Skip to content
The Believer's Library

Biblica® Open Kannada Contemporary Version 2022

Numbers 20 OKCV

Show OKCV only
Verse × ×
1 In the first month the whole community of Israel entered the Wilderness of Zin; the people stayed at Kadesh. Miriam died there and was buried there. ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.
2 Now there was no water for the community, so they gathered together against Moses and Aaron. ಆಗ ಜನರಿಗೆ ನೀರು ಇಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡರು.
3 The people argued with Moses: "If only we'd died when our brothers died in our Father's presence! ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಸಹೋದರರು ಯೆಹೋವ ದೇವರ ಮುಂದೆ ಸತ್ತು ಹೋದಾಗಲೇ, ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
4 Why bring our Father's assembly into this wilderness to die here, us and our livestock? ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಏಕೆ ಯೆಹೋವ ದೇವರ ಸಭೆಯವರಾದ ನಮ್ಮನ್ನೂ ಈ ಮರುಭೂಮಿಗೆ ತಂದಿರಿ.
5 Why did you bring us up from Egypt to this evil place? No grain, figs, vines, or pomegranates—no water to drink." ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವುದಕ್ಕೆ ಏಕೆ ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಕರಕೊಂಡು ಬಂದಿರಿ. ಈ ಸ್ಥಳದಲ್ಲಿ ಧಾನ್ಯವಾದರೂ ಅಂಜೂರವಾದರೂ ದ್ರಾಕ್ಷಿ ತೋಟವಾದರೂ ದಾಳಿಂಬೆ ಹಣ್ಣಾದರೂ ಇಲ್ಲ. ಕುಡಿಯುವುದಕ್ಕೆ ನೀರು ಸಹ ಇಲ್ಲ,” ಎಂದರು.
6 Moses and Aaron went from before the assembly to the entrance of the tent of meeting, fell facedown, and the glory of our Father appeared to them. ಆಗ ಮೋಶೆ, ಆರೋನನೂ ಜನಸಮೂಹದ ಎದುರಿನಿಂದ ದೇವದರ್ಶನ ಗುಡಾರದ ಬಾಗಿಲಿನೊಳಗೆ ಹೋಗಿ, ಸಾಷ್ಟಾಂಗವೆರಗಿದರು. ಯೆಹೋವ ದೇವರ ಮಹಿಮೆಯು ಅವರಿಗೆ ಕಾಣಬಂತು.
7 Our Father said to Moses, ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
8 "Take the staff, gather the community—you and Aaron your brother—and speak to the rock before their eyes; it will give its water. Bring water from the rock for them, and give the community and their livestock drink." “ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.
9 So Moses took the staff from before our Father, as he had commanded him. ಆಗ ಮೋಶೆಯು ಯೆಹೋವ ದೇವರ ಸನ್ನಿಧಿಯಿಂದ ಹೊರಟು, ತನಗೆ ಆಜ್ಞಾಪಿಸಿದ ಹಾಗೆ ಕೋಲನ್ನು ತೆಗೆದುಕೊಂಡನು.
10 Moses and Aaron gathered the assembly in front of the rock. He said, "Listen, you rebels—must we bring water for you out of this rock?" ಮೋಶೆಯೂ, ಆರೋನನೂ ಜನರನ್ನು ಬಂಡೆಯ ಮುಂದೆ ಕೂಡಿಸಿ, ಅವರಿಗೆ, “ತಿರುಗಿ ಬಿದ್ದವರೇ ಕೇಳಿರಿ, ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ?” ಎಂದರು.
11 Moses raised his hand and struck the rock twice with his staff; water gushed out abundantly, and the community and their livestock drank. ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.
12 But our Father told Moses and Aaron, "Because you did not trust me enough to honor me as holy before the Israelites, you will not bring this assembly into the land I have given them." ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.
13 These are the waters of Meribah, where the children of Israel quarreled with our Father, and he showed himself holy among them. ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ.
14 Moses sent messengers from Kadesh to Edom's king: "Your brother Israel says: You know all the hardship that has found us. ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
15 Our ancestors went down to Egypt; we lived in Egypt many years, and the Egyptians mistreated us and our ancestors. ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.
16 So we cried out to our Father; he heard our voice, sent a messenger, and brought us out of Egypt. Now we're at Kadesh, a town on your border's edge. ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.
17 Please let us pass through your land. We won't cross field or vineyard, or drink well water. We'll stay on the King's Highway, not turning right or left, until we've passed through your territory." ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು.
18 Edom said to him, "You will not pass through me, or I'll come out against you with the sword." ಎದೋಮ್ಯರು ದೂತರಿಗೆ, “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು.
19 Israel's people told him, "We'll take the highway. If we or our herds drink your water, we'll pay for it. Just let us cross on foot, nothing more." ಅದಕ್ಕೆ ಇಸ್ರಾಯೇಲರು ಅವನಿಗೆ, “ನಾವು ರಾಜಮಾರ್ಗದಲ್ಲಿ ಹೋಗುತ್ತೇವೆ. ನಮ್ಮ ಪಶುಗಳು ನಿನ್ನ ನೀರು ಕುಡಿದರೆ, ಅದರ ಕ್ರಯವನ್ನು ಕೊಡುತ್ತೇವೆ. ನಮ್ಮ ಕಾಲುಗಳಿಂದ ದಾಟಿ ಹೋಗುವುದೇ ಹೊರತು ಮತ್ತೇನೂ ಮಾಡುವುದಿಲ್ಲ,” ಎಂದು ಹೇಳಿ ಕಳುಹಿಸಿದನು.
20 But he said, "You will not pass through." Edom came against him with great numbers and a strong hand. ಆದರೆ ಅವನು, “ನೀವು ದಾಟಬಾರದು,” ಎಂದನು. ಎದೋಮ್ಯರು ಬಹುಜನರಿಂದಲೂ, ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಯುದ್ಧಕ್ಕೆ ಬಂದರು.
21 So Edom refused to let Israel pass through his territory, and Israel turned away from him. ಈ ಪ್ರಕಾರ ಎದೋಮ್ಯನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ. ಆದಕಾರಣ ಇಸ್ರಾಯೇಲರು ಅವನ ಕಡೆಯಿಂದ ತಿರುಗಿಕೊಂಡು ಹೊರಟು ಹೋದರು.
22 The whole community of the children of Israel set out from Kadesh and came to Mount Hor. ಇಸ್ರಾಯೇಲರ ಸಮಸ್ತ ಸಮೂಹದವರು ಕಾದೇಶಿನಿಂದ ಪ್ರಯಾಣಮಾಡಿ, ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.
23 At Mount Hor, on Edom's border, our Father said to Moses and Aaron, ಆಗ ಯೆಹೋವ ದೇವರು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
24 "Aaron will be gathered to his people; he will not enter the land I gave the Israelites, because you both rebelled against my command at the waters of Meribah. “ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ.
25 Take Aaron and Eleazar his son, and bring them up Mount Hor. ಆರೋನನನ್ನೂ, ಅವನ ಮಗ ಎಲಿಯಾಜರನನ್ನೂ ತೆಗೆದುಕೊಂಡು, ಅವರನ್ನು ಹೋರ್ ಬೆಟ್ಟಕ್ಕೆ ಕರೆದುಕೊಂಡು ಬಾ.
26 Strip Aaron of his garments, dress Eleazar his son in them; Aaron will be gathered to his people and die there." ಆರೋನನ ವಸ್ತ್ರಗಳನ್ನು ತೆಗೆದು, ಅವುಗಳನ್ನು ಅವನ ಮಗ ಎಲಿಯಾಜರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು,” ಎಂದರು.
27 Moses did as our Father commanded, and they went up Mount Hor as the whole community watched. ಮೋಶೆಯು ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಮಾಡಿದನು. ಅವರು ಸಮಸ್ತ ಸಭೆಯವರು ನೋಡುತ್ತಿರುವಾಗ ಹೋರ್ ಬೆಟ್ಟವನ್ನೇರಿದರು.
28 Moses stripped Aaron's garments and dressed his son Eleazar in them. Aaron died there atop the mountain; Moses and Eleazar went down. ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು, ಅವನ ಮಗ ಎಲಿಯಾಜರನಿಗೆ ತೊಡಿಸಿದನು. ಆಗ ಆರೋನನು ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ, ಎಲಿಯಾಜರನೂ ಬೆಟ್ಟದಿಂದ ಇಳಿದರು.
29 The whole community saw Aaron had died, and Israel's whole house mourned him thirty days. ಆರೋನನು ತೀರಿಹೋದನೆಂದು ಸಭೆಯೆಲ್ಲಾ ನೋಡಿದಾಗ, ಇಸ್ರಾಯೇಲರೆಲ್ಲರೂ ಆರೋನನಿಗೋಸ್ಕರ ಮೂವತ್ತು ದಿವಸಗಳವರೆಗೂ ದುಃಖಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]