Skip to content
The Believer's Library

Biblica® Open Kannada Contemporary Version 2022

Micah 3 OKCV

Show OKCV only
Verse × ×
1 Then I said: Listen, leaders of Jacob, rulers of the house of Israel! Isn't knowing justice your duty? ಆಗ ನಾನು, “ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ.
2 You who hate good and love evil, who tear the skin from my people and their flesh from their bones; ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,
3 who eat the flesh of my people, strip off their skin, and break their bones in pieces; who chop them up like meat for the pot, like flesh inside the cauldron. ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕುತ್ತಾರೆ. ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.”
4 Then they will cry out to our Father, but he will not answer them; he will hide his face from them at that time, because of the evil they have done. ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.
5 This is what our Father says about the prophets who lead my people astray: when they are fed, they cry "Peace," but declare war on anyone who puts nothing in their mouths. ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
6 Therefore night will come over you, without vision; darkness for you, without divination. The sun will set on the prophets, and the day will go dark over them. ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.
7 The seers will be ashamed and the diviners disgraced; they will all cover their mouths in shame, for there is no answer from our Father. ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”
8 But as for me, I am filled with power—with the Spirit of our Father—and with justice and might, to declare to Jacob his rebellion and to Israel his sin. ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
9 Hear this, you leaders of the house of Jacob and rulers of the house of Israel, who despise justice and pervert everything that is right, ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ,
10 who build Zion with bloodshed and Jerusalem with wrongdoing. ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
11 Her leaders judge for a bribe, her priests teach for a price, and her prophets divine for silver; yet they lean on our Father and say, "Is not our Father among us? No disaster can come upon us." ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.
12 Therefore because of you Zion will be plowed like a field, Jerusalem will become a heap of ruins, and the temple mount a forested hilltop. ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]