Skip to content
The Believer's Library

Biblica® Open Kannada Contemporary Version 2022

Nahum 2 OKCV

Side by side with the Father's Heart Bible™

ನಿನೆವೆಯು ಬೀಳುವುದು

1ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ,ಕೋಟೆಯನ್ನು ಭದ್ರಪಡಿಸು;ದಾರಿಯನ್ನು ಕಾಯಿ;ನಡುವನ್ನು ಬಲಪಡಿಸಿಕೋ;ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.

2ಯೆಹೋವ ದೇವರು ಯಾಕೋಬಿನ ಹೆಚ್ಚಳವನ್ನುಇಸ್ರಾಯೇಲಿನ ಹೆಚ್ಚಳದ ಹಾಗೆಯೇ ಪುನಃ ಸ್ಥಾಪಿಸುತ್ತಾರೆ.ನಾಶಕರು ಅವುಗಳನ್ನು ನಾಶಮಾಡಿದರೂಅವರ ದ್ರಾಕ್ಷಿಬಳ್ಳಿಗಳನ್ನು ಕೆಡಿಸಿದ್ದಾರೆ.

3ಸೈನಿಕರ ಗುರಾಣಿಗಳು ಕೆಂಪಾಗಿವೆ;ಯುದ್ಧವೀರರು ರಕ್ತವರ್ಣದ ಬಟ್ಟೆ ಧರಿಸಿದ್ದಾರೆ;ಆತನು ಸಿದ್ಧಮಾಡುವ ದಿವಸದಲ್ಲಿ,ರಥಗಳ ಉಕ್ಕು ಥಳಥಳಿಸುವುದು,ತುರಾಯಿ ಮರದಿಂದ ಮಾಡಿದ ಈಟಿಗಳು ಝಳಪಿಸುವುವು;

4ರಥಗಳು ಬೀದಿಗಳಲ್ಲಿ ಬಿರುಗಾಳಿಯಂತೆ ಓಡಾಡುತ್ತವೆ,ಅವು ಚೌಕಗಳಲ್ಲಿ ವೇಗವಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ನುಗ್ಗುತ್ತವೆ.ಅವು ಉರಿಯುವ ಪಂಜುಗಳಂತೆ ಕಾಣುತ್ತವೆ;ಅವರು ಮಿಂಚಿನಂತೆ ಸುತ್ತಾಡುತ್ತಾರೆ.

5ನಿನೆವೆಯು ತನ್ನ ಸೇನಾಪತಿಗಳನ್ನು ಕರೆಕಳುಹಿಸಿದ್ದಾನೆ.ಅವರು ತಮ್ಮ ನಡೆಯಲ್ಲಿ ಎಡವುವರು.ಅವರು ಸುಣ್ಣದ ಗೋಡೆಯ ಬಳಿಗೆ ತ್ವರೆಯಾಗಿ ಬರುವರು.ರಕ್ಷಣಾತ್ಮಕ ಗುರಾಣಿಯನ್ನು ಸಿದ್ಧ ಮಾಡಲಾಗಿದೆ.

6ನದಿಗಳ ಬಾಗಿಲುಗಳು ತೆರೆಯಲಾಗಿವೆ;ಅರಮನೆ ಬಿದ್ದುಹೋಗುವುದು.

7ನಿನೆವೆಯು ಸೆರೆಯಾಗಿಹೋಗಬೇಕೆಂಬ ಆಜ್ಞೆಯಾಗಿದೆ.ಅವಳ ದಾಸಿಯರು ಪಾರಿವಾಳಗಳಂತೆ ರೋದಿಸುವರು,ತಮ್ಮ ಎದೆಗಳನ್ನು ಬಡಿದುಕೊಳ್ಳುವರು.

8ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು.ಅದರ ನೀರು ಹರಿದು ಖಾಲಿಯಾಗುತ್ತಲಿದೆ.“ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ,ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ.

9ಬೆಳ್ಳಿಯನ್ನು ಸುಲಿದುಕೊಳ್ಳಿರಿ;ಬಂಗಾರವನ್ನು ಸುಲಿದುಕೊಳ್ಳಿರಿ.ಕೂಡಿಸಿಟ್ಟ ಧನಕ್ಕೂ,ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.

10ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ,ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ.ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ.

11ಸಿಂಹದ ಗವಿಯೂ,ಎಳೆಯ ಸಿಂಹಗಳು ಮೇಯುವ ಸ್ಥಳವೂ ಎಲ್ಲಿ?ಸಿಂಹವೂ, ಸಿಂಹಿಣಿಯೂ,ಸಿಂಹದ ಮರಿಗಳೂ ಭಯವಿಲ್ಲದೆ ನಡೆದಾಡುವ ಸ್ಥಳಗಳೆಲ್ಲಿ?

12ಸಿಂಹವು, ತನ್ನ ಮರಿಗಳಿಗೆ,ಸಿಂಹಿಣಿಗಳಿಗೆ, ಕೊರಳು ಹಿಸುಕಿ ಕೊಂದ ಪ್ರಾಣಿಗಳಿಂದತನ್ನ ಗುಹೆಯನ್ನು ತುಂಬಿಸುತ್ತಿತ್ತು.

13ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ:“ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ.ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ.ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು.ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ.ನಿನ್ನ ರಾಯಭಾರಿಗಳ ಧ್ವನಿಯುಇನ್ನು ಕೇಳಿಸದು.”

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]