Skip to content
The Believer's Library

Biblica® Open Kannada Contemporary Version 2022

Micah 2 OKCV

Show OKCV only
Verse × ×
1 Woe to those who plot wickedness and work out evil upon their beds! At the morning light they carry it out, because they have the power to do it. ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.
2 They covet fields and seize them, and houses, and carry them off. They oppress a man and his house, a person and his inheritance. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.
3 Therefore this is what our Father says: Look, against this family I am devising disaster, from which you cannot pull your necks free; you will not be able to hold your heads high, for it is an evil time. ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ,
4 In that day they will take up a taunt against you and wail with bitter lamentation, saying, "We are utterly ruined! He trades away the portion of my people; how he strips it from me! To the traitor he parcels out our fields." ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು.
5 Therefore you will have no one to cast the measuring line by lot in the assembly of our Father. ಆದ್ದರಿಂದ ಚೀಟುಹಾಕಿ ದೇಶವನ್ನು ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ.
6 "Do not preach!" they preach. "No one should preach such things; disgrace will not overtake us." “ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.
7 Should this be said, house of Jacob? Is the Spirit of our Father impatient? Are these his deeds? Do not my words bring good to the one who walks uprightly? ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?
8 But lately my children have risen up as an enemy. You strip the rich robe from those who pass by unsuspecting, like men returning from war who wanted no fight. ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ. ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ ಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ.
9 You drive the women of my people out of their pleasant homes; from their little children you take away my splendor forever. ನನ್ನ ಜನರ ಸ್ತ್ರೀಯರನ್ನು ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. ಅವರ ಮಕ್ಕಳಿಂದ ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ.
10 Get up and go, for this is no place of rest; because it is defiled, it brings destruction—a grievous destruction. ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.
11 If a man who lives by empty deceit were to lie, "I will preach to you of wine and alcohol," he would be just the preacher for this people! ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
12 I will surely gather all of you, Jacob; I will surely bring together the remnant of Israel. I will set them as one, like sheep in a pen, like a flock in the midst of their pasture—a place loud with people. “ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.
13 The one who breaks open the way goes up before them; they break through and pass the gate, going out through it. Their King goes on ahead of them, our Father at their head. ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]