Skip to content
The Believer's Library

Biblica® Open Kannada Contemporary Version 2022

Numbers 32 OKCV

Show OKCV only
Verse × ×
1 The sons of Reuben and sons of Gad had vast herds of livestock. Seeing the land of Jazer and land of Gilead, they noticed it suited livestock well. ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
2 The sons of Gad and sons of Reuben came and said to Moses, to Eleazar the priest, and to the community's leaders: ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ:
3 "Ataroth, Dibon, Jazer, Nimrah, Heshbon, Elealeh, Sebam, Nebo, and Beon, “ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,
4 the land our Father struck down before Israel's community—is land for livestock, and your servants have livestock." ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು.
5 They said, "If we have found favor in your eyes, give this land to your servants as a possession. Don't make us cross the Jordan." ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು.
6 Moses said to the sons of Gad and Reuben, "Should your brothers go to war while you sit here? ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ?
7 Why discourage Israel from crossing into the land our Father has given them? ಯೆಹೋವ ದೇವರು ಅವರಿಗೆ ಕೊಟ್ಟ ದೇಶಕ್ಕೆ ಹೋಗುವುದಕ್ಕೆ ನೀವು ಇಸ್ರಾಯೇಲರ ಹೃದಯಗಳನ್ನು ಅಧೈರ್ಯಪಡಿಸುವುದು ಏಕೆ?
8 This is what your fathers did when I sent them from Kadesh-barnea to see the land. ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
9 They went up to the Valley of Eshcol, saw the land, then discouraged the Israelites' hearts from entering the land our Father had given them. ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.
10 And our Father's anger burned that day, and he swore an oath, saying, ಯೆಹೋವ ದೇವರು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವರಾಗಿ ಪ್ರಮಾಣಮಾಡಿ,
11 surely the men who came up from Egypt, twenty years old and up, will not see the land I swore to give to Abraham, to Isaac, and to Jacob—because they did not fully follow me. ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
12 None but Caleb son of Jephunneh the Kenizzite and Joshua son of Nun, for they fully followed our Father. ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ.
13 The anger of our Father burned against Israel; he made them wander the wilderness forty years until the whole generation that had done evil before our Father had died. ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.
14 Now you have risen up in place of your fathers, a brood of sinners, adding still more to our Father's fierce anger against Israel! “ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.
15 If you turn from following him, he will leave them in the wilderness once again, and you will destroy all this people." ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.
16 They came to him and said, "We'll build pens here for our livestock and cities for our children. ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
17 But we will arm ourselves, ready to go ahead of the Israelites until we bring them to their place, while our children stay in fortified cities, safe from those living in the land. ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
18 We will not return home until every Israelite has taken his inheritance. ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ.
19 We won't inherit with them across the Jordan and beyond, since our inheritance has come to us on this side of the Jordan, to the east." ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು.
20 Moses said to them, "If you do this—if you arm yourselves before our Father for the war, ಮೋಶೆಯು ಅವರಿಗೆ, “ನೀವು ಈ ಕಾರ್ಯವನ್ನು ಮಾಡಿದರೆ, ನೀವು ಯೆಹೋವ ದೇವರ ಮುಂದೆ ಯುದ್ಧಕ್ಕೆ ಸಿದ್ಧವಾಗಿದ್ದರೆ,
21 and every armed man among you crosses the Jordan before our Father until he drives out his enemies from before him, ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ,
22 and the land is subdued before our Father, afterward you may return and be free of obligation to him and to Israel, and this land will be your possession before our Father. ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು.
23 But if you don't do this, look—you will have sinned against our Father, and know: your sin will overtake you. “ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.
24 Build cities for your little ones, pens for your flocks, and do what your mouth has promised." ನಿಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿ, ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ,” ಎಂದು ಹೇಳಿದನು.
25 The sons of Gad and Reuben said to Moses, "Your servants will do as my lord commands. ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ, “ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
26 Our children, wives, flocks, and all our herds will stay there in the cities of Gilead, ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
27 but your servants, every man armed for war, will cross before our Father to battle, as my lord says." ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು.
28 So Moses commanded Eleazar the priest, Joshua son of Nun, and the clan leaders of Israel's tribes about them. ಆಗ ಮೋಶೆಯು ಅವರ ವಿಷಯವಾಗಿ ಯಾಜಕನಾದ ಎಲಿಯಾಜರನಿಗೂ, ನೂನನ ಮಗ ಯೆಹೋಶುವನಿಗೂ, ಇಸ್ರಾಯೇಲರ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದರು.
29 Moses said to them, "If Gad's and Reuben's sons cross the Jordan with you, every man armed for battle before our Father, and the land is subdued before you, then give them Gilead as their possession. ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು.
30 But if they won't cross over armed with you, they must take possession among you in the land of Canaan." ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟಿ ಬಾರದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿಯೇ ಸೊತ್ತನ್ನು ಹೊಂದಿಕೊಳ್ಳಬೇಕು,” ಎಂದನು.
31 Gad's and Reuben's sons answered, "We will do as our Father told your servants. ಆಗ ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಉತ್ತರವಾಗಿ, “ಯೆಹೋವ ದೇವರು ನಿನ್ನ ಸೇವಕರಿಗೆ ಹೇಳಿದ್ದಂತೆಯೇ ನಾವು ಮಾಡುವೆವು.
32 We ourselves will cross armed before our Father into the land of Canaan, and our inherited possession will remain ours beyond the Jordan." ನಾವು ಯುದ್ಧಕ್ಕೆ ಸಿದ್ಧವಾಗಿ ಯೆಹೋವ ದೇವರ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು. ಆದರೆ ಯೊರ್ದನ್ ನದಿಯ ಈಚೆಯಲ್ಲಿರುವ ನಮ್ಮ ಸೊತ್ತಿನ ಭಾಗವೇ ನಮಗಿರಲಿ,” ಎಂದು ಹೇಳಿದರು.
33 Moses gave to them—the sons of Gad, the sons of Reuben, and the half-tribe of Manasseh son of Joseph—the kingdom of Sihon king of the Amorites and the kingdom of Og king of Bashan: the land, its cities, the territories, and the cities of the country around. ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಅರಸನಾದ ಓಗನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅದರ ಭೂಮಿಯನ್ನೂ, ಅದರ ಮೇರೆಗಳಲ್ಲಿ ಸುತ್ತಮುತ್ತಲ ಪಟ್ಟಣಗಳನ್ನೂ ಕೊಟ್ಟನು.
34 And the sons of Gad built Dibon, Ataroth, Aroer, ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್,
35 Atroth-shophan, Jazer, Jogbehah, ಅಟ್ರೋತ್ಷೋಫಾನ್, ಯಜ್ಜೇರ್, ಯೊಗ್ಬೆಹಾ,
36 Beth-nimrah, and Beth-haran—fortified cities and pens for sheep. ಬೇತ್ ನಿಮ್ರಾ ಮತ್ತು ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ, ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದರು.
37 And the sons of Reuben built Heshbon, Elealeh, Kiriathaim, ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್,
38 Nebo, Baal-meon (renamed), and Sibmah—they gave the cities they rebuilt new names. ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
39 Sons of Machir son of Manasseh went to Gilead, captured it, and drove out the Amorites living there. ಮನಸ್ಸೆಯ ಮಗ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ, ಅದನ್ನು ತೆಗೆದುಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
40 So Moses gave Gilead to Machir son of Manasseh, and he settled in it. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು.
41 And Jair son of Manasseh went and captured their villages, and called them Havvoth-jair. ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.
42 And Nobah went and captured Kenath and its villages, and called it Nobah, after his own name. ನೋಬಹನು ಹೋಗಿ ಕೆನಾತ್ ಎಂಬ ಪಟ್ಟಣವನ್ನೂ, ಅದರ ಗ್ರಾಮಗಳನ್ನೂ ತೆಗೆದುಕೊಂಡು, ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂಬ ಹೆಸರಿಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]