Skip to content
The Believer's Library

Biblica® Open Kannada Contemporary Version 2022

Numbers 12 OKCV

Show OKCV only
Verse × ×
1 Miriam and Aaron spoke against Moses over the Cushite woman he had married—he had married a Cushite woman. ಮೋಶೆಯು ಕೂಷ್ ದೇಶದ ಸ್ತ್ರೀಯನ್ನು ವಿವಾಹವಾಗಿದ್ದನು. ಆಕೆಯ ನಿಮಿತ್ತವಾಗಿ ಮಿರ್ಯಾಮಳೂ ಆರೋನನೂ ಮೋಶೆಗೆ ವಿರುದ್ಧವಾಗಿ ಮಾತನಾಡಲಿಕ್ಕೆ ಪ್ರಾರಂಭಿಸಿದರು.
2 They said, "Has our Father spoken only through Moses? Hasn't he also spoken through us?" And our Father heard it. ಅವರು, “ಯೆಹೋವ ದೇವರು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?” ಎಂದರು. ಅವರು ಆಡಿದ ಮಾತು ಯೆಹೋವ ದೇವರಿಗೆ ಕೇಳಿಸಿತು.
3 Now the man Moses was very humble, more than anyone else on the face of the earth. ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.
4 Suddenly our Father told Moses, Aaron, and Miriam, "Come out, you three, to the tent of meeting." The three went out. ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು.
5 Then our Father came down in a pillar of cloud, stood at the tent entrance, called Aaron and Miriam, and both came forward. ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.
6 He said, "Hear my words: if a prophet is among you, I, your Father, reveal myself to him in a vision, speak to him in a dream. ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.
7 Not so with my servant Moses; he is faithful in all my house. ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.
8 With him I speak mouth to mouth, clearly and not in riddles, and he sees the form of our Father. Why then were you not afraid to speak against my servant Moses?" ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”
9 So the anger of our Father burned against them, and he departed. ಆಗ ಯೆಹೋವ ದೇವರು ಅವರ ಮೇಲೆ ಕೋಪಗೊಂಡು ಹೊರಟು ಹೋದರು.
10 When the cloud lifted from over the tent, there was Miriam—diseased, white as snow. Aaron turned to Miriam, and there—diseased. ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು. ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ, ಇಗೋ, ಅವಳು ಕುಷ್ಠರೋಗಿಯಾಗಿದ್ದಳು.
11 Aaron told Moses, "Please, my lord, don't hold against us the sin of our foolishness and wrongdoing. ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
12 Don't let her be like a stillborn, its flesh half-consumed leaving its mother's womb." ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತು ಹೋದ ಶಿಶುವಿನ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.
13 So Moses cried out to our Father, "Please, my Father, please heal her!" ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.
14 But our Father told Moses, "If her father had only spit in her face, wouldn't she be ashamed seven days? Shut her outside the camp seven days; then bring her back." ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು.
15 Miriam was shut outside the camp seven days; the people did not move until she was brought back. ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿ ಇಟ್ಟರು. ಮಿರ್ಯಾಮಳು ತಿರುಗಿ ಒಳಗೆ ಬರುವವರೆಗೆ ಜನರು ಪ್ರಯಾಣ ಮಾಡಲಿಲ್ಲ.
16 After that the people set out from Hazeroth and camped in the Wilderness of Paran. ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]