to the region of the Gadarenes, two demon-possessed men came out of the tombs to meet him, so violent no one could pass that way. ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.
29 They shouted, "What do you want with us, Son of God? Have you come here to torment us before the time?" ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.
30 Now a herd of many pigs was feeding at some distance from them. ಆಗ ಅವರಿಂದ ಸ್ವಲ್ಪ ದೂರದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.
31 And the demons begged him, "If you cast us out, send us into the herd of pigs." “ನೀನು ನಮ್ಮನ್ನು ಹೊರಗೆ ಹಾಕುವುದಾದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.
32 He told them, "Go." They came out and entered the pigs, and the whole herd rushed down the cliff into the sea and died in the waters. ಯೇಸು ಅವುಗಳಿಗೆ, “ಹೋಗಿರಿ,” ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು.
33 The herdsmen fled into the city and reported everything, including what had happened to the demon-possessed men. ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು.
34 The whole city came out to meet Jesus; seeing him, they begged him to leave their region. ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]