Skip to content
The Believer's Library

Biblica® Open Kannada Contemporary Version 2022

Numbers 31 OKCV

Show OKCV only
Verse × ×
1 Our Father said to Moses, ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
2 "Avenge the Israelites against the Midianites; afterward you will be gathered to your people." “ನೀನು ಇಸ್ರಾಯೇಲರಿಂದ ಮಿದ್ಯಾನ್ಯರಿಗೆ ಮುಯ್ಯನ್ನು ತೀರಿಸಬೇಕು. ತರುವಾಯ ನೀನು ನಿನ್ನ ಪೂರ್ವಜರ ಬಳಿಗೆ ಸೇರಬೇಕು,” ಎಂದರು.
3 So Moses told the people, "Arm men from among you for war, to go against Midian and carry out our Father's justice on Midian. ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.
4 You are to send 1,000 from each of the tribes of Israel to the war." ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು.
5 So from Israel's thousands, 1,000 per tribe were supplied—12,000 armed for war. ಆಗ ಇಸ್ರಾಯೇಲರ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.
6 Moses sent them to war, 1,000 from each tribe, with Phinehas son of Eleazar the priest, carrying the holy articles of the sanctuary and the signal trumpets in his hand. ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.
7 They waged war against Midian, as our Father had commanded Moses, and they killed every male. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ,
8 They killed the kings of Midian among the slain—Evi, Rekem, Zur, Hur, and Reba, Midian's five kings—and killed Balaam son of Beor with the sword. ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.
9 The people of Israel captured Midian's women and children, and plundered all their livestock, flocks, and goods. ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.
10 They burned with fire all the cities where they lived and all their camps, ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ, ಅವರ ಸಮಸ್ತ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
11 and they took all the spoil and all the plunder, both people and animals. ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.
12 They brought the captives, plunder, and spoil to Moses, Eleazar the priest, and Israel's whole assembly, at the camp on Moab's plains by the Jordan, across from Jericho. ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.
13 Moses, Eleazar the priest, and all the assembly's leaders went to meet them outside the camp. ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
14 But Moses was angry with the army's officers, commanders of thousands and commanders of hundreds, who returned from the battle. ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.
15 Moses said to them, "Have you let all the women live? ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?
16 Look, these women, on Balaam's advice, led Israel to betray our Father in the Peor incident, bringing the plague on the congregation of our Father. ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.
17 Now kill every male child, and kill every woman who has slept with a man. ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
18 But keep alive for yourselves every young girl who has not slept with a man. ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ.
19 Stay outside the camp seven days. Anyone who killed someone or touched a corpse must purify themselves on the third day and the seventh—you and your captives. “ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು.
20 Purify every garment, every leather article, everything made of goats' hair, and every wood article." ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು.
21 Eleazar the priest told the soldiers who had gone to war, "This is the statute of the law our Father commanded Moses: ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ:
22 only the gold, the silver, the bronze, the iron, the tin, and the lead. ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು
23 Everything that can withstand fire, pass through the fire—it becomes clean. But it must also be purified with water of purification. Whatever can't withstand fire, pass through the water. ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.
24 Wash your clothes on the seventh day, and you'll be clean; then you may enter the camp." ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು.
25 Our Father said to Moses, ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
26 "You, Eleazar the priest, and the family heads of the community, count the plunder taken, people and animals. “ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ.
27 Divide the plunder into two: between the fighters who went to battle and the whole congregation. ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು.
28 From the soldiers who went out to battle, take a tax for me: one in 500—people, cattle, donkeys, and flocks. ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.
29 Take it from their half and give it to Eleazar the priest as a contribution to me. ಅವರ ಅರ್ಧ ಪಾಲಿನಿಂದ ಅದನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಅರ್ಪಣೆಯಾಗಿ, ಯಾಜಕನಾದ ಎಲಿಯಾಜರನಿಗೆ ಕೊಡಬೇಕು.
30 From the Israelites' half, take one in fifty—from the people, cattle, donkeys, flocks, and all the animals—and give them to the Levites who keep charge of my tabernacle." ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.
31 Moses and Eleazar the priest did as our Father had commanded Moses. ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿದರು.
32 The plunder remaining from the spoil that the army had taken was 675,000 sheep, ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು.
33 72,000 cattle, 72,000 ಪಶುಗಳು;
34 61,000 donkeys, ಕತ್ತೆಗಳು 61,000;
35 and 32,000 persons in all—the women who had not slept with a man. ಪುರುಷರನ್ನು ಅರಿಯದ ಸ್ತ್ರೀಯರು 32,000 ಮಂದಿ.
36 The half belonging to those who had gone out to war numbered 337,500 sheep, ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: 3,37,500 ಕುರಿಗಳಿಂದ
37 and the tribute to our Father from the sheep was 675. ಯೆಹೋವ ದೇವರಿಗೆ ಕೊಡಲಾದ ಕಪ್ಪವು 675;
38 The cattle were 36,000, of which the tribute to our Father was 72. ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು;
39 The donkeys were 30,500, of which the tribute to our Father was 61. 30,500 ಕತ್ತೆಗಳು; ಅವುಗಳಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 61;
40 The persons were 16,000, of which the tribute to our Father was 32. 16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ.
41 Moses gave the tribute, our Father's contribution, to Eleazar the priest, as our Father commanded him. ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.
42 As for the Israelites' half, which Moses had set apart from that of the men who fought, ಮೋಶೆಯು ಯುದ್ಧಕ್ಕೆ ಹೋದ ಜನರಿಂದ ತೆಗೆದುಕೊಂಡು ಇಸ್ರಾಯೇಲರಿಗೆ ಹಂಚಿದ ಅರ್ಧ ಭಾಗದ ವಿವರ:
43 the congregation's half was 337,500 sheep, ಕುರಿಗಳಿಂದ ಸಭೆಯ ಅರ್ಧ 3, 37,500 ಕುರಿಗಳು;
44 36,000 cattle, 36,000 ಪಶುಗಳು;
45 30,500 donkeys, 30,500 ಕತ್ತೆಗಳು;
46 and 16,000 persons. 16,000 ಜನರು;
47 From the Israelites' half, Moses took one of every fifty—people and animals—and gave them to the Levites in charge of our Father's tabernacle, as our Father had commanded Moses. ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
48 The officers over the army's units, the commanders of thousands and hundreds, came to Moses, ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,
49 and said to him, "Your servants counted the fighting men under our command; not one of us is missing. ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ.
50 So we've brought our Father an offering—each man's find: gold articles, armlets, bracelets, signet rings, earrings, beads—to atone for ourselves before our Father." ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.
51 Moses and Eleazar the priest received from them the gold, all the crafted articles. ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು.
52 All the gold of the contribution that they presented to our Father, from the commanders of thousands and the commanders of hundreds, came to about 420 pounds. ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವ ದೇವರಿಗೆ ಅರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್‌ಗಳು.
53 The men of war had each taken plunder for himself. ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು.
54 Moses and Eleazar the priest took the gold from the commanders of thousands and hundreds and brought it into the tent of meeting as a reminder for the Israelites before our Father. ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]