Skip to content
The Believer's Library

Biblica® Open Kannada Contemporary Version 2022

Numbers 25 OKCV

Show OKCV only
Verse × ×
1 While Israel lived in Shittim, the people began sexual sin with Moab's daughters. ಆಗ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ, ಅವರು ಮೋವಾಬಿನ ಪುತ್ರಿಯರ ಸಂಗಡ ಜಾರತ್ವ ಮಾಡಲಾರಂಭಿಸಿದರು.
2 They invited the people to their gods' sacrifices; the people ate and bowed to their gods. ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.
3 So Israel joined himself to Baal of Peor, and the anger of our Father burned against Israel. ಹೀಗೆ ಇಸ್ರಾಯೇಲರು ಬಾಳ್ ಪೆಯೋರಿನೊಂದಿಗೆ ತಾವೇ ಕೂಡಿ ಪೂಜಿಸಿದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡರು.
4 Our Father said to Moses, "Take all the people's leaders and execute them before me in daylight, so my burning anger turns away from Israel." ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”
5 Moses told Israel's judges, "Each of you kill his men joined to Baal of Peor." ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು.
6 Then an Israelite man brought a Midianite woman to his brothers in front of Moses and Israel's whole assembly, while they wept at the entrance of the tent of meeting. ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು.
7 Phinehas son of Eleazar, son of Aaron the priest, saw this, rose from the assembly, and took a spear in his hand. ಕೂಡಲೆ ಮಾಹಾಯಾಜಕ ಆರೋನನ ಮಗನಾಗಿದ್ದ ಎಲಿಯಾಜರನ ಮಗ ಫೀನೆಹಾಸನು ಅದನ್ನು ನೋಡಿ, ಜನರ ಮಧ್ಯದಿಂದ ಎದ್ದು, ತನ್ನ ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು,
8 He followed the Israelite man into the chamber and pierced them both—the Israelite man and the woman, through her belly. Then the plague against the Israelites stopped. ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
9 Those who died in the plague were 24,000. ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.
10 Then our Father said to Moses, ಯೆಹೋವ ದೇವರು ಮೋಶೆಗೆ,
11 "Phinehas son of Eleazar, son of Aaron the priest, has turned my anger from the Israelites by his zeal for my zeal among them, so I didn't destroy the Israelites in my zeal. “ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ.
12 Therefore say: I am giving him my covenant of peace. ಆದಕಾರಣ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
13 He and his descendants after him will have a covenant of lasting priesthood, because he was passionate for me and made atonement for the Israelites." ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.
14 The name of the Israelite killed with the Midianite woman was Zimri son of Salu, a Simeonite clan leader. ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು.
15 The Midianite woman killed was named Cozbi, daughter of Zur, head of a clan in Midian. ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು.
16 Then our Father said to Moses, ಯೆಹೋವ ದೇವರು ಮೋಶೆಗೆ,
17 "Treat the Midianites as enemies and strike them down, “ಮಿದ್ಯಾನ್ಯರನ್ನು ವೈರಿ ಎಂದು ತಿಳಿದು ಹೊಡೆಯಬೇಕು.
18 for they are your enemies through their trickery, by which they tricked you in the matter of Peor, and of Cozbi, daughter of Midian's leader, their sister, struck down on the day of the plague over Peor." ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]