Skip to content
The Believer's Library

Biblica® Open Kannada Contemporary Version 2022

Numbers 5 OKCV

Show OKCV only
Verse × ×
1 Our Father spoke to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2 "Command the Israelites to send from the camp everyone with a skin disease, everyone with a discharge, and everyone unclean from a corpse. “ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
3 Send away both male and female; send them outside the camp, so they don't make their camp unclean, where I live among them." ಸ್ತ್ರೀ ಪುರುಷವೆಂಬ ವ್ಯತ್ಯಾಸವಿಲ್ಲದೆ ಎಲ್ಲರನ್ನು ಹೊರಹಾಕಬೇಕು. ನಾನು ಅವರ ಮಧ್ಯದಲ್ಲಿ ವಾಸಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಪಾಳೆಯದ ಹೊರಗೆ ಕಳುಹಿಸಬೇಕು,” ಎಂಬುದೆ.
4 The Israelites did this, sending them outside the camp; as our Father told Moses, the Israelites did. ಆಗ ಇಸ್ರಾಯೇಲರು ಹಾಗೆ ಮಾಡಿ, ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರ ಇಸ್ರಾಯೇಲರು ಮಾಡಿದರು.
5 Then our Father spoke to Moses: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
6 "Tell Israel's people: When a man or woman commits any human sin, betraying me, that person is guilty. “ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ.
7 They must confess the sin they committed, repay in full for the wrong, add a fifth, and give it to the one they wronged. ಅವನು ಮಾಡಿದ ಪಾಪವನ್ನು ಅರಿಕೆ ಮಾಡಬೇಕು. ಅವನ ಅಪರಾಧದ ಬದಲುಕೊಟ್ಟು, ಅದರ ಸಂಗಡ ಅದರ ಐದನೆಯ ಪಾಲನ್ನು ಕೂಡಿಸಿ, ಯಾರಿಗೆ ಅಪರಾಧ ಮಾಡಿದರೋ, ಅವರಿಗೆ ಕೊಡಬೇಕು.
8 But if that person has no relative to receive restitution, it belongs to me and goes to the priest, plus the ram of atonement made for the guilty one. ಆದರೆ ಅಪರಾಧಕ್ಕೆ ಬದಲು ಕೊಡುವುದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಅದು ಯೆಹೋವ ದೇವರಿಗೆ ಸೇರಬೇಕು. ಅದು ದೋಷಪರಿಹಾರಕ್ಕಾಗಿ ಅರ್ಪಿಸಲಾಗುವ ಪ್ರಾಯಶ್ಚಿತ್ತದ ಟಗರು, ಇವೆರಡೂ ಯಾಜಕನಿಗೆ ಸೇರಬೇಕು.
9 Every contribution among all Israel's holy gifts brought to the priest belongs to him. ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
10 Everyone's holy gifts remain their own; what one gives the priest belongs to the priest." ಪ್ರತಿ ಮನುಷ್ಯನ ಪರಿಶುದ್ಧವಾದ ಕಾಣಿಕೆಗಳು ಅವನದಾಗಿಯೇ ಆಗಿರುತ್ತವೆ. ಆದರೆ ಯಾಜಕನಿಗೆ ಕೊಟ್ಟದ್ದು ಯಾಜಕರದಾಗುತ್ತದೆ,’ ” ಎಂದು ಹೇಳಿದರು.
11 Then our Father spoke to Moses: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
12 "Speak to the Israelites and tell them: If any man's wife goes astray and is unfaithful to him, “ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ,
13 if another man sleeps with her, hidden from her husband, and she goes undetected though unclean—no witness against her, not caught in the act, ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು, ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬುದು ಗುಪ್ತವಾಗಿದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ, ಅವಳನ್ನು ಹಿಡಿಯದೇ ಇದ್ದರೆ,
14 a spirit of jealousy comes over the husband, and he is jealous of his wife, who is unclean; or a spirit of jealousy comes over him, and he is jealous though she is not unclean. ಆಕೆ ಅಶುದ್ಧಳಾಗಿದ್ದಾಳೆಂದು ಆಕೆಯ ಮೇಲೆ ಅಸೂಯೆಗೊಂಡು ಸಂಶಯಪಟ್ಟರೆ, ಆಕೆ ಅಶುದ್ಧಳಾಗದಿದ್ದರೂ, ಆಕೆಯೊಡನೆ ಅಸೂಯೆ ಸಂಶಯ ಹೊಂದಿದರೆ, ಆಗ
15 The man must bring his wife to the priest, along with her offering: about two quarts of barley flour. He must pour no oil on it and put no frankincense on it, because it is a grain offering of jealousy, a grain offering of remembrance, recalling guilt. ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್ ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
16 The priest is to bring her near and set her before our Father. “ ‘ಯಾಜಕನು ಅವಳನ್ನು ಸಮೀಪಕ್ಕೆ ಕರೆದು, ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಬೇಕು.
17 The priest is to take holy water in a clay jar, take dust from the tabernacle floor, and put it into the water. ಆಗ ಯಾಜಕನು ಪವಿತ್ರ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದುಕೊಳ್ಳಬೇಕು. ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತೆಗೆದುಕೊಂಡು, ಆ ನೀರಿನೊಳಗೆ ಹಾಕಬೇಕು.
18 The priest is to stand the woman before our Father, unbind her hair, and put in her hands the grain offering of remembrance—the jealousy offering—while he holds the bitter, curse-bringing water. ಯಾಜಕನು ಆ ಸ್ತ್ರೀಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಿ, ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು, ಅವಳ ಕೈಗಳಲ್ಲಿ ಸಂಶಯ ಸೂಚಿಸುವ ಕಾಣಿಕೆಯಾದ ನೈವೇದ್ಯದ ಹಿಟ್ಟನ್ನು ಇಡಬೇಕು. ಯಾಜಕನ ಕೈಯಲ್ಲಿ ಶಾಪತರುವ ಕಹಿಯಾದ ನೀರು ಇರಬೇಕು.
19 The priest is to put her under oath and say to her: 'If no man has slept with you, and you have not gone astray and made yourself unclean under your husband's authority, be free from this bitter water that brings the curse. ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ.
20 But if you strayed under your husband, made yourself unclean, and a man besides your husband slept with you.' ಆದರೆ ನೀನು ನಿನ್ನ ಗಂಡನನ್ನು ಬಿಟ್ಟು, ಜಾರತ್ವ ಮಾಡಿ ಅಶುದ್ಧಳಾಗಿದ್ದರೆ, ನಿನ್ನ ಗಂಡನನ್ನು ಬಿಟ್ಟು, ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ,
21 Then the priest is to bind the woman by this curse-oath, saying: May the Father turn you into a curse and a disgrace among your people, as he makes your thigh shrivel and your belly swell. ಯೆಹೋವ ದೇವರು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವನು. ನಿನ್ನ ಜನರು ನಿನ್ನನ್ನು ಶಪಿಸುವರು, ತಿರಸ್ಕರಿಸುವರು.
22 May this curse-bringing water enter your body, swelling your belly and wasting your thigh. Then the woman must say, 'Amen, amen.' ಶಪಿಸುವಂಥ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ತೊಡೆಯನ್ನು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ ಎಂದು ಹೇಳಬೇಕು, ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣ ಮಾಡಿಸಬೇಕು.” “ ‘ಅದಕ್ಕೆ ಆ ಸ್ತ್ರೀಯು, “ಆಮೆನ್, ಆಮೆನ್,” ಎಂದು ಹೇಳಬೇಕು.
23 "Then the priest writes these curses on a scroll and washes them off into the bitter water. “ ‘ಇದಲ್ಲದೆ ಯಾಜಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ತೊಳೆದು,
24 He is to make the woman drink the bitter, cursing water; the cursing water will enter her, causing bitter suffering. ಆ ಸ್ತ್ರೀಗೆ ಶಪಿಸುವಂಥಹ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವುದು.
25 The priest takes the jealousy grain offering from her hand, waves it before our Father, and brings it to the altar. ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು.
26 The priest takes a handful of the grain offering, its memorial portion, burns it on the altar, then makes the woman drink the water. ಆಗ ಯಾಜಕನು ಜ್ಞಾಪಕಾರ್ಥವಾಗಿ ಕಾಣಿಕೆಯಿಂದ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಸುಟ್ಟು, ಸ್ತ್ರೀಗೆ ಆ ನೀರನ್ನು ಕುಡಿಸಬೇಕು.
27 After he makes her drink the water, if she has made herself unclean and betrayed her husband, the curse-bringing water will enter her, causing bitter suffering: her belly will swell, her thigh wither, and she will become a curse among her people. ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ, ಶಪಿಸುವ ನೀರು ಆಕೆಯೊಳಗೆ ಸೇರಿ ಕಹಿಯಾಗುವುದು. ಅವಳ ಹೊಟ್ಟೆ ಉಬ್ಬಿ, ಅವಳ ತೊಡೆ ಕ್ಷೀಣವಾಗುವುದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.
28 But if the woman has not made herself unclean and is clean, she is cleared and will conceive children. ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು.
29 "This is the law of jealousy: when a wife under her husband strays and makes herself unclean, “ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,
30 or when a spirit of jealousy seizes a man and he is jealous of his wife: he is to stand her before our Father, and the priest is to apply this whole law to her. ಅಥವಾ ಪುರುಷನು ಸಂಶಯಗೊಂಡು ಅವನು ತನ್ನ ಹೆಂಡತಿ ಮೇಲೆ ರೋಷಗೊಂಡಿದ್ದರೆ, ಅವನು ತನ್ನ ಹೆಂಡತಿಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಲಿ. ಆಗ ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆಗಳ ಪ್ರಕಾರ ಮಾಡುವನು.
31 The husband will be free from guilt, but the woman will answer for her own sin." ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]