Skip to content
The Believer's Library

Biblica® Open Kannada Contemporary Version 2022

Micah 1 OKCV

Show OKCV only
Verse × ×
1 The word of our Father to Micah of Moresheth in the days of Jotham, Ahaz, and Hezekiah, kings of Judah—what he saw about Samaria and Jerusalem. ಯೆಹೂದದ ಅರಸರಾದ ಯೋತಾಮನ ಆಹಾಜನ, ಹಿಜ್ಕೀಯನ, ದಿವಸಗಳಲ್ಲಿ ಮೊರೇಷೆತಿನವನಾದ ಮೀಕನಿಗೆ ಬಂದ ಯೆಹೋವ ದೇವರ ವಾಕ್ಯವು. ಅವನು ಸಮಾರ್ಯ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡ ದರ್ಶನ.
2 Hear, all you peoples; listen, earth, and all that fills it—let the Sovereign Father be a witness against you, the Sovereign Father from his holy temple. ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.
3 For look—our Father is coming out from his place; he will come down and tread on the high places of the earth. ಯೆಹೋವ ದೇವರು ತಮ್ಮ ವಾಸಸ್ಥಾನದಿಂದ ಇಳಿದು ಬರುತ್ತಾರೆ. ಅವರು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ಸಂಚರಿಸುತ್ತಾರೆ.
4 The mountains will melt beneath him, and the valleys will split apart, like wax before the fire, like waters poured down a steep slope. ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ರಭಸವಾಗಿ ಹರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವುವು; ತಗ್ಗುಗಳು ಸೀಳುವುವು.
5 All this is because Jacob rebelled and the house of Israel sinned. What is Jacob's rebellion? Isn't it Samaria? And what is Judah's high place? Isn't it Jerusalem? ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?
6 So I will make Samaria a heap of ruins in the open field, a place for planting vineyards. I will pour her stones down into the valley and lay bare her foundations. ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು.
7 All her carved images will be shattered, all her wages burned in the fire; all her idols I will lay waste. For from a prostitute's wages she gathered them, and to a prostitute's wages they will return. ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ.
8 Because of this I will lament and wail; I will go stripped and naked. I will howl like jackals and moan like ostriches. ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.
9 For her wound is incurable; it has come all the way to Judah. It has reached the gate of my people, all the way to Jerusalem. ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.
10 Do not tell it in Gath; do not weep at all. In Beth-le-aphrah roll yourselves in the dust. ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಬೇತ್ ಒಫ್‌ರಾಹದಲ್ಲಿ ಧೂಳಿನಲ್ಲಿ ಹೊರಳಾಡು.
11 Pass on your way, you who live in Shaphir, in nakedness and shame. Those who live in Zaanan do not come out; the wailing of Beth-ezel leaves you with no place to stand. ಶಾಫೀರಿನ ನಿವಾಸಿಯೇ, ನಗ್ನತೆಯಿಂದಲೂ ನಾಚಿಕೆಯಿಂದಲೂ ಹಾದುಹೋಗಿರಿ, ಚಾನಾನಿನಲ್ಲಿ ವಾಸಿಸುವವರು ಹೊರಗೆ ಬರುವುದಿಲ್ಲ, ಬೇತ್ ಎಚೆಲು ನರಳುತ್ತಿದೆ. ಅದು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದಿಲ್ಲ.
12 For those who live in Maroth wait anxiously for good, because disaster has come down from our Father to the gate of Jerusalem. ಕೇಡು ಯೆಹೋವ ದೇವರಿಂದ ಇಳಿದು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು ವೇದನೆ ಪಡುತ್ತಾರೆ.
13 Harness the horses to the chariot, you who live in Lachish. She was the beginning of sin to the daughter of Zion, for in you the rebellions of Israel were found. ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು.
14 Therefore you will give parting gifts to Moresheth-gath; the houses of Achzib will be a deception to the kings of Israel. ಹೀಗಿರುವುದರಿಂದ ಮೋರೆಶತ್ ಗತ್ ಊರಿಗೆ ಅಗಲಿ ಹೋಗುವ ಕಾಣಿಕೆಗಳನ್ನು ಕೊಡುವೆ. ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಮೋಸಮಾಡುವುವು.
15 Once more I will bring a conqueror against you, you who live in Mareshah; the glory of Israel will come to Adullam. ಮಾರೇಷದ ನಿವಾಸಿಯೇ, ನಿನಗೆ ವಿರೋಧವಾಗಿ ಜಯಶಾಲಿಗಳನ್ನು ನಾನು ತರುವೆನು. ಇಸ್ರಾಯೇಲಿನ ಮಹಿಮೆಯಾದಾತನು ಅದುಲ್ಲಾಮಿನ ಮಟ್ಟಿಗೂ ಬರುವನು.
16 Shave your head and cut off your hair for the children you love; make yourself as bald as the eagle, for they will go from you into exile. ನಿನ್ನ ಮುದ್ದುಮಕ್ಕಳಿಗೋಸ್ಕರ ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]