Skip to content
The Believer's Library

Biblica® Open Kannada Contemporary Version 2022

Numbers 27 OKCV

Show OKCV only
Verse × ×
1 The daughters of Zelophehad son of Hepher, son of Gilead, son of Machir, son of Manasseh, from the clans of Manasseh son of Joseph, came forward. His daughters' names: Mahlah, Noah, Hoglah, Milcah, Tirzah. ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು.
2 They stood before Moses, before Eleazar the priest, before the leaders and the whole assembly, at the tent of meeting's entrance, and said: ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ,
3 "Our father died in the wilderness. He was not among those who gathered against our Father with Korah's group; he died for his own sin, and had no sons. “ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ.
4 Why should our father's name disappear from his clan because he had no son? Give us property among our father's brothers." ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.
5 So Moses brought their case before our Father. ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು.
6 And our Father said to Moses: ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
7 "Zelophehad's daughters are right. Give them a hereditary portion among their father's brothers, and transfer their father's inheritance to them. ಚಲ್ಪಹಾದನ ಪುತ್ರಿಯರು ಹೇಳಿದ್ದು ಸರಿ, ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಿಶ್ಚಯವಾಗಿ ಕೊಡಬೇಕು, ಅವರ ತಂದೆಯ ಸೊತ್ತನ್ನು ಅವರಿಗೆ ಸೇರಿಸಬೇಕು.
8 Say to the Israelites: If a man dies without a son, transfer his inheritance to his daughter. “ಇಸ್ರಾಯೇಲರ ಸಂಗಡ ಮಾಡನಾಡಿ ನೀನು ಹೇಳಬೇಕಾದದ್ದೇನೆಂದರೆ: ‘ಒಬ್ಬನು ಮಗನಿಲ್ಲದೆ ಸತ್ತರೆ, ನೀವು ಅವನ ಸೊತ್ತನ್ನು ಅವನ ಮಗಳಿಗೆ ಸೇರಿಸಬೇಕು.
9 If he has no daughter, you are to give his inheritance to his brothers. ಅವನಿಗೆ ಸಹೋದರರು ಇಲ್ಲದಿದ್ದರೆ, ನೀವು ಅವನ ಸೊತ್ತನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
10 If he has no brothers, you are to give his inheritance to his father's brothers. ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ,
11 If his father has no brothers, give his inheritance to his nearest relative in his clan, who is to possess it. This is a legal statute for the Israelites, as our Father commanded Moses." ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’ ” ಎಂದು ಹೇಳಿದರು.
12 Then our Father said to Moses, "Go up Mount Abarim and see the land I've given the Israelites. ಆಗ ಯೆಹೋವ ದೇವರು ಮೋಶೆಗೆ, “ನೀನು ಈ ಅಬಾರೀಮ್ ಪರ್ವತದ ಮೇಲೆ ಏರಿ, ನಾನು ಇಸ್ರಾಯೇಲರಿಗೆ ಕೊಟ್ಟ ದೇಶವನ್ನು ನೋಡು.
13 When you see it, you too will be gathered to your people, as Aaron your brother was gathered, ಅದನ್ನು ನೋಡಿದ ಮೇಲೆ, ನಿನ್ನ ಸಹೋದರನಾದ ಆರೋನನ ಪ್ರಕಾರ ನೀನೂ ಸಹ ನಿನ್ನ ಜನರ ಬಳಿಗೆ ಸೇರುತ್ತೀ.
14 because you rebelled against my command in the wilderness of Zin, during the congregation's quarrel, to honor me as holy at the water before their eyes—the water of Meribah of Kadesh, wilderness of Zin." ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.
15 Moses spoke to our Father, saying: ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ,
16 "May the Father of the spirits of all flesh appoint a man over the congregation, “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.
17 who goes out before them and comes in before them, who leads them out and brings them in, so our Father's assembly will not be like sheep without a shepherd." ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು.
18 So our Father told Moses, "Take Joshua son of Nun, a man with the Spirit of our Father in him, and lay your hand on him. ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,
19 Have him stand before Eleazar the priest and the whole assembly, and commission him before their eyes. ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅವರಿಗೆದುರಾಗಿ ಅವನನ್ನು ನೇಮಿಸು.
20 Give him some of your authority, so that the whole congregation of the Israelites will obey him. ಇಸ್ರಾಯೇಲರ ಸಮಸ್ತ ಸಭೆಯು ಅವನಿಗೆ ವಿಧೇಯರಾಗುವಂತೆ, ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು.
21 He will stand before Eleazar the priest, who will consult the Urim's judgment for him before our Father. At Eleazar's word they will go out, at his word come in—he, all the Israelites with him, the whole congregation." ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.
22 Moses obeyed our Father's command: he took Joshua and stood him before Eleazar the priest and the entire assembly. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತೆಗೆದುಕೊಂಡು, ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ, ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ,
23 He laid his hands on him and commissioned him, as our Father had spoken through Moses. ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]