Skip to content
The Believer's Library

Biblica® Open Kannada Contemporary Version 2022

Numbers 3 OKCV

Show OKCV only
Verse × ×
1 This is the family line of Aaron and Moses, when our Father spoke with Moses on Mount Sinai. ಯೆಹೋವ ದೇವರು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿವಸದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ.
2 These are the names of the sons of Aaron: Nadab the firstborn, then Abihu, Eleazar, and Ithamar. ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.
3 These are the names of Aaron's sons, the anointed priests whom Moses ordained to serve as priests. ಯಾಜಕರಾಗಿ ಅಭಿಷೇಕ ಹೊಂದಿದ ಆರೋನನ ಮಕ್ಕಳುಗಳ ಹೆಸರುಗಳು ಇವೇ, ಇವರೇ ಯಾಜಕೋದ್ಯೋಗ ಮಾಡುವುದಕ್ಕೆ ಪ್ರತಿಷ್ಠಿತರಾದವರು.
4 Nadab and Abihu died before our Father in the wilderness of Sinai when they offered unauthorized fire before him; they had no children. So Eleazar and Ithamar served as priests before Aaron their father. ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು.
5 Then our Father said to Moses: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
6 "Bring the tribe of Levi near and set them before Aaron the priest, to serve him. “ಲೇವಿಯ ಗೋತ್ರವನ್ನು ಹತ್ತಿರ ಕರೆದು, ಯಾಜಕನಾದ ಆರೋನನ ಮುಂದೆ ನಿಲ್ಲಿಸು. ಅವರು ಅವನಿಗೆ ಸಹಾಯ ಮಾಡಲಿ.
7 They are to keep his duties and those of the whole community before the tent of meeting, performing the tabernacle's service. ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು.
8 They are to guard all the tent of meeting's equipment and the Israelites' duty, doing the tabernacle's service. ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.
9 Give the Levites to Aaron and his sons; they are given entirely to him from among Israel's people. ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.
10 Appoint Aaron and his sons to guard their priesthood; any outsider who comes near must die." ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”
11 Then our Father said to Moses: ಯೆಹೋವ ದೇವರು ಮೋಶೆಗೆ ಹೀಗೆಂದರು:
12 "Look, I have taken the Levites from among the Israelites in place of every firstborn that opens the womb among the Israelites. The Levites are mine. “ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು.
13 Every firstborn is mine. The day I struck down every firstborn in Egypt, I set apart for myself every firstborn in Israel—both man and animal. They will be mine. I am your Father." ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”
14 Then our Father spoke to Moses in the wilderness of Sinai: ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಗೆ ಹೇಳಿದ್ದೇನೆಂದರೆ:
15 "Count Levi's sons by fathers' houses and clans; count every male a month old and up." “ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು.
16 So Moses counted them at the word of our Father, just as he had been commanded. ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
17 These were the sons of Levi by their names: Gershon, Kohath, and Merari. ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್ ಮತ್ತು ಮೆರಾರೀ.
18 These are the names of the sons of Gershon by their clans: Libni and Shimei. ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.
19 The sons of Kohath by their clans: Amram, Izhar, Hebron, and Uzziel. ಕೊಹಾತನ ಗೋತ್ರದವರು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.
20 Merari's sons by clan: Mahli and Mushi. These are the Levite clans by fathers' houses. ಮೆರಾರೀಯ ಗೋತ್ರದವರು: ಮಹ್ಲೀ ಮತ್ತು ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರವಾಗಿ ಇವರೇ ಲೇವಿ ವಂಶದವರು.
21 From Gershon: the Libnite clan and the Shimeite clan—these are the Gershonite clans. ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು.
22 The number of males counted, a month old or older, was 7,500. ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಕೆಯಾದವರು 7,500 ಮಂದಿ.
23 The clans of the Gershonites camped behind the tabernacle on the west. ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು.
24 The leader of the fathers' house of the Gershonites was Eliasaph son of Lael. ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥನು ಲಾಯೇಲನ ಮಗ ಎಲ್ಯಾಸಾಫ್.
25 Gershon's sons at the tent of meeting cared for the tabernacle, the tent, its covering, and the entrance screen of the tent of meeting. ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ,
26 The courtyard's curtains and its entrance screen, surrounding the tabernacle and altar, and its cords for all its service. ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂತಹ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.
27 From Kohath came the Amramite clan, the Izharite clan, the Hebronite clan, and the Uzzielite clan; these are the clans of the Kohathites. ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.
28 Males a month old and up numbered 8,600, in charge of the sanctuary. ಕೊಹಾತ್ಯರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 8,600 ಮಂದಿ. ಇವರು ಪರಿಶುದ್ಧ ಸ್ಥಳವನ್ನು ನೋಡಿಕೊಳ್ಳುತ್ತಿದ್ದರು.
29 The clans of the sons of Kohath camped on the south side of the tabernacle. ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು.
30 The leader of the fathers' house of the Kohathite clans was Elizaphan son of Uzziel. ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.
31 They cared for the ark, the table, the lampstand, the altars, the sanctuary vessels used in service, the screen, and all its work. ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.
32 Eleazar son of Aaron the priest was chief leader of the Levites, in charge of those guarding the sanctuary. ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ.
33 From Merari: the Mahlite clan and the Mushite clan—these are Merari's clans. ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು.
34 The number of males counted, a month old or older, was 6,200. ಅವರಲ್ಲಿ ಎಣಿಕೆಯಾದವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 6,200 ಮಂದಿ.
35 Leader of Merarite clans' ancestral house: Zuriel son of Abihail; they camped on the tabernacle's north side. ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು.
36 Merari's sons were charged with the tabernacle's frames, crossbars, posts, bases, all its equipment, and all its service, ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ
37 as well as the posts of the surrounding courtyard with their bases, pegs, and cords. ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು.
38 Camped east of the tabernacle, in front of the tent of meeting toward sunrise, were Moses, Aaron, and his sons, who kept charge of the sanctuary for the Israelites; any outsider who approached was to be put to death. ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.
39 All the Levites whom Moses and Aaron counted at our Father's command, by their clans, every male a month old and up: 22,000. ಮೋಶೆಯೂ ಆರೋನನೂ ಯೆಹೋವ ದೇವರ ಆಜ್ಞೆಯ ಪ್ರಕಾರ, ಕುಟುಂಬಗಳ ಪ್ರಕಾರ ಲೆಕ್ಕಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 22,000 ಮಂದಿ.
40 Then our Father said to Moses, "Count every firstborn male of Israel a month old or older, and record the number of their names. ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಲ್ಲಿರುವ ಜೇಷ್ಠಪುತ್ರರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
41 Take the Levites for me—I am your Father—in place of every firstborn among the people of Israel, and the Levites' livestock in place of every firstborn among Israel's livestock." ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’ ” ಎಂದರು.
42 So Moses counted every firstborn among the people of Israel, just as our Father had commanded him. ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು.
43 All firstborn males, a month or older, listed by name: 22,273. ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಜೇಷ್ಠರಾದವರೆಲ್ಲರ ಒಟ್ಟು ಸಂಖ್ಯೆ 22,273 ಮಂದಿ.
44 Then our Father spoke to Moses: ಯೆಹೋವ ದೇವರು ಮೋಶೆಗೆ ಪುನಃ ಹೇಳಿದ್ದೇನೆಂದರೆ,
45 "Take the Levites instead of every firstborn among Israel's people, and the Levites' livestock instead of theirs. The Levites will be mine. I am your Father. “ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು.
46 To redeem the 273 firstborn Israelites exceeding the Levites' count. ಇಸ್ರಾಯೇಲರ ಜೇಷ್ಠರಾದವರಲ್ಲಿ ಲೇವಿಯರಿಗಿಂತ ಹೆಚ್ಚಾಗಿರುವ 273 ಮಂದಿಯ ವಿಮೋಚನೆಯ ಕ್ರಯವಾಗಿ
47 Collect about 2 ounces per person, by sanctuary standard (each measure about half an ounce of silver). ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.
48 Give the money to Aaron and his sons as the redemption price for the extra firstborn sons." ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.”
49 So Moses collected the redemption money from the firstborn sons who exceeded the number of the Levites; ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
50 from Israel's firstborn sons he took 1,365—about 2 ounces, by the sanctuary standard. ಇಸ್ರಾಯೇಲರಲ್ಲಿ ಜೇಷ್ಠರಾದವರಿಂದ ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ ನಿಗದಿಯಾದ 1,365 ಶೆಕೆಲ್‌ಗಳನ್ನು ತೆಗೆದುಕೊಂಡನು.
51 Moses gave the redemption money to Aaron and his sons, by our Father's word, just as our Father commanded Moses. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]