Skip to content
The Believer's Library

Biblica® Open Kannada Contemporary Version 2022

Numbers 22 OKCV

Show OKCV only
Verse × ×
1 Then the Israelites set out and camped in the plains of Moab beyond the Jordan, opposite Jericho. ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.
2 Now Balak son of Zippor saw all that Israel had done to the Amorites. ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು.
3 Moab feared the people greatly, for they were many; Moab dreaded the Israelites. ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು.
4 Moab said to Midian's elders, "This horde will lick up everything around us, as an ox licks up field grass." Balak son of Zippor was king of Moab then. ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.
5 He sent messengers to Balaam son of Beor at Pethor, by the Euphrates in his people's land, to summon him. He said, "Look, a people has come out of Egypt. Look, they cover the face of the land, and have settled facing me. ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.
6 Come, please curse this people for me—they are stronger than I am. Maybe then I can strike them and drive them from the land, for I know: whoever you bless is blessed, and whoever you curse is cursed." ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.
7 The elders of Moab and elders of Midian went, fortune-telling fees in their hand, and came to Balaam and told him Balak's words. ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
8 He said to them, "Stay here tonight, and I'll bring back word as God speaks to me." So the officials of Moab stayed with Balaam. ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.
9 Then our Father came to Balaam and said, "Who are these men with you?" ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು?” ಎಂದರು.
10 Balaam said to our Father, "Balak son of Zippor, king of Moab, has sent word to me: ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:
11 Look, the people who came out of Egypt cover the land's face. Come now, curse them for me—maybe I can fight against them and drive them out." ‘ಇಗೋ, ಈಜಿಪ್ಟ್ ದೇಶದಿಂದ ಹೊರಟಿರುವ ಒಂದು ಜನಾಂಗವು ದೇಶವನ್ನೆಲ್ಲಾ ಆವರಿಸಿಕೊಂಡಿದೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ಒಂದು ವೇಳೆ ಅವರ ಸಂಗಡ ಯುದ್ಧಮಾಡಿ ಹೊರಗೆ ಹಾಕುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,’ ಎಂದು ಹೇಳಿ ಕಳುಹಿಸಿದ್ದಾನೆ,” ಎಂದನು.
12 But our Father told Balaam, "Do not go with them. Do not curse the people, for they are blessed." ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.
13 Balaam got up that morning and told Balak's officials, "Return to your land—God has refused to let me go with you." ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ, “ನಿಮ್ಮ ದೇಶಕ್ಕೆ ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಲಿಲ್ಲ,” ಎಂದನು.
14 Moab's officials got up, went to Balak, and said, "Balaam refused to come with us." ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು.
15 Then Balak sent officials again—more numerous and more honored than the first. ಆದರೆ ಬಾಲಾಕನು ತಿರುಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಧಾನರನ್ನು ಕಳುಹಿಸಿದನು.
16 They came to Balaam and said, "Balak son of Zippor says: Let nothing keep you from coming to me, ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು.
17 for I will honor you greatly, and do whatever you say to me. So please come and curse this people for me." ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.
18 Balaam answered Balak's servants, "Even if Balak gave me his house full of silver and gold, I cannot go beyond God's command, to do small or great. ಬಿಳಾಮನು ಪ್ರತ್ಯುತ್ತರವಾಗಿ ಬಾಲಾಕನ ಸೇವಕರಿಗೆ, “ಬಾಲಾಕನು ನನಗೆ ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾಗಿರುವ ಯೆಹೋವ ದೇವರ ಮಾತನ್ನು ಮೀರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
19 Now please, stay here tonight, you too, so I may learn what more our Father will say to me." ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು.
20 And our Father came to Balaam at night and said to him, "Since these men came to summon you, get up and go with them, but do only what I tell you." ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.
21 So Balaam got up in the morning, saddled his donkey, and went with the officials of Moab. ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು.
22 But our Father's anger burned because he went, and our Father's messenger stood in the road as Balaam's adversary. Balaam was riding his donkey, with his two servants. ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
23 The donkey saw the messenger of our Father standing in the road, his sword drawn in his hand, and she turned off the road into the field. So Balaam struck the donkey to turn her back onto the road. ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.
24 Then our Father's messenger stood in a narrow path between vineyards, a wall on each side. ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು.
25 The donkey saw the messenger of our Father, pressed against the wall, and pressed Balaam's foot against it, so he struck her again. ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು.
26 The messenger of our Father went further and stood in a narrow place with no room to turn right or left. ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.
27 When the donkey saw the messenger of our Father, she lay down under Balaam; his anger flared, and he struck her with his staff. ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
28 Then our Father opened the donkey's mouth, and she said to Balaam, "What have I done to you, that you struck me these three times?" ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.
29 Balaam said to the donkey, "You have mocked me! If I had a sword in my hand, I'd kill you now." ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.
30 The donkey said to Balaam, "Am I not your donkey, the one you've ridden all your life until today? Have I ever treated you this way before?" He said, "No." ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.
31 Then our Father opened Balaam's eyes, and he saw our Father's messenger standing in the road, sword drawn in hand, and he bowed low and fell facedown. ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.
32 The messenger of our Father said to him, "Why have you hit your donkey three times? I've come out as an adversary, because your way is reckless before me. ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.
33 The donkey saw me and turned aside from me these three times. Had she not turned aside, I would have killed you by now and spared her life." ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು.
34 Balaam said to the messenger of our Father, "I have sinned—I didn't know you stood in the road to oppose me. Now if this is displeasing in your eyes, I'll turn back." ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.
35 The messenger of our Father told Balaam, "Go with the men, but say only what I tell you." So Balaam went on with Balak's officials. ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
36 When Balak heard Balaam was coming, he went out to meet him at the city of Moab, on the Arnon border, at the border's edge. ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.
37 Balak said to Balaam, "Didn't I send urgently to call you? Why didn't you come to me? Can I really not honor you?" ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು.
38 Balaam told Balak, "Look, I've come to you now—but can I say just anything? I can only speak what God puts in my mouth." ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.
39 So Balaam went with Balak, and they came to Kiriath-huzoth. ಆಗ ಬಿಳಾಮನು ಬಾಲಾಕನ ಸಂಗಡ ಹೋದನು. ಇಬ್ಬರು ಕಿರ್ಯತ್ ಹುಚೋತಿಗೆ ಬಂದರು.
40 Balak sacrificed cattle and sheep, sending shares to Balaam and the officials with him. ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು.
41 In the morning Balak took Balaam and brought him up to Bamoth-baal, and from there he saw the edge of the people. ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]