Skip to content
The Believer's Library

Biblica® Open Kannada Contemporary Version 2022

Matthew 9 OKCV

Show OKCV only
Verse × ×
1 Jesus stepped into a boat, crossed over, and came to his own town. ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು.
2 Some brought him a paralyzed man lying on a mat. Seeing their faith, Jesus told the paralyzed man, "Take heart, son; your sins are forgiven." ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
3 At this, some of the teachers of the law said to themselves, "This man is blaspheming." ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
4 Knowing their thoughts, Jesus said, "Why do you harbor evil in your hearts? ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?
5 Which is easier: to say, 'Your sins are forgiven,' or to say, 'Get up and walk'? ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?
6 But so you know the Son of Man has authority on earth to forgive sins"—then he told the paralyzed man, "Get up, take your mat, and go home." ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
7 And the man got up and went home. ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
8 Seeing this, the crowds were awed and praised our Father, who gave people such authority. ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
9 Moving on from there, Jesus saw a man named Matthew sitting at the tax booth. "Follow me," he said. Matthew got up and followed him. ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
10 As Jesus ate in Matthew's house, many tax collectors and sinners joined him and his disciples at the table. ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.
11 Seeing this, the Pharisees asked his disciples, "Why does your teacher eat with tax collectors and sinners?" ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.
12 On hearing this, Jesus said, "It is not the healthy who need a doctor, but the sick. ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
13 But go and learn what this means: 'I want mercy, not sacrifice.' For I didn't come to call the righteous, but sinners." ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.
14 Then John's disciples came, asking him, "Why do we and the Pharisees fast often, but your disciples don't?" ಬಳಿಕ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವೂ, ಫರಿಸಾಯರೂ ಉಪವಾಸ ಮಾಡುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
15 Jesus replied, "Can the groom's friends mourn while he's with them? But days are coming when the groom is taken from them—then they'll fast. ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.
16 No one sews an unshrunk patch on an old garment; the patch pulls away from it, leaving a worse tear. “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.
17 People don't pour new wine into old wineskins; otherwise the skins burst, the wine spills, and they're ruined. Instead, new wine goes into new wineskins, so both are kept." ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.
18 While he spoke, a synagogue leader came, knelt before him, and said, "My daughter just died. But come, lay your hand on her, and she will live." ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು.
19 Jesus got up and went with him, and so did his disciples. ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು.
20 Just then a woman bleeding twelve years came up behind and touched his cloak's edge. ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ,
21 She kept saying to herself, "If I only touch his cloak, I will be healed." “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು.
22 Jesus turned, saw her. "Courage, daughter," he said, "your faith has healed you." The woman was healed at that moment. ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.
23 When Jesus entered the synagogue leader's house and saw the flute players and the noisy crowd, ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,
24 he said, "Go away. The girl is not dead but asleep." But they laughed at him. ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು.
25 When the crowd was sent out, he went in, took her hand, and the girl got up. ಆದರೆ ಜನರನ್ನು ಹೊರಗೆ ಕಳುಹಿಸಿದ ಮೇಲೆ ಯೇಸು ಒಳಗೆ ಹೋಗಿ, ಬಾಲಕಿಯ ಕೈಯನ್ನು ಹಿಡಿದು ಎಬ್ಬಿಸಿದಾಗ ಬಾಲಕಿಯು ಎದ್ದಳು.
26 News of this spread through all that region. ಈ ಸಮಾಚಾರವು ನಾಡಿನಲ್ಲೆಲ್ಲಾ ಹರಡಿತು.
27 As Jesus left there, two blind men followed, shouting, "Have mercy on us, Son of David!" ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.
28 Entering the house, the blind men came to him. He asked, "Do you believe I am able to do this?" "Yes, Lord," they said. ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.
29 Then he touched their eyes and said, "Let it be done to you according to your faith". ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು.
30 Their eyes opened. Jesus warned them sternly, "See that no one knows about this." ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.
31 But they went out and spread the news about him all over that region. ಆದರೆ ಸ್ವಸ್ಥರಾದವರು ಹೊರಟುಹೋಗಿ, ಆ ನಾಡಿನಲ್ಲೆಲ್ಲಾ ಯೇಸುವಿನ ಕೀರ್ತಿಯನ್ನು ಹರಡಿದರು.
32 As they went out, a mute, demon-possessed man was brought to Jesus. ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು.
33 Once the demon was driven out, the mute man spoke. The crowds were amazed and said, "Nothing like this has ever appeared in Israel." ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, “ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ,” ಎಂದು ಹೇಳಿದರು.
34 But the Pharisees said, "He drives out demons by the prince of demons." ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.
35 Jesus traveled every town and village, teaching in their synagogues, announcing the good news of our Father's kingdom, and healing every disease and sickness. ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.
36 Seeing the crowds, he felt compassion for them, because they were troubled and helpless, like sheep without a shepherd. ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.
37 Then he said to his disciples, "The harvest is plentiful but the workers are few. ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು.
38 So ask the Father of the harvest to send out workers into his harvest field." ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]