Skip to content
The Believer's Library

Biblica® Open Kannada Contemporary Version 2022

Micah 4 OKCV

Side by side with the Father's Heart Bible™

ಯೆಹೋವ ದೇವರ ಬೆಟ್ಟ

1ಅಂತ್ಯಕಾಲದಲ್ಲಿ,ಯೆಹೋವ ದೇವರ ಮಂದಿರದ ಪರ್ವತವುಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿಬೆಳೆದು ನೆಲೆಗೊಳ್ಳುವುದು,ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.

2ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು,“ಬನ್ನಿರಿ, ಯೆಹೋವ ದೇವರ ಪರ್ವತಕ್ಕೂಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ.ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು.ನಾವು ಅವರ ದಾರಿಗಳಲ್ಲಿ ನಡೆಯುವೆವು.ಚೀಯೋನಿನಿಂದ ದೇವರ ನಿಯಮವೂಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”

3ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು.ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು.ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ.ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.

4ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು.ಭಯಪಡಿಸುವವನು ಯಾರೂ ಇರುವುದಿಲ್ಲ.ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.

5ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನುತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು.ಆದರೆ ನಾವು ನಮ್ಮ ದೇವರಾದಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.

ದೇವರ ಯೋಜನೆ

6ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಆ ದಿವಸದಲ್ಲಿ”ನಾನು ಕುಂಟಾದವರನ್ನು ಒಟ್ಟುಗೂಡಿಸುವೆನು.ನಾನು ತಳ್ಳಿಬಿಟ್ಟದ್ದನ್ನೂ ಕಷ್ಟಪಡಿಸಿದವರನ್ನೂಒಂದಾಗಿ ಸೇರಿಸುವೆನು.

7“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನುಬಲವಾದ ಜನಾಂಗವಾಗಿಯೂ ಮಾಡುವೆನು.ಯೆಹೋವ ದೇವರು ಇಂದಿನಿಂದ ಸದಾಕಾಲವೂಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.

8ಕುರಿಮಂದೆಯ ಬುರುಜೇ,ಚೀಯೋನ್ ಪುತ್ರಿಯ ದುರ್ಗವೇ,ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು.ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”

9ಈಗ ಏಕೆ ಗಟ್ಟಿಯಾಗಿ ಕೂಗುತ್ತೀ?ನಿನ್ನಲ್ಲಿ ಅರಸನಿಲ್ಲವೋ?ನಿನ್ನ ಅಧಿಕಾರಿಯು ನಾಶವಾದನೋ?ಹೆರುವವಳಂತೆ ನಿನಗೆ ವೇದನೆ ಬಂದಿರುವುದೋ?

10ಚೀಯೋನ್ ಪುತ್ರಿಯೇ ಹೆರುವವಳಂತೆವೇದನೆ ತಾಳಿಕೋ,ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟುಹೊಲದಲ್ಲಿ ವಾಸಮಾಡಿಬಾಬಿಲೋನಿಗೆ ಹೋಗುವೆ,ಅಲ್ಲಿ ನಿನಗೆ ಬಿಡುಗಡೆಯಾಗುವುದು.ಅಲ್ಲಿ ಯೆಹೋವ ದೇವರು ನಿನ್ನನ್ನುನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.

11ಆದರೆ ಈಗ ಅನೇಕ ಜನಾಂಗಗಳುನಿನಗೆ ವಿರೋಧವಾಗಿ ಕೂಡಿಬಂದಿವೆ.ಅವರು, “ಯೆರೂಸಲೇಮನ್ನು ಕೆಡಿಸೋಣ.ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.

12ಆದರೆ ಯೆಹೋವ ದೇವರ ಯೋಚನೆಗಳುಅವರಿಗೆ ತಿಳಿದಿಲ್ಲ.ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ.ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು.

13ಚೀಯೋನ್ ಪುತ್ರಿಯೇ, ಎದ್ದು ತುಳಿ.ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು.ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ.ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]