Skip to content
The Believer's Library

Biblica® Open Kannada Contemporary Version 2022

Numbers 33 OKCV

Show OKCV only
Verse × ×
1 These are the stages of the Israelites' journey out of Egypt, by their divisions under Moses and Aaron's hand. ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ.
2 Moses wrote their starting points by stage, at our Father's command; these are their stages by starting points. ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು.
3 They set out from Rameses on the fifteenth day of the first month, the day after Passover—the Israelites marched out boldly, in full view of all the Egyptians, ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.
4 while the Egyptians buried all their firstborn, whom our Father had struck down among them, and on their gods our Father executed judgments. ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.
5 The children of Israel set out from Rameses and camped at Succoth. ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.
6 They set out from Succoth and camped at Etham, which is on the edge of the wilderness. ಸುಕ್ಕೋತಿನಿಂದ ಹೊರಟು ಮರುಭೂಮಿಯ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
7 They left Etham, turned back to Pi-hahiroth, east of Baal-zephon, and camped before Migdol. ಏತಾಮಿನಿಂದ ಹೊರಟು ಬಾಲ್ಜೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು, ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
8 They set out from before Hahiroth, crossed the sea into the wilderness, traveled three days through the wilderness of Etham, and camped at Marah. ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು.
9 They left Marah and reached Elim, where twelve water springs and seventy palm trees stood; there they camped. ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.
10 They set out from Elim and camped by Yam Suph. ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದುಕೊಂಡರು.
11 They set out from Yam Suph and camped in the wilderness of Sin. ಕೆಂಪು ಸಮುದ್ರದಿಂದ ಹೊರಟು ಸೀನೆಂಬ ಮರುಭೂಮಿಯಲ್ಲಿ ಇಳಿದುಕೊಂಡು,
12 They set out from the wilderness of Sin and camped at Dophkah. ಸೀನೆಂಬ ಮರುಭೂಮಿಯಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.
13 They set out from Dophkah and camped at Alush. ದೊಫ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು.
14 They left Alush and camped at Rephidim, where the people had no water to drink. ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
15 They set out from Rephidim and camped in the wilderness of Sinai. ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
16 They set out from the wilderness of Sinai and camped at Kibroth-hattaavah. ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
17 They set out from Kibroth-hattaavah and camped at Hazeroth. ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
18 They set out from Hazeroth and camped at Rithmah. ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
19 They set out from Rithmah and camped at Rimmon-perez. ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
20 They set out from Rimmon-perez and camped at Libnah. ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
21 They set out from Libnah and camped at Rissah. ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
22 They set out from Rissah and camped at Kehelathah. ರಿಸ್ಸದಿಂದ ಹೊರಟು ಕೆಹೇಲಾತಾನಲ್ಲಿ ಇಳಿದುಕೊಂಡರು.
23 They set out from Kehelathah and camped at Mount Shepher. ಕೆಹೇಲಾತಾನಿಂದ ಹೊರಟು ಶೆಫೆರ್ ಪರ್ವತದಲ್ಲಿ ಇಳಿದುಕೊಂಡರು.
24 They set out from Mount Shepher and camped at Haradah. ಶೆಫೆರ್ ಪರ್ವತದಿಂದ ಹೊರಟು ಹರಾದಾದಲ್ಲಿ ಇಳಿದುಕೊಂಡರು.
25 They set out from Haradah and camped at Makheloth. ಹರಾದಾದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
26 They set out from Makheloth and camped at Tahath. ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
27 They set out from Tahath and camped at Terah. ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
28 They set out from Terah and camped at Mithkah. ತೆರಹದಿಂದ ಹೊರಟು ಮಿತ್ಕಾದಲ್ಲಿ ಇಳಿದುಕೊಂಡರು.
29 They set out from Mithkah and camped at Hashmonah. ಮಿತ್ಕಾದಿಂದ ಹೊರಟು ಹಷ್ಮೋನಾದಲ್ಲಿ ಇಳಿದುಕೊಂಡರು.
30 They set out from Hashmonah and camped at Moseroth. ಹಷ್ಮೋನಾದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
31 They set out from Moseroth and camped at Bene-jaakan. ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
32 They set out from Bene-jaakan and camped at Hor-haggidgad. ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
33 They set out from Hor-haggidgad and camped at Jotbathah. ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
34 They set out from Jotbathah and camped at Abronah. ಯೊಟ್ಬಾತದಿಂದ ಹೊರಟು ಅಬ್ರೋನಾದಲ್ಲಿ ಇಳಿದುಕೊಂಡರು.
35 They set out from Abronah and camped at Ezion-geber. ಅಬ್ರೋನಾದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
36 They set out from Ezion-geber and camped in the wilderness of Zin, that is, Kadesh. ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.
37 They left Kadesh and camped at Mount Hor, on the edge of Edom's land. ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
38 Aaron the priest climbed Mount Hor at our Father's command and died there in the fortieth year after the children of Israel left the land of Egypt, in the fifth month, on its first day. ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.
39 Aaron was 123 years old when he died on Mount Hor. ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
40 The Canaanite king of Arad, living in the Negev of Canaan, heard the Israelites were coming. ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು.
41 They set out from Mount Hor and camped at Zalmonah. ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
42 They set out from Zalmonah and camped at Punon. ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
43 They set out from Punon and camped at Oboth. ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
44 They set out from Oboth and camped at Iye-abarim, on the border of Moab. ಓಬೋತಿನಿಂದ ಹೊರಟು ಮೋವಾಬಿನ ಮೇರೆಯಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
45 They set out from Iyim and camped at Dibon-gad. ಇಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
46 They set out from Dibon-gad and camped at Almon-diblathaim. ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
47 They set out from Almon-diblathaim and camped in the mountains of Abarim, near Nebo. ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೆಬೋವಿನ ಪೂರ್ವದಲ್ಲಿರುವ ಅಬಾರೀಮ್ ಬೆಟ್ಟಗಳಲ್ಲಿ ಇಳಿದುಕೊಂಡರು.
48 They left the mountains of Abarim and camped on the plains of Moab, by the Jordan at Jericho. ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು.
49 They camped along the Jordan, from Beth-jeshimoth to Abel-shittim, on the plains of Moab. ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.
50 Our Father spoke to Moses in the plains of Moab by the Jordan at Jericho, saying: ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,
51 "Speak to the Israelites and tell them: When you cross the Jordan into the land of Canaan. “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,
52 Drive out everyone living in the land before you; destroy all their carved images and metal figures, and tear down all their high places. ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.
53 Possess the land and live in it, for I have given you the land to possess. ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
54 Divide the land by lot among your clans—more land to larger clans, less to smaller ones. Wherever the lot falls for someone, that becomes theirs. You will inherit by your ancestral tribes. ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
55 "But if you don't drive out the land's residents before you, those you leave will be barbs in your eyes and thorns in your sides, troubling you in the land where you live. “ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.
56 And then I will do to you what I had planned to do to them." ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]