Skip to content
The Believer's Library

Biblica® Open Kannada Contemporary Version 2022

Numbers 1 OKCV

Show OKCV only
Verse × ×
1 Our Father spoke to Moses in the Sinai wilderness, in the tent of meeting, on the first day of the second month of the second year after they left the land of Egypt. He said: ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:
2 "Count the whole community of Israel's people, by clans and fathers' houses—every male, by name, head by head. “ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.
3 Register everyone in Israel twenty and older who can serve in the army—you and Aaron—by their divisions. ಇಸ್ರಾಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು ಅಂದರೆ, ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚಾದ ವಯಸ್ಸುಳ್ಳ ಎಲ್ಲರನ್ನು ಸೈನ್ಯಸೈನ್ಯವಾಗಿ ನೀನು ಮತ್ತು ಆರೋನನು ಪಟ್ಟಿಮಾಡಬೇಕು.
4 A man from each tribe is to be with you, each one the head of his family. ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.
5 "Names of the men who will stand with you: from Reuben, Elizur son of Shedeur. “ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್,
6 "From Simeon, Shelumiel son of Zurishaddai; ಸಿಮೆಯೋನ್ ಗೋತ್ರದಿಂದ ಚುರೀಷದ್ದೈಯನ ಮಗ ಶೆಲುಮೀಯೇಲ್,
7 "From Judah, Nahshon son of Amminadab; ಯೆಹೂದ ಗೋತ್ರದಿಂದ ಅಮ್ಮೀನಾದಾಬನ ಮಗ ನಹಶೋನ್,
8 "From Issachar, Nethanel son of Zuar; ಇಸ್ಸಾಕರ್ ಗೋತ್ರದಿಂದ ಚೂವಾರನ ಮಗ ನೆತನೆಯೇಲ್,
9 "From Zebulun, Eliab son of Helon; ಜೆಬುಲೂನ್ ಗೋತ್ರದಿಂದ ಹೇಲೋನನ ಮಗ ಎಲೀಯಾಬ್,
10 "From the sons of Joseph: from Ephraim, Elishama son of Ammihud; from Manasseh, Gamaliel son of Pedahzur; ಯೋಸೇಫನ ಗೋತ್ರದಲ್ಲಿ, ಎಫ್ರಾಯೀಮ್‌ನಿಂದ ಅಮ್ಮೀಹೂದನ ಮಗ ಎಲೀಷಾಮಾ, ಮನಸ್ಸೆ ಗೋತ್ರದಿಂದ ಪೆದಾಚೂರನ ಮಗನಾದ ಗಮಲಿಯೇಲ್,
11 "From Benjamin, Abidan son of Gideoni; ಬೆನ್ಯಾಮೀನ್ ಗೋತ್ರದಿಂದ ಗಿದ್ಯೋನಿನ ಮಗನಾದ ಅಬೀದಾನ,
12 "From Dan, Ahiezer son of Ammishaddai; ದಾನ್ ಗೋತ್ರದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್,
13 "From Asher, Pagiel son of Ochran; ಆಶೇರ್ ಗೋತ್ರದಿಂದ ಒಕ್ರಾನನ ಮಗ ಪಗೀಯೇಲ್,
14 "From Gad, Eliasaph son of Deuel; ಗಾದ್ ಗೋತ್ರದಿಂದ ದೆವುಯೇಲನ ಮಗ ಎಲ್ಯಾಸಾಫ್,
15 "From Naphtali, Ahira son of Enan. ನಫ್ತಾಲಿ ಗೋತ್ರದಿಂದ ಏನಾನನ ಮಗ ಅಹೀರನು.”
16 "These were the community's called ones, leaders of their ancestral tribes, heads of Israel's clans." ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.
17 So Moses and Aaron took these men who had been designated by name, ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆ ಮತ್ತು ಆರೋನನು ತಮ್ಮ ಜೊತೆ ತೆಗೆದುಕೊಂಡರು.
18 on the first day of the second month they gathered the whole community. The people registered their ancestry by clan and family—every male twenty years old and older, listed by name, one by one, ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.
19 as our Father had commanded Moses. So Moses counted them in the wilderness of Sinai. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.
20 From Reuben's descendants, Israel's firstborn: recorded by clan and family, name by name, every male twenty years old and up, able to serve in war. ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
21 Those counted from the tribe of Reuben were 46,500. ರೂಬೇನನ ಗೋತ್ರದಲ್ಲಿ ಎಣಿಕೆಯಾದವರು 46,500 ಜನರು.
22 Simeon's descendants, by clans and families, counted by name, head by head: every male twenty years old and up, fit for the army. ಸಿಮೆಯೋನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
23 Those counted from the tribe of Simeon were 59,300. ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದವರು 59,300 ಜನರು.
24 From Gad's descendants: by clans, families, and names, every man twenty and older fit for military service. ಗಾದನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
25 Those counted from the tribe of Gad were 45,650. ಗಾದನ ಗೋತ್ರದಲ್ಲಿ ಎಣಿಕೆಯಾದವರು 45,650 ಜನರು.
26 Judah's descendants, listed by clans and families, by name, every man twenty and older able to serve in the army: ಯೆಹೂದ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
27 those counted from the tribe of Judah were 74,600. ಯೆಹೂದ ಗೋತ್ರದಲ್ಲಿ ಎಣಿಕೆಯಾದವರು 74,600 ಜನರು.
28 Issachar's descendants, listed by clan and family, by name, every man twenty years and older fit for war: ಇಸ್ಸಾಕಾರನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
29 those counted from the tribe of Issachar were 54,400. ಇಸ್ಸಾಕಾರನ ಗೋತ್ರದಲ್ಲಿ ಎಣಿಕೆಯಾದವರು 54,400 ಜನರು.
30 Zebulun's descendants: registered by clan and family, by name, every man twenty years old or older fit for military service. ಜೆಬುಲೂನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
31 Those counted from the tribe of Zebulun were 57,400. ಜೆಬುಲೂನ್ ಗೋತ್ರದಲ್ಲಿ ಎಣಿಕೆಯಾದವರು 57,400 ಜನರು.
32 Sons of Joseph, Ephraim's line: recorded by clan and family, by name, every man twenty and older fit for military service. ಯೋಸೇಫನ ಮಕ್ಕಳಾದ ಎಫ್ರಾಯೀಮನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
33 Those counted from the tribe of Ephraim were 40,500. ಎಫ್ರಾಯೀಮನ ಗೋತ್ರದಲ್ಲಿ ಎಣಿಕೆಯಾದವರು 40,500 ಜನರು.
34 Manasseh's descendants, listed by clans and families, by name, each man twenty years or older able to serve in the army: ಮನಸ್ಸೆಯ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
35 those counted from the tribe of Manasseh were 32,200. ಮನಸ್ಸೆಯ ಗೋತ್ರದಲ್ಲಿ ಎಣಿಕೆಯಾದವರು 32,200 ಜನರು.
36 From Benjamin's descendants, recorded by clan and family, by name, every man twenty years old and older, fit for military service: ಬೆನ್ಯಾಮೀನ್ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
37 those counted from the tribe of Benjamin were 35,400. ಬೆನ್ಯಾಮೀನನ ಗೋತ್ರದಲ್ಲಿ ಎಣಿಕೆಯಾದವರು 35,400 ಜನರು.
38 From Dan's descendants, listed by clan and family, by name, every man twenty years old and older fit for war: ದಾನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
39 those counted from the tribe of Dan were 62,700. ದಾನನ ಗೋತ್ರದಲ್ಲಿ ಎಣಿಕೆಯಾದವರು 62,700 ಜನರು.
40 Asher's descendants, listed by clan and family, by name: every man twenty years old and up, fit for military service. ಆಶೇರನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
41 Those counted from the tribe of Asher were 41,500. ಆಶೇರನ ಗೋತ್ರದಲ್ಲಿ ಎಣಿಕೆಯಾದವರು 41,500 ಜನರು.
42 Naphtali's descendants: by clan and family, counted by name, every man twenty and older fit for war. ನಫ್ತಾಲಿಯ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
43 Those counted from the tribe of Naphtali were 53,400. ನಫ್ತಾಲಿಯ ಗೋತ್ರದಲ್ಲಿ ಎಣಿಕೆಯಾದವರು 53,400 ಜನರು.
44 Moses, Aaron, and Israel's twelve leaders counted these men, each for his family. ಮೋಶೆ, ಆರೋನ್ ಮತ್ತು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಪ್ರತಿಯೊಬ್ಬರೂ ತಮ್ಮ ತಮ್ಮ ಕುಟುಂಬವನ್ನು ಪ್ರತಿನಿಧಿಸುತ್ತಿದ್ದರು.
45 All Israel's people were counted by families, every man twenty years old and older, fit to serve in Israel's army. ಹೀಗೆ ಇಸ್ರಾಯೇಲರಲ್ಲಿ ಎಣಿಕೆಯಾದವರೆಲ್ಲರೂ ಅವರ ಕುಟುಂಬಗಳ ಪ್ರಕಾರ ಇಪ್ಪತ್ತು ವರ್ಷದವರೂ, ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳವರೂ, ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಶಕ್ತರಾದವರೂ ಆಗಿದ್ದರು.
46 All those counted came to 603,550. ಎಣಿಕೆಯಾದವರು ಒಟ್ಟು 6,03,550 ಮಂದಿಯಾಗಿದ್ದರು.
47 But the Levites were not counted among them by their ancestral tribe. ಲೇವಿಯರ ತಂದೆಗಳ ಗೋತ್ರವನ್ನು ಇತರರೊಂದಿಗೆ ಎಣಿಸಲಿಲ್ಲ.
48 For our Father had said to Moses: ಇದಲ್ಲದೆ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ:
49 "Do not count the tribe of Levi or list them among the Israelites. “ನೀವು ಲೇವಿಯ ಕುಲವನ್ನು ಎಣಿಸಬಾರದು ಅಥವಾ ಇತರ ಇಸ್ರಾಯೇಲರ ಜನಗಣತಿಯಲ್ಲಿ ಅವರನ್ನು ಸೇರಿಸಬಾರದು.
50 Instead, put the Levites in charge of the tabernacle of the testimony, all its furnishings, and everything belonging to it. They must carry the tabernacle and its furnishings, care for it, and camp around it. ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.
51 When the tabernacle sets out, Levites take it down; when it is pitched, Levites set it up. Any outsider who comes near is to be put to death. ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.
52 Israel's people are to camp, each by his own camp, each under his own banner, by their companies. ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು.
53 The Levites must camp around the tabernacle of the testimony, so no wrath falls on the Israelite community; the Levites are to guard the tabernacle of the testimony." ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”
54 The people of Israel did everything our Father had commanded Moses; that is exactly what they did. ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]