Skip to content
The Believer's Library

Biblica® Open Kannada Contemporary Version 2022

Numbers 28 OKCV

Show OKCV only
Verse × ×
1 Our Father said to Moses, ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
2 "Command the Israelites, say to them: Be sure to present my offering, my food for my food offerings, a pleasing aroma to me, at its set time. “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’
3 Say to them: This is the food offering you are to present to me: two flawless year-old lambs daily, a regular burnt offering. ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು.
4 Offer one lamb in the morning, the second lamb at twilight, ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.
5 with about two quarts of fine flour for a grain offering, mixed with about one quart of pressed oil. ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.
6 A regular burnt offering, ordained at Mount Sinai for a pleasing aroma, a food offering to me. ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
7 Its drink offering is a quart for each lamb; pour it out to me in the holy place as strong drink. ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.
8 Offer the second lamb at twilight, with a grain offering and drink offering like the morning's, a food offering, a pleasing aroma to me. ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
9 "On the Sabbath, offer two flawless year-old lambs, about four quarts of fine flour mixed with oil as grain offering, plus its drink offering. “ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
10 The burnt offering for each Sabbath, besides the regular burnt offering and its drink offering. ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
11 "On the first of each of your months, offer me a burnt offering: two young bulls, one ram, seven male lambs a year old, without defect, “ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,
12 about six quarts of fine flour mixed with oil as a grain offering for each bull, about four quarts of fine flour mixed with oil as a grain offering for the one ram, ಒಂದೊಂದು ಹೋರಿಗೆ ಧಾನ್ಯ ಅರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಮೂರು ಭಾಗ ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಹಿಟ್ಟನ್ನೂ,
13 and two quarts of fine flour mixed with oil as a grain offering for each lamb - a burnt offering, a pleasing aroma, a food offering to me. ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
14 Their drink offerings: two quarts of wine for the bull, just over a quart for the ram, and a quart for the lamb. This is the burnt offering for the new moon, month by month, all year. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.
15 Offer me one male goat as a sin offering, besides the regular burnt offering and its drink offering. ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.
16 "In the first month, on the fourteenth day of the month, is the Passover to me. “ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.
17 On this month's fifteenth day is a feast; bread without yeast is eaten seven days. ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
18 On the first day there is to be a holy assembly; you must do no ordinary work. ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.
19 Present me a food offering, a burnt offering: two young bulls, one ram, seven yearling male lambs; see that they are without defect. ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.
20 Their grain offering: fine flour mixed with oil—about six quarts for the bull, four quarts for the ram, ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು.
21 and with each of the seven lambs, about two quarts; ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ ಅರ್ಪಿಸಬೇಕು.
22 and one male goat as a sin offering to make atonement for you. ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
23 Offer these in addition to the morning burnt offering, which is the regular burnt offering. ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು.
24 Do this daily for seven days—food, a pleasing aroma to me—besides the regular burnt offering and its drink offering. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.
25 On the seventh day you are to hold a holy assembly; you must do no ordinary work. ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.
26 "On the day of firstfruits, when you bring me a new grain offering at your Feast of Weeks, hold a holy assembly; do no ordinary work. “ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.
27 Present a burnt offering, a pleasing aroma to me: two young bulls, one ram, seven year-old male lambs. ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,
28 With them comes a grain offering of fine flour mixed with oil: about six quarts for each bull, about four quarts for the one ram, ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ ಟಗರಿಗೂ
29 and about two quarts for each of the seven lambs; ಏಳು ಕುರಿಮರಿಗಳಲ್ಲಿ ಸುಮಾರು ಒಂದುವರೆ ಕಿಲೋಗ್ರಾಂ,
30 with one male goat to make atonement for you. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಒಂದು ಹೋತವನ್ನು ಸಮರ್ಪಿಸಬೇಕು.
31 Offer these besides the regular burnt offering and its grain offering; see that they're flawless, with their drink offerings." ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]