Skip to content
The Believer's Library

Biblica® Open Kannada Contemporary Version 2022

Numbers 34 OKCV

Show OKCV only
Verse × ×
1 And our Father spoke to Moses, saying, ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
2 "command the Israelites: when you enter the land of Canaan, this is the land that will fall to you as inheritance—the land of Canaan, within its borders. “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
3 Your south side runs from the Zin wilderness along Edom's edge; your south border starts at the Dead Sea's end, eastward. “ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
4 Your border will turn south of the Ascent of Akrabbim, cross to Zin, reach south of Kadesh-barnea, go on to Hazar-addar, and pass to Azmon. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ, ಚಿನ್‌ಗೆ ಹಾದು, ಕಾದೇಶ್ ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು, ಅಲ್ಲಿಂದ ಹಚರದ್ದಾರಿಗೆ ಹೊರಟು, ಅಚ್ಮೋನಿಗೆ ಹಾದು ಹೋಗಬೇಕು.
5 From Azmon the border turns to Egypt's Brook, ending at the Sea. ಅಚ್ಮೋನಿನಿಂದ ಈಜಿಪ್ಟಿನ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
6 "Your western border will be the Mediterranean Sea and its coast. ಪಶ್ಚಿಮದಲ್ಲಿ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು. ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವುದು.
7 "This will be your north border: from the Mediterranean Sea draw your line to Mount Hor. ನಿಮ್ಮ ಉತ್ತರ ಮೇರೆ ಯಾವುದೆಂದರೆ ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದವರೆಗೂ,
8 From Mount Hor mark a line to Lebo-hamath, ending at Zedad; ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು
9 then the border will extend to Ziphron and end at Hazar-enan. This will be your northern border. ಜಿಫ್ರೋನಿಗೆ ಹೋಗಿ, ಹಚರ್ ಏನಾನಿನಲ್ಲಿ ಮುಗಿಯಲಿ. ಇದು ನಿಮ್ಮ ಉತ್ತರ ಮೇರೆ.
10 "You will mark out your eastern border from Hazar-enan to Shepham. ಪೂರ್ವದ ಮೇರೆಗೋಸ್ಕರ ಹಚರ್ ಏನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
11 The border will go down from Shepham to Riblah, east of Ain, then go down and reach the slope east of the Sea of Chinnereth. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
12 The border goes down to the Jordan, ending at the Dead Sea. This will be your land, with its borders all around." ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. “ ‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’ ”
13 Moses commanded the Israelites: This is the land you will inherit by lot, which our Father commanded to give to the nine tribes and the half-tribe. ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.
14 The tribe of Reuben's sons, by their fathers' houses, and the tribe of Gad's sons, by their fathers' houses, have already taken their inheritance; so has the half-tribe of Manasseh. ಏಕೆಂದರೆ ರೂಬೇನ್ಯರ ಮಕ್ಕಳ ಗೋತ್ರವೂ, ಗಾದನ ಮಕ್ಕಳ ಗೋತ್ರವೂ, ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸೊತ್ತನ್ನು ಪಡೆದುಕೊಂಡಿದ್ದಾರೆ.
15 The two and a half tribes received their inheritance across the Jordan from Jericho, eastward toward the sunrise. ಎರಡೂವರೆ ಗೋತ್ರಗಳು ತಮ್ಮ ಸೊತ್ತನ್ನು ಯೊರ್ದನಿನ ಈಚೆಯಲ್ಲಿ ಯೆರಿಕೋವಿಗೆ ಸೂರ್ಯನು ಉದಯಿಸುವ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ,” ಎಂದನು.
16 And our Father spoke to Moses, saying, ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
17 "names of the men who will divide the land for you as inheritance: Eleazar the priest and Joshua son of Nun. “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ
18 And you will take one leader from each tribe to divide the land for inheritance. ದೇಶದ ಸೊತ್ತನ್ನು ಹಂಚುವುದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತೆಗೆದುಕೊಳ್ಳಿರಿ.
19 These are the names of the men: from the tribe of Judah, Caleb the son of Jephunneh; “ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,
20 from the tribe of the sons of Simeon, Shemuel the son of Ammihud; ಸಿಮೆಯೋನನ ಮಕ್ಕಳ ಗೋತ್ರದಿಂದ ಅಮ್ಮೀಹೂದನ ಮಗ ಶಮುವೇಲನೂ,
21 from the tribe of Benjamin, Elidad the son of Chislon; ಬೆನ್ಯಾಮೀನನ ಗೋತ್ರದಿಂದ ಕಿಸ್ಲೋನನ ಮಗ ಎಲೀದಾದ್,
22 from the tribe of the sons of Dan, a leader, Bukki the son of Jogli; ದಾನನ ಮಕ್ಕಳ ಗೋತ್ರದ ಪ್ರಧಾನನು, ಯೊಗ್ಲೀಯ ಮಗ ಬುಕ್ಕೀ,
23 from Joseph's sons: from Manasseh's tribe, leader Hanniel son of Ephod, ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಏಫೋದನ ಮಗ ಹನ್ನೀಯೇಲನೂ,
24 and from the tribe of the sons of Ephraim, a leader, Kemuel the son of Shiphtan; ಎಫ್ರಾಯೀಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗ ಕೆಮೂಯೇಲನೂ,
25 from the tribe of the sons of Zebulun, a leader, Elizaphan the son of Parnach; ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗ ಎಲೀಚಾಫಾನ್,
26 from the tribe of the sons of Issachar, a leader, Paltiel the son of Azzan; ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗ ಪಲ್ಟೀಯೇಲನೂ,
27 from the tribe of the sons of Asher, a leader, Ahihud the son of Shelomi; ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗ ಅಹೀಹೂದನೂ,
28 and from the tribe of the sons of Naphtali, a leader, Pedahel the son of Ammihud." ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅಮ್ಮೀಹೂದನ ಮಗ ಪೆದಹೇಲನೂ.”
29 These are the ones our Father commanded to divide the inheritance among the children of Israel in the land of Canaan. ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಸೊತ್ತನ್ನು ಹಂಚುವುದಕ್ಕೆ ಯೆಹೋವ ದೇವರು ನೇಮಿಸಿದ ಮನುಷ್ಯರು ಇವರೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]