Skip to content
The Believer's Library

Biblica® Open Kannada Contemporary Version 2022

Numbers 16 OKCV

Show OKCV only
Verse × ×
1 Korah son of Izhar, son of Kohath, son of Levi, gathered men, along with Dathan and Abiram, sons of Eliab, and On son of Peleth, sons of Reuben. ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು
2 They stood before Moses with 250 Israelite leaders of the community—chosen assembly members, men of renown. ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು.
3 They gathered against Moses and Aaron and said, "You have gone too far! The whole congregation is holy, all of them, and our Father is among them. Why do you set yourselves above our Father's assembly?" ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.
4 When Moses heard this, he fell facedown. ಮೋಶೆಯು ಇದನ್ನು ಕೇಳಿದಾಗ, ಬೋರಲು ಬಿದ್ದು,
5 He said to Korah and all his company, "In the morning, our Father will show who is his and who is holy, and will bring that one near to himself. Whoever he chooses, he will bring near to himself. ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:
6 Do this: take censers, Korah and all your company. ಕೋರಹನೂ, ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು,
7 Tomorrow put fire in them, lay incense on them before our Father. The man our Father chooses will be the holy one. You've gone too far, sons of Levi!" ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು.
8 Moses also said to Korah, "Listen now, you sons of Levi: ಮೋಶೆಯು ಕೋರಹನಿಗೆ, “ಲೇವಿಯ ಪುತ್ರರೇ, ಈಗ ಕೇಳಿರಿ.
9 Is it not enough for you that the Father of Israel set you apart from the rest of Israel's congregation, to bring you near himself, to do the work of our Father's tabernacle, and stand before the congregation to serve them? ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?
10 He brought you near—you and all your brothers, sons of Levi—yet now you seek the priesthood too? ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
11 You and your whole group have gathered against our Father. Aaron—what is he, that you grumble against him?" ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.
12 Moses sent for Dathan and Abiram, sons of Eliab. They said, "We will not come up! ಆಗ ಮೋಶೆ ಎಲೀಯಾಬನ ಪುತ್ರರಾದ ದಾತಾನನನ್ನೂ, ಅಬೀರಾಮನನ್ನೂ ಕರೆಯಕಳುಹಿಸಿದನು. ಆದರೆ ಅವರು, “ನಾವು ಬರುವುದಿಲ್ಲ.
13 Is it not enough you brought us up from a land flowing with milk and honey to kill us in the wilderness, that you must also rule over us? ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?
14 Also, you haven't brought us to a land flowing with milk and honey, or given us fields and vineyards as an inheritance. Will you gouge out these men's eyes? We won't come up!" ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.
15 Moses was furious and said to our Father, "Disregard their offering. I haven't taken a single donkey from them, nor wronged any of them." ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು.
16 Moses told Korah, "You and your whole company, present yourselves before our Father tomorrow—you, they, and Aaron. ಮೋಶೆಯು ಕೋರಹನಿಗೆ, “ನೀನೂ, ನಿನ್ನ ಸಮೂಹವೆಲ್ಲವೂ ಯೆಹೋವ ದೇವರ ಎದುರಿನಲ್ಲಿ ಇರಬೇಕು. ನೀನೂ, ಅವರೂ, ಆರೋನನೂ ನಾಳೆ ಬಂದು,
17 Each man is to take his censer, put incense on it, and bring it before our Father—250 censers—you and Aaron, each with his own censer." ಒಬ್ಬೊಬ್ಬನು ತನ್ನ ತನ್ನ ಧೂಪ ಪಾತ್ರೆಯನ್ನು ತೆಗೆದುಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ, ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ಧೂಪ ಪಾತ್ರೆಗಳಾದ ನಿಮ್ಮ ಧೂಪ ಪಾತ್ರೆಗಳನ್ನು ಯೆಹೋವ ದೇವರ ಎದುರಿಗೆ ತನ್ನಿರಿ. ನೀನೂ, ಆರೋನನೂ, ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತೆಗೆದುಕೊಂಡು ಬನ್ನಿರಿ,” ಎಂದನು.
18 Each took his censer, put fire in it and laid incense on it, and stood with Moses and Aaron at the tent of meeting's entrance. ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.
19 Korah gathered the whole congregation against them at the tent of meeting's entrance; the glory of our Father appeared to the whole congregation. ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.
20 And our Father spoke to Moses and Aaron, saying, ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,
21 "Separate yourselves from this congregation, so that I may consume them in an instant." “ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.
22 Moses and Aaron fell facedown and cried, "O our Father, the Father of the spirits of all flesh—when one man sins, will you be angry with the whole congregation?" ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.
23 Then our Father said to Moses, ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
24 "Say to the congregation: Move away from the dwellings of Korah, Dathan, and Abiram." “ನೀನು ಜನರ ಸಮೂಹಕ್ಕೆ, ‘ಕೋರಹ, ದಾತಾನ್, ಅಬೀರಾಮರ ನಿವಾಸದ ಸುತ್ತಲಿಂದ ದೂರವಿರಬೇಕು,’ ಎಂದು ಅವರಿಗೆ ಆಜ್ಞಾಪಿಸು,” ಎಂದರು.
25 So Moses got up and went to Dathan and Abiram, and the elders of Israel followed him. ಮೋಶೆಯು ಎದ್ದು ದಾತಾನ್, ಅಬೀರಾಮರ ಬಳಿಗೆ ಹೋದನು. ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
26 He told the congregation, "Leave the tents of these wicked men. Touch nothing of theirs, or you'll be swept away in all their sins." ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.
27 So they withdrew from the tents of Korah, Dathan, and Abiram on every side, while Dathan and Abiram came out and stood at their tent entrances with their wives, sons, and little ones. ಆಗ ಅವರು ಕೋರಹನ ದಾತಾನ್, ಅಬೀರಾಮರ ಡೇರೆಗಳ ಸುತ್ತಲಿಂದ ದೂರ ಹೋದರು. ದಾತಾನನೂ, ಅಬೀರಾಮನೂ ತಮ್ಮ ಹೆಂಡತಿಯರೂ, ಪುತ್ರರೂ, ಚಿಕ್ಕ ಮಕ್ಕಳೂ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡರು.
28 Moses said, "This is how you'll know our Father sent me to do all these things, and that none of it was my own idea: ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.
29 If these men die a normal death, sharing the fate of everyone, then our Father has not sent me. ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ, ಇಲ್ಲವೆ ಎಲ್ಲಾ ಮನುಷ್ಯರ ಶಿಕ್ಷೆ ಇವರಿಗೂ ಪ್ರಾಪ್ತವಾದರೆ ಯೆಹೋವ ದೇವರು ನನ್ನನ್ನು ಕಳುಹಿಸಲಿಲ್ಲ.
30 But if our Father creates something new, and the ground opens its mouth and swallows them with all that is theirs, and they go down alive into the grave, then you will know these men have despised our Father." ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು.
31 As soon as he finished saying all this, the ground beneath them split open, ಅವನು ಹೇಳ ಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ, ಅವರ ಕೆಳಗಿರುವ ನೆಲವು ಸೀಳಿ
32 the earth opened its mouth, swallowing them, their households, all Korah's people, and all their possessions. ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.
33 They and all who were theirs went down alive into the grave; the earth closed over them, and they were destroyed from the assembly. ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
34 All Israel around them fled at their cry, for they said, "The earth may swallow us too!" ಆಗ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಓಡಿಹೋದರು, ಏಕೆಂದರೆ ಅವರು, “ಭೂಮಿಯು ನಮ್ಮನ್ನು ಸಹ ನುಂಗಿಬಿಟ್ಟೀತು,” ಎಂದು ಹೆದರಿದರು.
35 Fire came out from our Father and consumed the 250 men offering the incense. ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
36 Not in this edition ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
37 Not in this edition “ಯಾಜಕನಾದ ಆರೋನನ ಮಗ ಎಲಿಯಾಜರನಿಗೆ, ಧೂಪದ ಪಾತ್ರೆಗಳು ಪರಿಶುದ್ಧವಾಗಿರುವುದರಿಂದ ಸುಟ್ಟುಹೋದವರ ಮಧ್ಯದಿಂದ ಅವನು ಅವುಗಳನ್ನು ಎತ್ತಬೇಕು. ಆ ಬೆಂಕಿಯನ್ನು ದೂರ ಚೆಲ್ಲು.
38 Not in this edition ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು.
39 Not in this edition ಆಗ ಯಾಜಕನಾದ ಎಲಿಯಾಜರನು ಯೆಹೋವ ದೇವರು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ಸುಟ್ಟು ಹೋದವರು ಅರ್ಪಿಸಿದ ಕಂಚಿನ ಧೂಪದ ಪಾತ್ರೆಗಳನ್ನು ತೆಗೆದುಕೊಂಡು, ಬಲಿಪೀಠವನ್ನು ಮುಚ್ಚುವುದಕ್ಕಾಗಿ ಅವುಗಳನ್ನು ಅಗಲವಾದ ತಗಡುಗಳನ್ನಾಗಿ ಮಾಡಿದನು.
40 Not in this edition ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.
41 Not in this edition ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.
42 Not in this edition ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು.
43 Not in this edition ಮೋಶೆಯೂ ಆರೋನನೂ ದೇವದರ್ಶನ ಗುಡಾರದ ಮುಂದೆ ಬಂದರು.
44 Not in this edition ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
45 Not in this edition “ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.
46 Not in this edition ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.
47 Not in this edition ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
48 Not in this edition ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡದ್ದರಿಂದ ವ್ಯಾಧಿಯು ಶಮನವಾಯಿತು.
49 Not in this edition ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು.
50 Not in this edition ಆ ವ್ಯಾಧಿಯು ನಿಂತು ಹೋದಾಗ ಆರೋನನು ದೇವದರ್ಶನ ಗುಡಾರದ ಬಾಗಿಲಿನ ಬಳಿಯಲ್ಲಿದ್ದ ಮೋಶೆಯ ಬಳಿಗೆ ಹಿಂದಿರುಗಿ ಬಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]