Skip to content
The Believer's Library

Biblica® Open Kannada Contemporary Version 2022

Numbers 14 OKCV

Show OKCV only
Verse × ×
1 Then the whole congregation raised their voices and cried out, and the people wept that night. ಆಗ ಜನರೆಲ್ಲರೂ ತಮ್ಮ ಸ್ವರವೆತ್ತಿ ಆ ರಾತ್ರಿಯೆಲ್ಲಾ ಅತ್ತರು.
2 All the Israelites complained against Moses and Aaron; the whole community said to them, "If only we had died in the land of Egypt, or if only we had died in this wilderness! ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.
3 Why is our Father bringing us to this land to fall by the sword? Our wives and children will be plunder. Wouldn't it be better to return to Egypt?" ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?
4 And they said to one another, "Let us appoint a leader and return to Egypt." ನಾವು ನಾಯಕನನ್ನು ನೇಮಿಸಿಕೊಂಡು ಈಜಿಪ್ಟ್ ದೇಶಕ್ಕೆ ಹಿಂದಿರುಗೋಣ ಬನ್ನಿರಿ,” ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
5 Then Moses and Aaron fell facedown before the whole assembly of Israel. ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.
6 Joshua son of Nun and Caleb son of Jephunneh, among those who scouted the land, tore their clothes. ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,
7 They told the whole Israelite community, "The land we passed through and explored is exceedingly good. ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, “ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ.
8 If our Father delights in us, he'll bring us into this land and give it to us, a land flowing with milk and honey. ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು.
9 Only don't rebel against our Father, and don't fear the people of the land—they are food for us. Their protection is gone; our Father is with us. Don't fear them." ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.
10 The whole community called for stoning Joshua and Caleb. Then our Father's glory appeared at the tent of meeting to all Israel's people. ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು.
11 And our Father said to Moses, "How long will this people despise me? And how long will they not believe in me, despite all the signs I've done among them? ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?
12 I will strike them with the plague and disinherit them, then make you a nation greater and stronger than they." ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.
13 But Moses said to our Father, "The Egyptians will hear of it, for you brought this people up from among them by your might, ಆಗ ಮೋಶೆ ಯೆಹೋವ ದೇವರಿಗೆ, “ಹಾಗಾದರೆ ಈ ಸುದ್ದಿಯನ್ನು ಈಜಿಪ್ಟಿನವರು ಕೇಳುವರು. ನೀವು ಅವರಿಂದ ಈ ಜನರನ್ನು ನಿಮ್ಮ ಶಕ್ತಿಯಿಂದ ಬರಮಾಡಿದೆಯಲ್ಲಾ!
14 and they will tell the residents of this land, who have heard that you, our Father, are among this people, that you, our Father, are seen face to face, that your cloud stands over them, and you go before them in a pillar of cloud by day and a pillar of fire by night. ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.
15 If you kill this people all at once, the nations who heard your fame will say, ಈಗ ನೀವು ಈ ಜನರನ್ನೆಲ್ಲಾ ಕೊಂದುಹಾಕಿದರೆ, ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳು ನಿಮ್ಮ ವಿಷಯದಲ್ಲಿ,
16 'Because God couldn't bring this people into the land he swore to them, he slaughtered them in the wilderness.' ಯೆಹೋವ ದೇವರು ಈ ಜನರನ್ನು ಅವರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶಕ್ಕೆ ತರಲಾರದ ಕಾರಣ ಅವರನ್ನು ಮರುಭೂಮಿಯಲ್ಲಿ ಕೊಂದುಹಾಕಿದರು,” ಎಂದು ಹೇಳುವರು.
17 And now, please, let the power of the Sovereign Father be great, as you have spoken, saying, “ಈಗ ನೀವು ಹೇಳಿದ ಪ್ರಕಾರ ಯೆಹೋವ ದೇವರ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
18 'Our Father is slow to anger, overflowing in covenant love, forgiving guilt and wrongdoing—yet he will by no means clear the guilty, bringing the fathers' sin on children to the third and fourth generation.' ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?
19 Please pardon this people's guilt according to the greatness of your covenant love, just as you've forgiven them from Egypt until now." ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು.
20 Then our Father said, "I have pardoned, according to your word. ಆಗ ಯೆಹೋವ ದೇವರು, “ನಿನ್ನ ಮಾತಿನ ಪ್ರಕಾರ ಮನ್ನಿಸಿದ್ದೇನೆ.
21 "But truly, as I live, and as all the earth will be filled with my glory, ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.
22 surely all the men who saw my glory and the signs I did in Egypt and the wilderness, yet tested me ten times and did not listen to my voice, ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,
23 shall not see the land I swore to their fathers. None who despised me will see it. ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ.
24 But my servant Caleb has a different spirit and has followed me fully—I will bring him into the land he entered, and his descendants will possess it. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.
25 The Amalekites and the Canaanites live in the valleys. Tomorrow, turn and head into the wilderness toward the Red Sea." ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು.
26 And our Father spoke to Moses and Aaron, saying, ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,
27 "How long will this evil congregation grumble against me? I have heard the Israelites' grumbling against me. “ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ.
28 Tell them, 'As I live, declares our Father, I will do to you exactly what I heard you say: ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
29 'Your corpses will fall in this wilderness—all of you counted, your whole number, twenty years old and up, who grumbled against me. ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.
30 None of you will enter the land I swore to settle you in, except Caleb son of Jephunneh and Joshua son of Nun. ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.
31 But your little ones, whom you said would become plunder, I will bring in; they will know the land you rejected. ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.
32 But as for you, you will fall dead in this wilderness. ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಮರುಭೂಮಿಯಲ್ಲಿ ಬೀಳುವುವು.
33 Your children will be shepherds in the wilderness forty years, bearing your unfaithfulness, until the last of your corpses lies in the wilderness. ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.
34 As the days you scouted the land—forty days—a day for a year, you will carry your guilt forty years, and know my opposition to you. ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
35 I, your Father, have spoken: surely I will do this to this whole evil assembly gathered against me—they will end in this wilderness, and die there.'" ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.
36 The men Moses sent to scout the land returned, making the whole community grumble against Moses with a bad report about it. ದೇಶವನ್ನು ಪರೀಕ್ಷಿಸುವುದಕ್ಕೆ ಮೋಶೆಯ ಅಪ್ಪಣೆಯ ಮೇರೆಗೆ ಹಿಂದಿರುಗಿ, ಆ ದೇಶದ ವಿಷಯವಾಗಿ ಕೆಟ್ಟ ಸುದ್ದಿಯನ್ನು ಎಬ್ಬಿಸಿ, ಸಮಸ್ತ ಸಭೆಯನ್ನು ಮೋಶೆಗೆ ವಿರೋಧವಾಗಿ ಗೊಣಗುಟ್ಟುವಂತೆ ಮಾಡಿದರು.
37 The men who brought up a bad report of the land died by plague before our Father. ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವ ದೇವರ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
38 But Joshua son of Nun and Caleb son of Jephunneh survived, of those men who went to explore the land. ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು.
39 When Moses told these words to all the children of Israel, the people mourned greatly. ಮೋಶೆಯು ಇಸ್ರಾಯೇಲರಿಗೆ ಈ ಮಾತುಗಳನ್ನು ಹೇಳಿದಾಗ, ಜನರು ಬಹಳವಾಗಿ ದುಃಖಪಟ್ಟರು.
40 They got up early in the morning and went up to the hilltop, saying, "Here we are. We will go up to the place our Father promised, for we have sinned." ಮರುದಿವಸ ಬೆಳಿಗ್ಗೆ ಅವರು ಎದ್ದು, ಬೆಟ್ಟದ ತುದಿಯ ಮೇಲಕ್ಕೆ ಏರಿ, “ಇಗೋ, ಯೆಹೋವ ದೇವರು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವುದಕ್ಕೆ ಇದ್ದೇವೆ. ನಾವು ಪಾಪಮಾಡಿದ್ದೇವೆ,” ಎಂದರು.
41 But Moses said, "Why now are you disobeying our Father's command? It won't succeed. ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ.
42 Do not go up, for our Father is not among you, or you'll be struck down before your enemies. ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.
43 For the Amalekites and Canaanites are there before you; you'll fall by the sword. Since you've turned back from following our Father, he won't be with you." ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.
44 But they dared to climb to the hill country's crest, though the ark of the covenant of our Father and Moses did not leave the camp. ಆದರೆ ಅವರು ಹಟಮಾಡಿ, ಬೆಟ್ಟದ ತುದಿಯ ಮೇಲೆ ಏರಿಹೋದರು. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.
45 Then the Amalekites and the Canaanites living in that hill country came down, struck them, and crushed them as far as Hormah. ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]