Skip to content
The Believer's Library

Biblica® Open Kannada Contemporary Version 2022

Numbers 21 OKCV

Show OKCV only
Verse × ×
1 When the Canaanite, king of Arad, living in the Negev, heard Israel was coming by the Atharim road, he fought Israel and took some captive. ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.
2 Israel made a vow to our Father: "If you truly give this people into my hand, I will destroy their cities completely." ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.
3 Our Father heard Israel's voice and handed the Canaanites over; they destroyed them and their cities completely. So the place was named Hormah. ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
4 They set out from Mount Hor toward the Red Sea to go around Edom's land, but the people grew impatient on the way. ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.
5 The people spoke against our Father and against Moses: "Why did you bring us out of Egypt to die in the wilderness? No bread, no water, and we loathe this wretched food." ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.
6 Then our Father sent venomous serpents among the people; they bit the people, and many Israelites died. ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.
7 The people came to Moses and said, "We sinned by speaking against our Father and against you. Pray to him to remove the serpents from us." So Moses prayed for the people. ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.
8 Our Father told Moses, "Make a venomous snake, put it on a pole; anyone bitten who looks at it will live." ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.
9 Moses made a bronze serpent and put it on a pole; whenever a serpent bit anyone, they looked at the bronze serpent and lived. ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.
10 The Israelites set out and camped at Oboth. ಇಸ್ರಾಯೇಲರು ಹೊರಟು ಓಬೋತಿನಲ್ಲಿ ಇಳಿದುಕೊಂಡರು.
11 They set out from Oboth and camped at Iye-abarim, in the wilderness facing Moab, eastward. ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
12 From there they set out and camped in the Valley of Zered. ಅಲ್ಲಿಂದ ಅವರು ಹೊರಟು ಜೆರೆದ್ ಎಂಬ ಹಳ್ಳದ ಬಳಿಯಲ್ಲಿ ಇಳಿದುಕೊಂಡರು.
13 From there they moved on and camped beyond the Arnon, in the wilderness that extends from Amorite territory; for the Arnon is Moab's border with the Amorites. ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ.
14 So the Book of the Wars of our Father says: "Waheb in Suphah, and the ravines of the Arnon, ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್
15 and the slope of the ravines that bends toward the site of Ar and reaches to the border of Moab." ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”
16 From there they went to Beer, the well where our Father told Moses, "Gather the people—I'll give them water." ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.
17 Then Israel sang this song: "Spring up, O well! Sing to it! ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕು, ಜನರೇ, ಅದರ ಬಗ್ಗೆ ನೀವು ಹಾಡಿರಿ.
18 The well that princes dug, that the nobles of the people dug out with their scepters and staffs." Then from the wilderness they went to Mattanah, ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.
19 from Mattanah to Nahaliel, from Nahaliel to Bamoth, ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು.
20 and from Bamoth to the valley in Moab's plain, to Pisgah's peak overlooking the wasteland. ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.
21 Then Israel sent messengers to Sihon king of the Amorites, saying, ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
22 "Let me pass through your land. We won't turn into field or vineyard, or drink well water. We'll go by the King's Highway until we've passed your border." “ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು.
23 But Sihon refused to let Israel cross his territory. He gathered all his people, marched into the wilderness against Israel, reached Jahaz, and fought Israel. ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು.
24 Israel struck him down with the sword, took his land from the Arnon to the Jabbok—up to the Ammonites, whose border was fortified. ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.
25 Israel captured all these cities and settled in every Amorite city—Heshbon and all its surrounding villages. ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
26 For Heshbon was the city of Sihon king of the Amorites, who fought the former king of Moab and captured all his land from him, up to the Arnon. ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.
27 So the poets say: "Come to Heshbon—let it be rebuilt, let Sihon's city be restored. ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು.
28 For fire went out from Heshbon, a flame from the city of Sihon. It consumed Ar of Moab, the lords of the heights of the Arnon. “ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
29 Woe to you, Moab! You are destroyed, people of Chemosh! He has made his sons fugitives and his daughters captives to Sihon king of the Amorites. ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.
30 But we struck them down; Heshbon perished as far as Dibon. We laid waste as far as Nophah, which reaches to Medeba." “ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”
31 So Israel settled in the land of the Amorites. ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು.
32 Moses sent men to scout Jazer; they captured its villages and drove out the Amorites there. ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.
33 Then they turned and went up the Bashan road, and Og king of Bashan came out against them, with all his people, to fight at Edrei. ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
34 But our Father told Moses, "Don't fear him—I've given him, all his people, and his land into your hand. Do to him as you did to Sihon king of the Amorites, who lived in Heshbon." ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.
35 They struck him, his sons, and all his people, leaving no survivor, and took possession of his land. ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]