Skip to content
The Believer's Library

Biblica® Open Kannada Contemporary Version 2022

Numbers 10 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದು:
2 "Make yourself two silver trumpets, hammered work; use them to call the community and to move the camps. “ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
3 When both sound, the whole community must gather to you at the entrance to the tent of meeting. ಅವುಗಳನ್ನು ಊದುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
4 But if only one is blown, the leaders—heads of Israel's clans—are to gather to you. ಒಂದನ್ನು ಮಾತ್ರ ಊದುವಾಗ, ಇಸ್ರಾಯೇಲರಲ್ಲಿ ಮುಖ್ಯಸ್ಥರಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
5 When you sound a blast, the camps on the east side are to set out. ನೀವು ಜಯಧ್ವನಿಯಂತೆ ಊದುವಾಗ ಪೂರ್ವದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಮುಂದೆ ಹೊರಡಬೇಕು.
6 Sound a second blast: camps on the south side set out. Sound a blast for their setting out. ನೀವು ಎರಡನೆಯ ಸಾರಿ ಆರ್ಭಟವಾಗಿ ಊದುವಾಗ, ದಕ್ಷಿಣದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಪ್ರಯಾಣ ಮಾಡಬೇಕು. ಅವರ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿ ಊದಬೇಕು.
7 But when you call the assembly together, blow a steady note, not an alarm. ಆದರೆ ಸಭೆಯನ್ನು ಕೂಡಿಸುವಾಗ ನೀವು ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಡಿರಿ.
8 Aaron's sons, the priests, are to blow the trumpets—a lasting law for you throughout your generations. “ಯಾಜಕರಾಗಿರುವ ಆರೋನನ ಪುತ್ರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
9 When you go to war in your land against the enemy crushing you, sound an alarm on the trumpets—you will be remembered before me and saved from your enemies. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.
10 Also on your day of joy, at your appointed feasts and new moons, blow the trumpets over your burnt offerings and over your peace offerings—a memorial for you before our Father. I am your Father." ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”
11 In the second year, second month, on the twentieth day, the cloud lifted from over the tabernacle of the testimony. ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎದ್ದಿತು.
12 The Israelites set out from the Sinai wilderness, stage by stage; the cloud settled in the Paran wilderness. ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು.
13 This was their first setting out, at our Father's command through Moses. ಆಗ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಪ್ರಯಾಣಮಾಡಿದ್ದು ಇದು ಮೊದಲನೇ ಸಾರಿ.
14 Judah's camp banner set out first, by their divisions, Nahshon son of Amminadab over his division. ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು.
15 Nethanel son of Zuar was over the division of the tribe of Issachar, ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗ ನೆತನೆಯೇಲ್ ಇದ್ದನು.
16 and Eliab son of Helon was over the division of the tribe of Zebulun. ಜೆಬುಲೂನನ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗ ಎಲೀಯಾಬನು ಇದ್ದನು.
17 The tabernacle was taken down, and the sons of Gershon and sons of Merari set out, carrying it. ಆಗ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ, ಮೆರಾರೀಯರೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
18 Reuben's camp standard set out by divisions, Elizur son of Shedeur over its division. ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಶೆದೇಯೂರನ ಮಗ ಎಲೀಚೂರನು ಇದ್ದನು.
19 Shelumiel son of Zurishaddai was over the division of the tribe of Simeon, ಸಿಮೆಯೋನನ ಗೋತ್ರದ ಸೈನ್ಯದ ಮೇಲೆ ಚುರೀಷದ್ದೈಯನ ಮಗ ಶೆಲುಮೀಯೇಲನು ಇದ್ದನು.
20 and Eliasaph son of Deuel was over the division of the tribe of Gad. ಗಾದನ ಗೋತ್ರದ ಸೈನ್ಯದ ಮೇಲೆ ದೆವುಯೇಲನ ಮಗ ಎಲ್ಯಾಸಾಫನು ಇದ್ದನು.
21 The Kohathites set out carrying the holy things, and the tabernacle was set up before they arrived. ಅವರ ಹಿಂದೆ ಪರಿಶುದ್ಧ ವಸ್ತುಗಳನ್ನು ಹೊರುವ ಕೊಹಾತ್ಯರು ಹೊರಟರು. ಇವರು ಬರುವಷ್ಟರೊಳಗೆ ಉಳಿದ ಲೇವಿಯರು ಗುಡಾರವನ್ನು ನಿಲ್ಲಿಸಿದರು.
22 Ephraim's camp standard set out by division, Elishama son of Ammihud over its division. ಎಫ್ರಾಯೀಮನ ಪಾಳೆಯದ ಧ್ವಜವು ಅವನ ಸೈನ್ಯಗಳ ಪ್ರಕಾರ ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀಹೂದನ ಮಗ ಎಲೀಷಾಮನು ಇದ್ದನು.
23 Gamaliel son of Pedahzur was over the division of the tribe of Manasseh, ಮನಸ್ಸೆಯ ಗೋತ್ರದ ಮೇಲೆ ಪೆದಾಚೂರನ ಮಗ ಗಮಲಿಯೇಲನು ಇದ್ದನು.
24 and Abidan son of Gideoni was over the division of the tribe of Benjamin. ಬೆನ್ಯಾಮೀನನ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗ ಅಬೀದಾನನು ಇದ್ದನು.
25 Dan's camp standard set out, rear guard of all the camps, by their divisions, with Ahiezer son of Ammishaddai over its division. ದಾನನ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಇದ್ದನು.
26 Pagiel son of Ochran was over the division of the tribe of Asher, ಆಶೇರನ ಗೋತ್ರದ ಸೈನ್ಯಗಳ ಮೇಲೆ ಒಕ್ರಾನನ ಮಗ ಪಗೀಯೇಲನು ಇದ್ದನು.
27 and Ahira son of Enan was over the division of the tribe of Naphtali. ನಫ್ತಾಲಿಯ ಗೋತ್ರದ ಸೈನ್ಯದ ಮೇಲೆ ಏನಾನ ಮಗ ಅಹೀರನು ಇದ್ದನು.
28 This was the order of march for the Israelites by their divisions as they set out. ಈ ಪ್ರಕಾರ ಇಸ್ರಾಯೇಲರು ತಮ್ಮ ಗೋತ್ರಗಳ ಪ್ರಕಾರ ಪ್ರಯಾಣವಾಗಿ ಹೊರಟರು.
29 Moses said to Hobab son of Reuel the Midianite, his father-in-law, "We are traveling to the place our Father said, 'I will give it to you.' Come with us; we will treat you well, for our Father has promised good to Israel." ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.
30 But Hobab said to him, "I will not go; I am returning to my own land and my own people." ಆಗ ಅವನು ಅವನಿಗೆ, “ನಾನು ಬರುವುದಿಲ್ಲ. ನನ್ನ ದೇಶಕ್ಕೂ ನನ್ನ ಬಂಧುಗಳ ಬಳಿಗೂ ನಾನು ಹೋಗುತ್ತೇನೆ,” ಎಂದನು.
31 Moses said, "Please don't leave us, since you know where we should camp in the wilderness, and you'll be our eyes. ಅದಕ್ಕೆ ಮೋಶೆ, “ನಮ್ಮನ್ನು ಬಿಡಬೇಡ. ಏಕೆಂದರೆ ನಾವು ಎಲ್ಲಿ ಇಳಿದುಕೊಳ್ಳಬೇಕೆಂಬುದು ನಿನಗೆ ಮಾತ್ರ ತಿಳಿದಿದೆ. ನೀನು ನಮಗೆ ಕಣ್ಣುಗಳಾಗಿರುವೆ.
32 If you come with us, whatever good our Father does for us, we'll do the same for you." ನೀನು ನಮ್ಮ ಸಂಗಡ ಬಂದರೆ ಯೆಹೋವ ದೇವರು ನಮಗೆ ಕೊಡುವುದಕ್ಕಿರುವ ಒಳ್ಳೆಯದನ್ನು ನಾವು ನಿನ್ನೊಂದಿಗೆ ಹಂಚಿಕೊಳ್ಳುವೆವು,” ಎಂದನು.
33 They set out from the mountain of our Father on a three-day journey, and the ark of our Father's covenant went ahead of them that three-day journey, seeking a resting place for them. ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.
34 The cloud of our Father was over them by day as they left the camp. ಅವರು ಪಾಳೆಯದಿಂದ ಹೊರಟಾಗ, ಯೆಹೋವ ದೇವರ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
35 Whenever the ark set out, Moses said, "Rise, O Father! Let your enemies be scattered; let those who hate you flee before you." ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”
36 Whenever it rested, he'd say, "Return, O Father, to Israel's countless thousands." ಮಂಜೂಷವು ನಿಂತಾಗ ಅವನು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಸಾವಿರಾರು ಇಸ್ರಾಯೇಲರ ಕುಟುಂಬಗಳ ಬಳಿಗೆ ಹಿಂದಿರುಗು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]