Skip to content
The Believer's Library

Biblica® Open Kannada Contemporary Version 2022

Numbers 35 OKCV

Show OKCV only
Verse × ×
1 Our Father spoke to Moses on the plains of Moab by the Jordan across from Jericho: ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,
2 "Command the Israelites to give the Levites, from the inheritance they hold, cities to live in, and pastureland around them, for the Levites. “ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು.
3 The cities are theirs to live in; the pasturelands are for their cattle, livestock, and all their living creatures. ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ.
4 "The pasturelands of the cities you give the Levites reach about 1,500 feet out from the city wall on every side. “ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
5 Measure outside the city: about 3,000 feet on the east side, 3,000 on the south side, 3,000 on the west side, 3,000 on the north side, with the city in the middle. This is the pastureland for their cities. ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
6 "Of the cities you give the Levites, six are to be cities of refuge, for a killer to flee to; besides these, give forty-two cities. “ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.
7 "All the cities that you give the Levites are to be forty-eight cities, together with their pasturelands. ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು.
8 From Israel's territory, give the Levites cities—more from large tribes, fewer from small; each gives in proportion to the inheritance it received." ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.
9 Our Father spoke to Moses: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
10 "Speak to the Israelites and tell them: When you cross the Jordan into the land of Canaan, “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,
11 choose cities for yourselves, cities of refuge, where anyone who kills a person unintentionally may flee there. ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
12 These cities are a refuge for you from the blood avenger, so the killer won't die until standing before the assembly for judgment. ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.
13 The cities you give are to be six cities of refuge for you. ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
14 Give three cities beyond the Jordan and three cities in the land of Canaan; they are to be cities of refuge. ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
15 These six cities are a refuge for Israelites, the foreigner, and the temporary resident among them, so anyone who kills a person by accident may flee there. ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
16 "But if someone strikes another with an iron object and the victim dies, the attacker is a murderer—the murderer must be put to death. “ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
17 If he struck him with a stone in his hand that could kill, and he died, he is a murderer; the murderer must be put to death. ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
18 Or if he struck him with a deadly wooden tool in hand, and he died, he is a murderer; the murderer must be put to death. ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.
19 The avenger of blood is to kill the murderer himself; when he meets him, he is to kill him. ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.
20 If he pushed him from hatred, or threw something at him in ambush, so he died, ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ,
21 or if he struck him with his hand out of hatred and he died, the striker must be put to death—he is a murderer. The avenger of blood is to kill the murderer when he finds him. ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.
22 "But if he shoved him suddenly without hostility, or threw anything at him without ambush, “ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,
23 or, without seeing him, dropped on him a stone able to kill, and he died—not his enemy, not seeking his harm, ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ,
24 then the assembly is to judge between the slayer and the avenger of blood according to these rules. ಆಗ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ, ರಕ್ತಪಾತಕ್ಕೆ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
25 The assembly must rescue the killer from the blood avenger's hand and return him to the city of refuge he fled to; he must stay there until the high priest anointed with holy oil dies. ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ.
26 "But if the killer ever leaves the border of his refuge city, where he fled, “ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,
27 if the avenger of blood finds him outside his city of refuge's border and kills the killer, he incurs no bloodguilt. ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ.
28 The killer must stay in his city of refuge until the high priest dies; only after the high priest's death may he return to his own land. ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.
29 These are to be a permanent law for you throughout your generations, in every place where you live. “ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.
30 "Anyone who kills a person is to be executed as a murderer, on witnesses' testimony; one witness alone cannot testify against a person to cause death. “ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.
31 "Take no ransom for a murderer's life who deserves death—he must be executed. “ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.
32 Take no ransom for someone who fled to his city of refuge, letting him return to live in the land before the priest dies. “ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.
33 "Don't pollute the land you live in—blood pollutes the land, and the land can have no atonement for blood shed on it except by the blood of the one who shed it. “ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
34 Don't make the land unclean—you live there, and I live among you; for I, your Father, live among Israel's people." ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]