Skip to content
The Believer's Library

Biblica® Open Kannada Contemporary Version 2022

Numbers 26 OKCV

Show OKCV only
Verse × ×
1 After the plague, our Father said to Moses and to Eleazar son of Aaron the priest, ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ,
2 "take a census of the whole Israelite community by ancestral house, everyone twenty and older able to serve in Israel's army." “ಇಸ್ರಾಯೇಲರ ಸಮಸ್ತ ಸಮೂಹದವರಲ್ಲಿ ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಯುದ್ಧಕ್ಕೆ ಹೋಗುವುದಕ್ಕೆ ಶಕ್ತರಾದವರೆಲ್ಲರನ್ನು ಜನಗಣತಿ ಮಾಡಿ ಅವರ ಗೋತ್ರಗಳ ಪ್ರಕಾರ ತೆಗೆದುಕೊಳ್ಳಿರಿ,” ಎಂದರು.
3 Moses and Eleazar the priest spoke with them on the plains of Moab, by the Jordan across from Jericho: ಆಗ ಮೋಶೆಯೂ ಯಾಜಕನಾದ ಎಲಿಯಾಜರನೂ ಮೋವಾಬಿನ ಬಯಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ,
4 "Count the people twenty years old and up, as our Father commanded Moses." These were Israel's people who came from the land of Egypt: “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು:
5 Reuben, Israel's firstborn. Sons of Reuben: Hanoch, clan of the Hanochites; Pallu, clan of the Palluites, ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
6 of Hezron, the clan of the Hezronites; of Carmi, the clan of the Carmites. ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ಮೀಯಿಂದ ಕರ್ಮೀಯರ ಕುಟುಂಬ.
7 These are the clans of the Reubenites; they numbered 43,730. ಇವೇ ರೂಬೇನ್ಯರ ಕುಟುಂಬಗಳು. ಇವರಲ್ಲಿ ಎಣಿಕೆಯಾದವರ ಸಂಖ್ಯೆ 43,730 ಪುರುಷರು.
8 The sons of Pallu: Eliab. ಪಲ್ಲೂವಿನ ಪುತ್ರ ಎಲೀಯಾಬನು.
9 Eliab's sons: Nemuel, Dathan, and Abiram—the same Dathan and Abiram, community representatives who challenged Moses and Aaron in Korah's assembly, when they challenged our Father. ಎಲೀಯಾಬನ ಪುತ್ರರು ನೆಮೂಯೇಲ್, ದಾತಾನ್, ಅಬೀರಾಮ್. ಈ ದಾತಾನನೂ, ಅಬೀರಾಮನೂ ಜನರಲ್ಲಿ ಪ್ರಸಿದ್ಧರಾಗಿದ್ದು; ಕೋರಹನ ಗುಂಪಿನಲ್ಲಿದ್ದು; ಯೆಹೋವ ದೇವರಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
10 The earth opened its mouth and swallowed them and Korah, when the company died and the fire consumed 250 men—they became a warning. ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು.
11 But the sons of Korah did not die. ಆದರೂ ಕೋರಹನ ಮಕ್ಕಳು ಸಾಯಲಿಲ್ಲ.
12 Simeon's sons by clan: Nemuel's, the Nemuelite clan; Jamin's, the Jaminite clan; Jachin's, the Jachinite clan, ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; ಯಾಮೀನನಿಂದ ಯಾಮೀನ್ಯರ ಕುಟುಂಬ; ಯಾಕೀನನಿಂದ ಯಾಕೀನ್ಯರ ಕುಟುಂಬ;
13 of Zerah, the clan of the Zerahites; of Shaul, the clan of the Shaulites. ಜೆರಹನ ವಂಶಸ್ಥರಾದ ಜೆರಹಿಯರು, ಸೌಲನಿಂದ ಸೌಲ್ಯರ ಕುಟುಂಬ;
14 These are the clans of the Simeonites: 22,200. ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 22,200 ಪುರುಷರು.
15 Gad's sons by clan: Zephon's clan, the Zephonites; Haggi's clan, the Haggites; Shuni's clan, the Shunites, ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯಿಂದ ಹಗ್ಗೀಯರ ಕುಟುಂಬ ಶೂನೀಯಿಂದ ಶೂನೀಯರ ಕುಟುಂಬ;
16 of Ozni, the clan of the Oznites; of Eri, the clan of the Erites; ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
17 of Arod, the clan of the Arodites; of Areli, the clan of the Arelites. ಅರೋದನಿಂದ ಅರೋದ್ಯರ ಕುಟುಂಬ; ಅರೇಲೀಯಿಂದ ಅರೇಲೀಯರ ಕುಟುಂಬ.
18 These are the clans of the sons of Gad as they were numbered: 40,500. ಗಾದನ ಮಕ್ಕಳ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 40,500 ಪುರುಷರು.
19 Judah's sons were Er and Onan; Er and Onan died in the land of Canaan. ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
20 Judah's sons by clan: from Shelah, Shelanite clan; from Perez, Perezite clan; from Zerah, Zerahite clan. ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. ಶೇಲಹನಿಂದ ಶೇಲಾನ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹಿಯರ ಕುಟುಂಬ;
21 Perez's sons: Hezron, clan of the Hezronites; Hamul, clan of the Hamulites. ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ
22 These are the clans of Judah as they were numbered: 76,500. ಯೆಹೂದನ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 76,500 ಪುರುಷರು.
23 Issachar's sons by clan: Tola, clan of the Tolaites; Puvah, clan of the Punites, ಕುಟುಂಬಗಳ ಪ್ರಕಾರ ಇಸ್ಸಾಕಾರನ ಪುತ್ರರು. ತೋಲನ ವಂಶಸ್ಥರಾದ ತೋಲಾಯರು, ಪುವ್ವನಿಂದ ಪೂನ್ಯರ ಕುಟುಂಬ;
24 of Jashub, the clan of the Jashubites; of Shimron, the clan of the Shimronites. ಯಾಶೂಬನಿಂದ ಯಾಶೂಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
25 These are the clans of Issachar as they were numbered: 64,300. ಇಸ್ಸಾಕಾರನ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 64,300 ಪುರುಷರು.
26 Zebulun's sons by clan: from Sered, the Seredite clan; from Elon, the Elonite clan; from Jahleel, the Jahleelite clan. ಜೆಬುಲೂನನ ಪುತ್ರರು: ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನಿಂದ ಯಹಲೇಲ್ಯರ ಕುಟುಂಬ.
27 These are the clans of the Zebulunites as they were numbered: 60,500. ಜೆಬುಲೂನ್ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 60,500 ಪುರುಷರು.
28 The sons of Joseph according to their clans were Manasseh and Ephraim. ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.
29 Manasseh's sons: Machir's clan, the Machirites; Machir fathered Gilead; Gilead's clan, the Gileadites. ಮನಸ್ಸೆಯ ಪುತ್ರರು: ಮಾಕೀರನಿಂದ ಮಾಕೀರ್ಯರ ಕುಟುಂಬ; ಮಾಕೀರನು ಗಿಲ್ಯಾದನನ್ನು ಪಡೆದನು. ಗಿಲ್ಯಾದನಿಂದ ಗಿಲ್ಯಾದ್ಯರ ಕುಟುಂಬ.
30 Sons of Gilead: Iezer, clan of Iezerites; Helek, clan of Helekites, ಗಿಲ್ಯಾದನ ಪುತ್ರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;
31 and of Asriel, the clan of the Asrielites; and of Shechem, the clan of the Shechemites; ಅಸ್ರೀಯೇಲನಿಂದ ಅಸ್ರೀಯೇಲ್ಯರ ಕುಟುಂಬ, ಶೆಕೆಮನಿಂದ ಶೆಕೆಮ್ಯರ ಕುಟುಂಬ;
32 and of Shemida, the clan of the Shemidaites; and of Hepher, the clan of the Hepherites. ಶೆಮೀದಾಯನಿಂದ ಶೆಮೀದಾಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
33 Zelophehad son of Hepher had no sons, only daughters: Mahlah, Noah, Hoglah, Milcah, and Tirzah. ಹೇಫೆರನ ಮಗ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಪುತ್ರಿಯರು ಇದ್ದರು. ಚಲ್ಪಹಾದನ ಪುತ್ರಿಯರ ಹೆಸರುಗಳು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
34 These are the clans of Manasseh; they numbered 52,700. ಮನಸ್ಸೆಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 52,700 ಪುರುಷರು.
35 These are Ephraim's descendants by family: Shuthelah, family of the Shuthelahites; Becher, family of the Becherites; Tahan, family of the Tahanites. ಕುಟುಂಬಗಳ ಪ್ರಕಾರ ಎಫ್ರಾಯೀಮನ ಪುತ್ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನಿಯರ ಕುಟುಂಬ.
36 And these are the sons of Shuthelah: of Eran, the clan of the Eranites. ಶೂತೆಲಹನ ಪುತ್ರರು: ಏರಾನನಿಂದ ಏರಾನ್ಯರ ಕುಟುಂಬ.
37 These are the clans of Ephraim's sons, by their count: 32,500. These are Joseph's sons by their clans. ಎಫ್ರಾಯೀಮನ ಪುತ್ರರ ಎಫ್ರಾಯೀಮನ ಪುತ್ರರುಗಳು ಇವೇ. ಅವರಲ್ಲಿ ಲೆಕ್ಕಿತರಾದವರ ಸಂಖ್ಯೆ 32,500. ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
38 Benjamin's sons by clan: Bela, clan of the Belaites; Ashbel, clan of the Ashbelites; Ahiram, clan of the Ahiramites, ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು: ಬೆಳಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;
39 of Shephupham, the clan of the Shuphamites; of Hupham, the clan of the Huphamites. ಶೂಫಾಮನಿಂದ ಶೂಫಾಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ.
40 Bela's sons: Ard and Naaman—from Ard, the Ardite clan; from Naaman, the Naamite clan. ಬೆಳಗನ ಪುತ್ರರು ಆರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ.
41 These are the sons of Benjamin by their clans; they numbered 45,600. ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು ಇವರೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 45,600.
42 These were Dan's sons by clan: from Shuham, the Shuhamite clan. These were Dan's clans by clan. ಕುಟುಂಬಗಳ ಪ್ರಕಾರ ದಾನನ ಪುತ್ರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ; ಕುಟುಂಬಗಳ ಪ್ರಕಾರ ದಾನನ ಕುಟುಂಬಗಳು ಇವೇ.
43 All the clans of the Shuhamites numbered 64,400. ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 64,400.
44 Asher's sons by clan: Imnah, clan of the Imnites; Ishvi, clan of the Ishvites; Beriah, clan of the Beriites. ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನನಿಂದ ಇಮ್ನಾಹರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
45 Sons of Beriah: Heber, clan of Heberites; Malchiel, clan of Malchielites. ಬೆರೀಯನ ಕುಮಾರರು: ಹೆಬೆರನಿಂದ ಹೆಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
46 Asher had a daughter named Serah. ಆಶೇರನ ಮಗಳ ಹೆಸರು ಸೆರಹ.
47 These are the clans of the sons of Asher as they were numbered: 53,400. ಲೆಕ್ಕಾನುಸಾರವಾದ ಆಶೇರನ ಪುತ್ರರ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 53,400.
48 Naphtali's sons by clan: Jahzeel, clan of Jahzeelites; Guni, clan of Gunites, ಕುಟುಂಬಗಳ ಪ್ರಕಾರ ನಫ್ತಾಲಿಯ ಪುತ್ರರು: ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀಯ ವಂಶಸ್ಥರಾದ ಗೂನೀಯರು,
49 of Jezer, the clan of the Jezerites; of Shillem, the clan of the Shillemites. ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.
50 These are the clans of Naphtali; they numbered 45,400. ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರು 45,400.
51 This was the total number of the people of Israel: 601,730. ಇಸ್ರಾಯೇಲರಲ್ಲಿ ಲೆಕ್ಕಿತರಾದವರ ಸಂಖ್ಯೆ 6,01,730.
52 Then our Father said to Moses, ಯೆಹೋವ ದೇವರು ಮೋಶೆಗೆ,
53 "Among these the land is to be divided for inheritance according to the number of names. “ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು.
54 Give the larger group more land, the smaller less—each share sized to its census count. ಹೆಚ್ಚು ಮಂದಿಯುಳ್ಳ ಗೋತ್ರಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಗೋತ್ರಕ್ಕೆ ಕಡಿಮೆಯಾಗಿಯೂ ಕೊಡು. ಹೀಗೆ ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸೊತ್ತನ್ನು ಹಂಚಿಕೊಡು.
55 But the land must be divided by lot; they will inherit according to their fathers' tribal names. ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.
56 Their inheritance is to be apportioned by lot between the larger and the smaller." ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.”
57 These are the numbered Levites by their clans: Gershon's clan, the Gershonites; Kohath's clan, the Kohathites; Merari's clan, the Merarites. ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರು ಇವರೇ. ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೊಹಾತನಿಂದ ಕೊಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
58 Levi's clans: Libnite clan, Hebronite clan, Mahlite clan, Mushite clan, Korahite clan. Kohath fathered Amram. ಲೇವಿಯರ ಕುಟುಂಬಗಳು ಇವೇ. ಲಿಬ್ನೀಯರ ಕುಟುಂಬ; ಹೆಬ್ರೋನಿಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹೀಯರ ಕುಟುಂಬ. ಕೊಹಾತನು ಅಮ್ರಾಮನನ್ನು ಪಡೆದನು.
59 Amram's wife was named Jochebed, Levi's daughter, born to Levi in Egypt; she bore Amram Aaron, Moses, and their sister Miriam. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಈಜಿಪ್ಟಿನಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
60 And to Aaron were born Nadab and Abihu, Eleazar and Ithamar. ಆರೋನನಿಗೆ ನಾದಾಬನೂ ಅಬೀಹೂ ಎಲಿಯಾಜರನೂ ಈತಾಮಾರನೂ ಹುಟ್ಟಿದರು.
61 But Nadab and Abihu died when they offered unauthorized fire before our Father. ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
62 The Levites counted numbered 23,000, every male a month old and up. They were not counted among the Israelites, since no inheritance was given them among the Israelites. ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ.
63 Moses and Eleazar the priest counted these on the plains of Moab by the Jordan, across from Jericho. ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
64 None of these had been counted by Moses and Aaron the priest in the wilderness of Sinai. ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಎಣಿಸಿದಾಗ, ಎಣಿಕೆಯಾದವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.
65 For our Father had said of them, "They would surely die in the wilderness." None remained, except Caleb son of Jephunneh and Joshua son of Nun. ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]