Skip to content
The Believer's Library

Biblica® Open Kannada Contemporary Version 2022

Numbers 23 OKCV

Show OKCV only
Verse × ×
1 Balaam told Balak, "Build me seven altars here, prepare seven bulls and seven rams for me here." ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.
2 Balak did as Balaam said; Balak and Balaam offered a bull and a ram on each altar. ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು.
3 Balaam told Balak, "Stand by your burnt offering while I go; maybe God will meet me, and I'll tell you whatever he shows me." Then he went to a bare height. ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.
4 Our Father met Balaam, who said to him, "I have set up seven altars and offered a bull and ram on each altar." ಆಗ ದೇವರು ಬಿಳಾಮನನ್ನು ಸಂಧಿಸಿದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ,” ಎಂದನು.
5 Our Father put a word in Balaam's mouth: "Return to Balak and say this." ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು.
6 He went back to Balak—there Balak stood beside his burnt offering, with all the princes of Moab. ಆಗ ಅವನು ಬಾಲಾಕನ ಬಳಿಗೆ ತಿರುಗಿಬಂದನು. ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
7 He took up his oracle and said: "From Aram Balak brought me, Moab's king from the eastern mountains: Come, curse Jacob for me; come, denounce Israel. ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.
8 How can I curse those our Father has not cursed? How can I denounce those our Father has not denounced? ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವ ದೇವರು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?
9 From the top of the rocks I see them, from the hills I look on them: a people dwelling alone, not counting itself among the nations. ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.
10 Who can count the dust of Jacob or number even a fourth of Israel? Let me die as the upright die, and let my end be like theirs!" ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು. ನನ್ನ ಅಂತ್ಯವು ಅವರಂತೆಯೇ ಆಗಲಿ.”
11 Balak said to Balaam, "What have you done to me? I brought you to curse my enemies, and look—you've only blessed them!" ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು.
12 He answered, "Must I not be careful to say what God puts in my mouth?" ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು.
13 Then Balak said, "Please come with me to another place where you can see them. You will see only their outer edge, not all of them, and curse them for me from there." ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.
14 He took him to the field of Zophim, to the top of Pisgah, built seven altars, and offered a bull and a ram on each. ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.
15 Balaam said to Balak, "Stand here by your burnt offering while I meet with him over there." ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು.
16 Our Father met Balaam, put a word in his mouth, and said, "Return to Balak and say this." ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.
17 He came to him—there, standing by his burnt offering, with Moab's princes. Balak said to him, "What has God spoken?" ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು.
18 He took up his oracle: "Rise, Balak, and hear; listen to me, son of Zippor: ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
19 Our Father is not a man, that he should lie, nor a son of man, that he should change his mind. Has he ever said something and not done it? Has he ever spoken and not fulfilled it? ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?
20 Look, I have received a command to bless. He has blessed, and I cannot revoke it. ಆಶೀರ್ವದಿಸುವುದಕ್ಕೆ ನಾನು ಅಪ್ಪಣೆ ಹೊಂದಿದ್ದೇನೆ. ಅವರು ಆಶೀರ್ವದಿಸಿದ ನಂತರ ನಾನು ಅದನ್ನು ಬದಲಾಯಿಸಲಾರೆನು.
21 He has seen no misfortune in Jacob, nor seen trouble in Israel. Our Father is with him, and the shout of a King is among them. “ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.
22 Our Father, who brought them out of Egypt, is for them like the horns of the wild ox. ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.
23 There is no enchantment against Jacob, no divination against Israel. Now it will be said of Jacob and of Israel, 'See what our Father has done!' ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
24 Look, a people rising up like a lioness, rousing itself like a lion; it will not lie down until it devours the prey and drinks the blood of the slain." ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”
25 Balak said to Balaam, "Don't curse them at all, and don't bless them at all!" ಆಗ ಬಾಲಾಕನು ಬಿಳಾಮನಿಗೆ, “ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು.
26 But Balaam answered Balak, "Didn't I tell you I must do all that God says?" ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.
27 Balak said to Balaam, "Come, let me take you elsewhere. Maybe God will let you curse them for me from there." ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು.
28 So Balak took Balaam to the top of Peor, which overlooks the wasteland. ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು.
29 Balaam told Balak, "Build me seven altars here, and prepare seven bulls and seven rams here." ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.
30 Balak did as Balaam had said, and offered a bull and a ram on each altar. ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]