Skip to content
The Believer's Library

Biblica® Open Kannada Contemporary Version 2022

Numbers 6 OKCV

Show OKCV only
Verse × ×
1 Then our Father spoke to Moses: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 "Speak to the Israelites and say to them: When a man or woman makes a special vow, a Nazirite vow, to set themselves apart to the Father. “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,
3 They must not drink wine or strong drink, nor vinegar from either, nor any grape juice, nor eat grapes fresh or dried. ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.
4 During their separation they must eat nothing from the grapevine, from seeds to skin. ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು.
5 "During their vow of separation, no razor touches their head. Until it's complete, they stay holy to the Father; they must let their hair grow. “ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.
6 "Throughout their time of separation to the Father they must not go near a dead body. “ ‘ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳಲ್ಲೆಲ್ಲಾ ಸತ್ತವರ ಬಳಿಗೆ ಬರಬಾರದು.
7 They must not make themselves unclean even for father, mother, brother, or sister when they die, since their dedication crown to our Father is on their head. ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ.
8 Throughout their time of separation they are holy to the Father. ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು.
9 "If someone dies very suddenly beside them, making their dedicated head unclean, they must shave their head on the day of their cleansing—shave it on the seventh day. “ ‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು.
10 On the eighth day they must bring two turtledoves or two young pigeons to the priest at the meeting tent's entrance. ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
11 The priest must offer one as a sin offering, the other as a burnt offering, and make atonement for them, because they sinned by being near the dead body. That same day they must rededicate their head. ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು.
12 They must rededicate to the Father their days of separation and bring a year-old male lamb as a guilt offering; the earlier days don't count—their separation was made unclean. ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.
13 "This is the law of the Nazirite: when their days of separation end, they must come to the tent of meeting's entrance. “ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು.
14 They must bring the Father their offering: one flawless year-old male lamb as a burnt offering, one flawless year-old ewe lamb as a sin offering, and one flawless ram as a peace offering, ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.
15 with a basket of unleavened bread—loaves of fine flour mixed with oil, unleavened wafers coated with oil—plus their grain offering and drink offerings. ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.
16 The priest must present them before the Father and offer the sin offering and the burnt offering. “ ‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು.
17 He must offer the ram as a peace offering to the Father with the basket of bread without yeast, and offer its grain and drink offerings. ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು.
18 At the tent of meeting's entrance, the Nazirite must shave their dedicated head, take the hair of dedication, and put it on the fire under the peace offering. “ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
19 The priest takes the boiled ram's shoulder, one unleavened loaf and wafer from the basket, and puts them in the Nazirite's hands after the hair of dedication is shaved off. “ ‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು.
20 The priest waves them as a wave offering before our Father—a holy portion for the priest, with the breast that is waved and the thigh that is contributed. Then the Nazirite may drink wine. ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.
21 "This is the law of the Nazirite who vows an offering to our Father for their separation, besides whatever else they can afford. They must do according to their vow, per the law of their separation." “ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ”
22 Then our Father spoke to Moses: ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
23 "Tell Aaron and his sons: This is how you are to bless the Israelites. Say to them: “ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:
24 'May your Father bless you and keep you; “ ‘ “ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ, ನಿಮ್ಮನ್ನು ಕಾಪಾಡಲಿ.
25 may your Father make his face shine upon you and be gracious to you; ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, ನಿಮಗೆ ಕೃಪೆ ತೋರಿಸಲಿ.
26 may your Father look on you with favor and give you peace.' ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’
27 "So they will put my name on the Israelites, and I will bless them." “ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]