Skip to content
The Believer's Library

Biblica® Open Kannada Contemporary Version 2022

Numbers 36 OKCV

Show OKCV only
Verse × ×
1 The family heads of Gilead's clan—descendants of Machir son of Manasseh, from Joseph's clans—approached and spoke before Moses and the leaders, heads of Israel's family clans. ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ,
2 They said, "Our Father commanded my lord to give the land as an inheritance by lot to Israel's people, and my lord was commanded by our Father to give our brother Zelophehad's inheritance to his daughters. “ಚೀಟುಹಾಕಿ ನಾಡನ್ನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವುದಕ್ಕೆ ಯೆಹೋವ ದೇವರು ನಮ್ಮ ಒಡೆಯನಾದ ನಿನಗೆ ಆಜ್ಞಾಪಿಸಿದರು. ನಮ್ಮ ಸಹೋದರನಾದ ಚಲ್ಪಹಾದನ ಸೊತ್ತನ್ನು ಅವನ ಪುತ್ರಿಯರಿಗೆ ಕೊಡಬೇಕೆಂದು ದೇವರಿಂದ ಅಪ್ಪಣೆಯಾಗಿತ್ತು.
3 If they marry men from other Israelite tribes, their inheritance will be removed from our fathers' inheritance and added to their new tribe's, shrinking our allotted inheritance. ಆದರೆ ಅವರು ಇಸ್ರಾಯೇಲರ ಬೇರೆ ಗೋತ್ರದವರಿಗೆ ಮದುವೆಯಾದರೆ, ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಸೊತ್ತಿನಿಂದ ಅವರನ್ನು ಮದುವೆಮಾಡಿಕೊಂಡ ಗೋತ್ರದವರಿಗೆ ಸೊತ್ತು ಹೋಗುತ್ತದೆ. ಇದರಿಂದ ನಮ್ಮ ಸೊತ್ತಿನ ಭಾಗ ಕಡಿಮೆಯಾಗಿ ಹೋಗುವುದು.
4 When Israel's jubilee comes, their inheritance joins the inheritance of the tribe they marry into, taken from our fathers' tribe's inheritance." ಇಸ್ರಾಯೇಲರಿಗೆ ಜೂಬಿಲಿ ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.”
5 So Moses commanded the Israelites at our Father's word, saying, "The tribe of Joseph speaks rightly. ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಇಸ್ರಾಯೇಲರಿಗೆ ಆಜ್ಞಾಪಿಸಿ, “ಯೋಸೇಫನ ಪುತ್ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.
6 This is what our Father commands about Zelophehad's daughters: they may marry whoever they think best, only within their father's tribal clan. ಯೆಹೋವ ದೇವರು ಚಲ್ಪಹಾದನ ಪುತ್ರಿಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನೆಂದರೆ: ಅವರು ತಮ್ಮ ಮನಸ್ಸು ಬಂದವರೊಂದಿಗೆ ಮದುವೆಮಾಡಿಕೊಳ್ಳಲಿ, ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದವರಿಗೆ ಮಾತ್ರ ಮದುವೆ ಮಾಡಿಕೊಳ್ಳಬಹುದು.
7 No Israelite inheritance may pass from tribe to tribe; each Israelite must keep their ancestral tribe's inheritance. ಇಸ್ರಾಯೇಲರ ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರದ ಕೈಗೆ ಹೋಗಬಾರದು. ಏಕೆಂದರೆ ಇಸ್ರಾಯೇಲರು, ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸೊತ್ತನ್ನು ತಾನೇ ಹೊಂದಿರಬೇಕು.
8 Every daughter who inherits in an Israelite tribe must marry within her father's tribal clan, so every Israelite keeps his ancestral inheritance. ಇದಕ್ಕಾಗಿ ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸೊತ್ತನ್ನು ಸ್ವಾಧೀನ ಮಾಡಿಕೊಳ್ಳುವಂತೆ ಇಸ್ರಾಯೇಲರ ಗೋತ್ರಗಳೊಳಗೆ ಸೊತ್ತನ್ನು ಹೊಂದಿರುವ ಒಬ್ಬೊಬ್ಬ ಪುತ್ರಿಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿರುವವನೊಂದಿಗೇ ಮದುವೆ ಮಾಡಿಕೊಳ್ಳಬೇಕು.
9 No inheritance may pass from one tribe to another; each tribe of Israel must hold to its own inheritance." ಒಂದು ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಹಸ್ತಾಂತರಗೊಳ್ಳಬಾರದು ಆದರೆ ಇಸ್ರಾಯೇಲರ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸೊತ್ತಿಗೆ ತಾನೇ ಹೊಂದಿಕೊಳ್ಳಬೇಕು,” ಎಂದನು.
10 Just as our Father commanded Moses, so the daughters of Zelophehad did. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾದನ ಪುತ್ರಿಯರು ಮಾಡಿದರು.
11 Mahlah, Tirzah, Hoglah, Milcah, and Noah, the daughters of Zelophehad, married their cousins on their father's side. ಚಲ್ಪಹಾದನ ಪುತ್ರಿಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ, ತಮ್ಮ ಚಿಕ್ಕಪ್ಪಂದಿರ ಪುತ್ರರನ್ನು ಮದುವೆಯಾದರು.
12 They married into the clans of Manasseh son of Joseph's descendants, and their inheritance stayed in their father's tribal clan. ಯೋಸೇಫನ ಮಗನಾದ ಮನಸ್ಸೆಯ ಪುತ್ರರ ಕುಟುಂಬದವರೊಡನೆ ಮದುವೆಯಾದರು. ಈ ಪ್ರಕಾರ ಅವರ ಸೊತ್ತು ತಮ್ಮ ಪಿತೃವಿನ ಗೋತ್ರದಲ್ಲಿಯೇ ಉಳಿಯಿತು.
13 These are the commands and rulings our Father commanded through Moses to Israel's people on the plains of Moab, by the Jordan at Jericho. ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರಿಗೆ ಆಜ್ಞಾಪಿಸಿದ ಆಜ್ಞೆಗಳೂ, ನ್ಯಾಯಗಳೂ ಇವೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]