Skip to content
The Believer's Library

Biblica® Open Kannada Contemporary Version 2022

Numbers 4 OKCV

Show OKCV only
Verse × ×
1 Our Father spoke to Moses and Aaron, saying: ಯೆಹೋವ ದೇವರು ಮೋಶೆಯ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 "Count the Kohathites among the Levites, by clan and ancestral house. “ಲೇವಿಯರೊಳಗೆ ಕೊಹಾತ್ಯರಲ್ಲಿಯ ಕುಟುಂಬಗಳನ್ನು ಗೋತ್ರಗಳನ್ನಾಗಿ ಲೆಕ್ಕಮಾಡು.
3 From thirty to fifty years old, all who enter the service to work in the tent of meeting. ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು.
4 "This is the service of Kohath's sons in the tent of meeting: the most holy things. “ದೇವದರ್ಶನದ ಗುಡಾರದಲ್ಲಿ ಕೊಹಾತ್ಯರು ಮಾಡುವ ಸೇವೆ ಯಾವುದೆಂದರೆ, ದೇವದರ್ಶನ ಗುಡಾರದ ಅತಿಪರಿಶುದ್ಧವಾದ ವಸ್ತುಗಳನ್ನು ಕಾಪಾಡುವುದು.
5 When the camp moves, Aaron and his sons take down the screening curtain and cover the ark of the testimony with it. ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,
6 They are to cover it with fine leather, spread an all-blue cloth over that, and set its poles. ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.
7 "On the table of the Presence they'll spread a blue cloth, put the plates, dishes, bowls, and pouring jars on it; the regular bread stays on it. “ಸಮ್ಮುಖದ ರೊಟ್ಟಿಯ ಮೇಜಿನ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದರ ಮೇಲೆ ಪಾತ್ರೆಗಳನ್ನು, ಸೌಟುಗಳನ್ನು, ಬೋಗುಣಿಗಳನ್ನು ಮತ್ತು ಪಾನಾರ್ಪಣೆಯ ಹೂಜಿಗಳನ್ನು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಯನ್ನು ಅದರ ಮೇಲೆ ಇಡಬೇಕು.
8 They are to spread a scarlet cloth over them, cover it with fine leather, and fit its poles. ಅವೆಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.
9 "They will take a blue cloth, cover the lampstand of light, its lamps, tongs, trays, and all its oil vessels used to service it. “ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
10 They are to wrap it and all its vessels in fine leather and set it on the carrying frame. ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು.
11 "Over the golden altar they are to spread blue cloth, cover it with fine leather, and insert its poles. “ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಮುಚ್ಚಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.
12 They must take all the service utensils used in the sanctuary, put them in blue cloth, cover with fine leather, and place them on the pole. “ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವ ಸೇವೆಯ ಎಲ್ಲಾ ಸಲಕರಣೆಗಳನ್ನು ಅವರು ತೆಗೆದುಕೊಂಡು ನೀಲಿ ವಸ್ತ್ರದಿಂದ ಕಟ್ಟಿ, ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ, ಅಡ್ಡ ದಂಡಕ್ಕೆ ಕಟ್ಟಬೇಕು.
13 "They are to remove the ashes from the altar and spread a purple cloth over it. “ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ,
14 On it they are to put all its serving vessels—firepans, forks, shovels, basins, all the altar's vessels—then spread over it a fine leather covering and insert its poles. ಅದರ ಮೇಲೆ ಸೇವೆ ಮಾಡುವ ಎಲ್ಲಾ ಸಲಕರಣೆಗಳನ್ನು, ಅಗ್ನಿ ಪಾತ್ರೆಗಳನ್ನು, ಮುಳ್ಳುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಬಲಿಪೀಠದ ಎಲ್ಲಾ ಸಲಕರಣೆಗಳನ್ನು ಅದರ ಮೇಲಿಟ್ಟು, ಕಡಲುಹಂದಿಯ ಚರ್ಮಗಳ ಹೊದಿಕೆಯನ್ನು ಹಾಕಿ, ಹೊರುವ ಕೋಲುಗಳನ್ನು ಇಡಬೇಕು.
15 "When Aaron and his sons finish covering the holy things and all vessels of the holy place, and the camp sets out, Kohath's sons come to carry them, but they must not touch the holy things or die. These are Kohath's sons' burdens in the tent of meeting. “ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.
16 "Eleazar son of Aaron the priest is responsible for the lamp oil, fragrant incense, daily grain offering, and anointing oil—responsible for the whole tabernacle, everything in it, the sanctuary and its furnishings." “ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
17 Our Father spoke to Moses and Aaron, saying: ಇದಲ್ಲದೆ ಯೆಹೋವ ದೇವರು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
18 "Do not let the tribe of the Kohathite clans be cut off from among the Levites. “ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.
19 Do this for them so they live and not die when they approach the most holy things: Aaron and his sons must enter, assigning each his task and burden. ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು.
20 But they must not go in and look at the holy things, even for a moment, or they will die." ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”
21 Our Father spoke to Moses, saying: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
22 "Take a census of the sons of Gershon also, by their fathers' houses and their clans. “ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು.
23 Count those thirty to fifty years old who serve, doing work at the tent of meeting. ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳ ಪುರುಷರನ್ನೂ ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವುದಕ್ಕೂ, ಅದನ್ನು ಪೂರೈಸುವುದಕ್ಕೂ ಸೇರುವವರೆಲ್ಲರನ್ನೂ ಎಣಿಸು.
24 "This is the service of the clans of the Gershonites, in serving and in carrying: “ಗೇರ್ಷೋನ್ಯರ ಕುಟುಂಬಗಳ ಸೇವೆಯೂ ಜವಾಬ್ದಾರಿಕೆ ಯಾವುದೆಂದರೆ,
25 They carry the tabernacle's curtains, the tent of meeting, its covering, the fine-leather covering over it, and the screen for the tent of meeting's entrance, ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ
26 the courtyard curtains, the entrance screen for the courtyard gate, surrounding tabernacle and altar, their cords, and all their service equipment—they are to do whatever these need. ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಿಲಿನ ಪರದೆಯನ್ನೂ ಅವುಗಳ ಹಗ್ಗಗಳನ್ನೂ, ಅವುಗಳ ಸೇವೆಯ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
27 Aaron and his sons direct all the Gershonites' service—their carrying and duties; assign them all they must carry. ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
28 This is the service of the Gershonite clans at the tent of meeting, their duty under Ithamar son of Aaron the priest. ಗೇರ್ಷೋನ್ಯರ ಕುಟುಂಬದವರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯೂ ಇದೆ. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವುದು ಅವರಿಗೆ ಅಪ್ಪಣೆಯಾಗಿದೆ.
29 "As for the sons of Merari, you are to count them by their clans and their fathers' houses. “ಮೆರಾರೀಯ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ಎಣಿಸಬೇಕು.
30 Count everyone thirty to fifty years old who enters the service to work at the tent of meeting. ಮೂವತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದ ಸೇವೆ ಮಾಡುವುದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
31 This is their task, their service at the meeting tent: the frames, bars, posts, and bases of the tabernacle. ದೇವದರ್ಶನದ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವುದಕ್ಕೆ ನೀಡಿದ ಅಪ್ಪಣೆಯು ಏನೆಂದರೆ: ಗುಡಾರದ ಹಲಿಗೆಗಳೂ ಅದರ ಅಡ್ಡ ದಂಡ ಅದರ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ
32 The courtyard's pillars all around, with their bases, pegs, and cords, all their equipment and service—assign by name what each must carry. ಸುತ್ತಲಿರುವ ಅಂಗಳದ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ ಅದರ ಗೂಟಗಳೂ ಅವುಗಳ ಹಗ್ಗಗಳೂ ಅವುಗಳ ಎಲ್ಲಾ ಸಲಕರಣೆಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವುದಕ್ಕೆ ಕೊಟ್ಟ ಅಪ್ಪಣೆಯ ಸಲಕರಣೆಗಳನ್ನು ನೀವು ಹೆಸರೆಸರಾಗಿ ಎಣಿಸಬೇಕು.
33 This is the Merarite clans' service in the Tent of Meeting, under Ithamar son of Aaron the priest." ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.”
34 So Moses, Aaron, and the leaders of the congregation counted the sons of the Kohathites by their clans and their families, ಮೋಶೆಯೂ, ಆರೋನನೂ, ಸಭೆಯ ಮುಖ್ಯಸ್ಥನೂ, ಕೊಹಾತ್ಯರ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ
35 thirty to fifty years old, all who joined the service for work in the tent of meeting. ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರೂ ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿದರು.
36 Those counted by their clans were 2,750. ಕುಲಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 2,750 ಮಂದಿಯಾಗಿದ್ದರು.
37 The count of Kohathite clans, all who served in the tent of meeting, whom Moses and Aaron counted at our Father's command through Moses. ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಕೊಹಾತ್ಯರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ.
38 Those counted of the sons of Gershon, by their clans and their fathers' houses, ಗೇರ್ಷೋನನ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಕೆಯಾದರು.
39 from thirty to fifty years old, all who entered service work at the tent of meeting. ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ, ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ,
40 Those counted by their clans and their fathers' houses were 2,630. ಎಂದರೆ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ, ಅವರಲ್ಲಿ ಎಣಿಕೆಯಾದವರು 2,630 ಮಂದಿಯಾಗಿದ್ದರು.
41 These were counted from the Gershonite clans, all who served in the tent of meeting, whom Moses and Aaron counted at our Father's command. ಯೆಹೋವ ದೇವರ ಅಪ್ಪಣೆಯ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಗೇರ್ಷೋನನ ಪುತ್ರರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನದ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ.
42 Those counted of the clans of the sons of Merari, by their clans and their fathers' houses, ಮೆರಾರೀಯ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಕೆಯಾದವರು.
43 from age thirty to fifty, all who entered service for work in the tent of meeting, ಮೂವತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
44 those counted by their clans were 3,200. ಎಂದರೆ, ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 3,200 ಮಂದಿಯಾಗಿದ್ದರು.
45 These were counted of the clans of Merari's sons, whom Moses and Aaron counted at our Father's command through Moses. ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಪುತ್ರರ ಕುಲಗಳಲ್ಲಿ ಎಣಿಕೆಯಾದವರು ಇವರೇ.
46 All those whom Moses, Aaron, and Israel's leaders counted among the Levites, by clans and ancestral houses. ಮೋಶೆಯೂ, ಆರೋನನೂ, ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಲಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸಿದರು.
47 From thirty to fifty years old, everyone who served and carried loads in the tent of meeting. ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕಾಗಿಯೂ, ಹೊರುವುದಕ್ಕಾಗಿಯೂ ಬರುವವರೆಲ್ಲರೂ ಎಂದರೆ, ಅವರಲ್ಲಿ ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಎಂದರೆ, ಐವತ್ತು ವರ್ಷಗಳವರೆಗೆ
48 Those counted were 8,580. ಎಣಿಕೆಯಾದವರು 8,580 ಮಂದಿ.
49 By our Father's command, Moses appointed each to his service and burden, and counted them, as our Father commanded Moses. ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]