Skip to content
The Believer's Library

Biblica® Open Kannada Contemporary Version 2022

Nahum 3 OKCV

Side by side with the Father's Heart Bible™

ನಿನೆವೆಗೆ ಕಷ್ಟ

1ರಕ್ತಮಯ ಪಟ್ಟಣಕ್ಕೆ ಕಷ್ಟ,ಅದೆಲ್ಲಾ ಸುಳ್ಳಿನಿಂದಲೂ,ಕಳ್ಳತನದಿಂದಲೂ ತುಂಬಿದೆ,ಕೊಳ್ಳೆಯನ್ನೂ ಬಿಡುವುದಿಲ್ಲ.

2ಚಾವಟಿಗೆ, ಚಬುಕಿನ ಶಬ್ದವೂ,ಚಕ್ರಗಳ ಧಡಧಡನೆಯ ಶಬ್ದವೂ,ಕುದುರೆಗಳ ಕುಣಿದಾಟವೂ,ರಥಗಳ ಹಾರಾಟವೂ ಇದೆ.

3ಸವಾರರು ಹತ್ತುತ್ತಾರೆ,ಈಟಿಗಳು ಥಳಥಳಿಸುತ್ತವೆ,ಖಡ್ಗಗಳು ಮಿಂಚುತ್ತವೆ,ಹತರಾದವರು ಬಹಳ;ಹೆಣಗಳ ರಾಶಿ;ಅಸಂಖ್ಯಾತ ಮೃತ ದೇಹಗಳು,ಶವಗಳ ಮೇಲೆ ತತ್ತರಿಸುತ್ತಿರುವ ಜನರು,

4ಇದೆಲ್ಲವೂ ಆ ಒಬ್ಬ ವೇಶ್ಯೆಯ ಕಾಮತೃಷೆಯಿಂದಾಗಿ,ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ಬಹಳ.ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ,ತನ್ನ ಮಾಟಗಳಿಂದ ಗೋತ್ರಗಳನ್ನೂ ಗುಲಾಮರನ್ನಾಗಿ ಮಾಡಿಕೊಂಡಳಲ್ಲವೇ?

5ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,“ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ.ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲಿಂದ ಎತ್ತಿ,ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ,ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.

6ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ,ನಿನ್ನನ್ನು ನೀಚಳನ್ನಾಗಿ ಮಾಡಿ,ನಿನ್ನನ್ನು ಪರಿಹಾಸ್ಯಕ್ಕೀಡುಮಾಡುವೆನು.

7ನಿನ್ನನ್ನು ನೋಡುವವರೆಲ್ಲರೂ ನಿನ್ನಿಂದ ಓಡಿಹೋಗಿ ಹೀಗೆ ಹೇಳುವರು,‘ನಿನೆವೆ ಹಾಳಾಯಿತು, ಅದಕ್ಕೆ ಯಾರು ಚಿಂತೆಪಡುವರು?’ನಿನ್ನನ್ನು ಆದರಿಸುವವರನ್ನು ನಾನು ಎಲ್ಲಿಂದ ಹುಡುಕಲಿ.”

8ನೈಲ್ ನದಿಯ ಬಳಿ ನೆಲೆಯಾಗಿದ್ದ ತೆಬೆಸ್ಸಿಗಿಂತನೀನು ಒಳ್ಳೆಯವಳೋ?ಅವಳ ಸುತ್ತಲೂ ನೀರಿತ್ತು.ನದಿ ಅವಳ ರಕ್ಷಣೆ,ನೀರು ಅವಳ ಗೋಡೆ.

9ಕೂಷ್ ಮತ್ತು ಈಜಿಪ್ಟ್ ಅವಳ ಅಪಾರ ಬಲವಾಗಿದ್ದವು.ಪೂಟರೂ, ಲಿಬಿಯದವರೂ ಅವಳ ಸಹಾಯಕರಾಗಿದ್ದರು.

10ಆದರೆ ಅವಳು ಸೆರೆಯಾಗಿದೇಶಾಂತರಕ್ಕೆ ಹೋದಳು.ಅವಳ ಕೂಸುಗಳು ಸಹಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು.ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು.ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.

11ನೀನೂ ಸಹ ಅಮಲೇರಿ ಅಡಗಿಕೊಳ್ಳುವೆ;ನೀನೂ ಸಹ ಶತ್ರುವಿನ ನಿಮಿತ್ತಅಡಗಿಕೊಳ್ಳಲು ಆಶ್ರಯ ಸ್ಥಾನವನ್ನು ಹುಡುಕುವೆ.

12ನಿನ್ನ ಕೋಟೆಗಳೆಲ್ಲಾ ಮೊದಲನೆಯ ಮಾಗಿದ ಹಣ್ಣುಳ್ಳಅಂಜೂರದ ಗಿಡಗಳ ಹಾಗಿರುವುವು.ಅಲ್ಲಾಡಿಸಿದರೆ ಹಣ್ಣುತಿನ್ನುವವನ ಬಾಯಿಗೆ ಬೀಳುವುದು.

13ಇಗೋ, ನಿನ್ನ ಸೈನ್ಯಗಳನ್ನು ನೋಡು.ಅವರೆಲ್ಲರೂ ಮಹಿಳೆಯರೇ.ನಿನ್ನ ದೇಶದ ಬಾಗಿಲುಗಳುನಿನ್ನ ಶತ್ರುಗಳಿಗೆ ವಿಶಾಲವಾಗಿ ತೆರೆದಿವೆ.ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಟ್ಟಿದೆ.

14ಮುತ್ತಿಗೆಗೋಸ್ಕರ ನೀರನ್ನು ಸೇದು;ನಿನ್ನ ಬಲವಾದ ಕೋಟೆಗಳನ್ನು ಭದ್ರಮಾಡು; ಕೆಸರಿನಲ್ಲಿ ಸೇರು;ಮಣ್ಣನ್ನು ತುಳಿ;ಇಟ್ಟಿಗೆ ಅಚ್ಚನ್ನು ಹಿಡಿ.

15ಅಲ್ಲೇ ಬೆಂಕಿ ನಿನ್ನನ್ನು ತಿನ್ನುವುದು;ಖಡ್ಗವು ನಿನ್ನನ್ನು ಕಡಿದುಬಿಡುವುದು;ಹುಲ್ಲು ಮೇಯುವ ಹುಳ ನಿನ್ನನ್ನು ತಿಂದುಬಿಡುವುದು;ಬಹುಮಂದಿಯಾಗು, ಮಿಡತೆಗಳಂತೆಬಹುಮಂದಿಯಾಗು, ಗುಂಪು ಮಿಡತೆಗಳಂತೆ

16ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತಹೆಚ್ಚಾಗಿ ಸಂಖ್ಯೆಯಲ್ಲಿ ಬೆಳೆಸಿದ್ದೀ.ಆದರೆ ಅವರು ಮಿಡತೆಗಳಂತೆ ದೇಶವನ್ನುಸುಲಿದುಕೊಂಡು ಹಾರಿಹೋಗುವರು.

17ನಿನ್ನ ಕಾವಲುಗಾರರು ಮಿಡತೆಗಳ ಹಾಗೆಯೂ,ನಿನ್ನ ಅಧಿಪತಿಗಳು ತಂಪಾದ ದಿವಸದಲ್ಲಿ ಬೇಲಿಗಳೊಳಗೆಇಳಿದುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ.ಸೂರ್ಯೋದಯವಾಗುವಾಗ ಹಾರಿ ಹೋಗುತ್ತವೆ.ಆಗ ಅವು ಎಲ್ಲಿದ್ದಾವೆಂದು ಅವುಗಳ ಸ್ಥಳವು ತಿಳಿಯುವುದಿಲ್ಲ.

18ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ.ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ.ಕೂಡಿಸುವವರು ಯಾರೂ ಇಲ್ಲದಂತೆನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.

19ನಿನ್ನ ಗಾಯಕ್ಕೆ ಮದ್ದಿಲ್ಲ,ನಿನ್ನ ಗಾಯ ಪ್ರಾಣನಾಶಕ.ನಿನ್ನ ಸುದ್ದಿಯನ್ನು ಕೇಳುವವರೆಲ್ಲರೂನಿನ್ನ ಪತನಕ್ಕಾಗಿ ಕೈ ತಟ್ಟುವರು.ಏಕೆಂದರೆ ನಿನ್ನ ಕೆಡುಕಿಗೆನಿತ್ಯವೂ ಗುರಿಯಾಗದವರು ಯಾರಿದ್ದಾರೆ?

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]